ಬಜೆಟ್‌ನಲ್ಲಿ ಹೆಚ್ಚು ಅನುದಾನ: ಸಿಎಂ
Team Udayavani, Jun 29, 2018, 11:38 AM IST
ಬೆಂಗಳೂರು: “ಮೂಳೆ ಮಜ್ಜೆ ಕಸಿ’ (ಬೋನ್ ಮ್ಯಾರೋ ಟ್ರಾನ್ಸ್‌ಪ್ಲಾಂಟ್) ಚಿಕಿತ್ಸಾ ವ್ಯವಸ್ಥೆ ಅಳವಡಿಸಿಕೊಳ್ಳಲು ಕಿದ್ವಾಯಿ ಸಂಸ್ಥೆಗೆ ಅಗತ್ಯವಿರುವ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದ್ದು, ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡುವುದಾಗಿ ಇದೇ ವೇಳೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
“ಮೂಳೆ ಮಜ್ಜೆ ಸಮಸ್ಯೆಯಿಂದ ಬಳಲುವವರ ನೋವು ಕಣ್ಣಾರೆ ಕಂಡಿದ್ದೇನೆ. ಚಿಕ್ಕ ಮಕ್ಕಳಲ್ಲೂ ಈ ಸಮಸ್ಯೆ ಇತ್ತಿಚಿಗೆ ಹೆಚ್ಚಾಗಿದೆ. ಮೂಳೆ ಮಜ್ಜೆ ಕಸಿ ಮಾಡಬೇಕಾದರೆ ಒಬ್ಬ ರೋಗಿಗೆ 30 ರಿಂದ 35 ಲಕ್ಷ ರೂ. ಬೇಕು. ಬಡವರಿಂದ ಈ ವೆಚ್ಚ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಕಡಿಮೆ ದರದಲ್ಲಿ ಚಿಕಿತ್ಸೆ ಸಿಗಲು ಮೂಳೆ ಮಜ್ಜೆ ಕಸಿ ಚಿಕಿತ್ಸಾ ವ್ಯವಸ್ಥೆಯನ್ನು ಕಿದ್ವಾಯಿ ಸಂಸ್ಥೆ ಅಳವಡಿಸಿಕೊಳ್ಳಲಿ.
ಇದಕ್ಕೆ ಬೇಕಾಗುವ ಹಣಕಾಸು ಸರ್ಕಾರ ನೀಡಲಿದೆ. ಈ ಬಗ್ಗೆ ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ್ದೇನೆ. ಬಜೆಟ್‌ನಲ್ಲಿ ಅನುದಾನದ ಘೋಷಣೆ ಮಾಡುತ್ತೇನೆ,’ ಎಂದರು. ಜತೆಗೆ “ಆರೋಗ್ಯ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಆರ್ಥಿಕ ನೆರವು ನೀಡುತ್ತಿದೆ. ರಾಜ್ಯ ಸರ್ಕಾರ ಸಹ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Crime: ವಾಟರ್ ಹೀಟರ್‌ನಿಂದ ಸ್ನೇಹಿತನ ಕೊಲೆಗೈದವ ಸೆರೆ
State Govt: ಸರ್ಕಾರದ ಬಳಿಯೇ ಇದೆ ಪಂಚಾಯತ್ ಅಧಿಕಾರ!
Fraud Case: ಉದ್ಯಮಿಗೂ 5 ಕೋಟಿ ರೂ. ವಂಚಿಸಿದ್ದ ಐಶ್ವರ್ಯ: ಆರೋಪ
Bengaluru: ನಕಲಿ ದಾಖಲೆ ನೀಡಿ ಹುದ್ದೆ ಪಡೆದ ಆರೋಪದಡಿ ಪಿಎಸ್‌ಐ ವಿರುದ್ಧ ಕೇಸ್
Fraud Case: ಸಾಗರದ ಚಿನ್ನದಂಗಡಿಗೂ 20 ಲಕ್ಷ ವಂಚಿಸಿದ್ದ ವರ್ತೂರು ಆಪ್ತೆ ಶ್ವೇತಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.