15ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಬಿಜೆಪಿ ತೆಕ್ಕೆಗೆ?
Team Udayavani, Oct 14, 2017, 6:00 AM IST
ಬೆಂಗಳೂರು/ಉಡುಪಿ: ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸುವ ಉದ್ದೇಶದೊಂದಿಗೆ ಈ ಬಾರಿ ಚುನಾವಣಾ ಪೂರ್ವದಲ್ಲೇ ರಾಜ್ಯ ಬಿಜೆಪಿ ಆಪರೇಷನ್ ಕಮಲಕ್ಕೆ ಕೈಹಾಕುತ್ತಿದ್ದು, ಪಕ್ಷ ಹಮ್ಮಿಕೊಂಡಿರುವ ನವಕರ್ನಾಟಕ ಪರಿವರ್ತನಾ ರಥಯಾತ್ರೆ ಬಳಿಕ ಪಕ್ಷಾಂತರ ಪರ್ವಕ್ಕೆ ವೇದಿಕೆ ಸಿದ್ಧಪಡಿಸುತ್ತಿದೆ.
ಮೂಲಗಳ ಪ್ರಕಾರ ಕೆಲವು ಸಚಿವರೂ ಸೇರಿ 15ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ ಬರಲು ಸಿದ್ಧವಾಗಿದ್ದು, ಈ ಪೈಕಿ ಬಹುತೇಕರು ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್‌ನಲ್ಲಿರುವವರು. ಅದರಲ್ಲಿಯೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಎರಡು ಜಿಲ್ಲೆಗಳ ಪ್ರಭಾವಿ ಸಚಿವರು ಮತ್ತು ಒಂದು ಜಿಲ್ಲೆಯ ಸಚಿವ ಸಮಾನ ಘನತೆಯ ವ್ಯಕ್ತಿಗಳು ಈ ಗುಂಪಿನಲ್ಲಿದ್ದಾರೆ. ಉಳಿದಂತೆ ಹಳೇ ಮೈಸೂರು ಭಾಗದ ಇಬ್ಬರು ಮತ್ತು ಉತ್ತರ ಕರ್ನಾಟಕ ಭಾಗದ ಡಜನ್‌ನಷ್ಟು ಶಾಸಕರನ್ನು ಪಕ್ಷಕ್ಕೆ ಕರೆತರಲು ಬಿಜೆಪಿ ಮುಂದಾಗಿದೆ.
ಅನ್ಯ ಪಕ್ಷಗಳಿಂದ, ಅದರಲ್ಲೂ ಕಾಂಗ್ರೆಸ್‌ನಲ್ಲಿ ಪ್ರಸ್ತುತ ಶಾಸಕರಾಗಿರುವವರೇ ಬಿಜೆಪಿ ಸೇರಲು ಮುಂದಾಗಿದ್ದಾರೆ. ಹಲವರು ಪಕ್ಷದ ನಾಯಕರನ್ನು ಈಗಾಗಲೇ ಸಂಪರ್ಕಿಸಿದ್ದಾರೆ. ಆದರೆ, ಈಗಲೇ ತಾವು ಬಿಜೆಪಿ ಸೇರುವ ಸುಳಿವು ನೀಡಿದರೆ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಬರುವ ಅನುದಾನ ಕಡಿಮೆಯಾಗುತ್ತದೆಂಬ ಕಾರಣಕ್ಕೆ ತಮ್ಮ ಮುಂದಿನ ನಡೆ ಬಹಿರಂಗಪಡಿಸುತ್ತಿಲ್ಲ. ಜನವರಿ ಅಂತ್ಯ ಅಥವಾ ಫೆಬ್ರವರಿ ವೇಳೆಗೆ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎನ್ನುತ್ತಾರೆ ಬಿಜೆಪಿಯ ಹಿರಿಯ ನಾಯಕರೊಬ್ಬರು.
ಆದರೆ, ಬಂದವರೆಲ್ಲರಿಗೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಖಾತರಿ ಸಿಗುವುದಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆಯಂತೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅನ್ಯ ಪಕ್ಷಗಳಿಂದ ಬಿಜೆಪಿ ಸೇರಲು ಮುಂದಾಗಿರುವವರ ಕ್ಷೇತ್ರಗಳಲ್ಲಿ ಅವರ ಬಗ್ಗೆಯೂ ಸಮೀಕ್ಷೆ ನಡೆಸಲಾಗುತ್ತಿದೆ. ಈ ಸಮೀಕ್ಷೆ ನಂತರವೇ ಎಲ್ಲರಿಗೂ ಟಿಕೆಟ್ ಖಾತರಿಯಾಗುತ್ತದೆ. ಈ ಸಮೀಕ್ಷೆ ಜನವರಿ ವೇಳೆ ಮುಗಿಯಲಿದೆ. ನಂತರ ಪಕ್ಷ ಸೇರ್ಪಡೆ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ ಎಂದೂ ಮೂಲಗಳು ತಿಳಿಸಿವೆ.
ಶಾ ಬಂದು ಹೋದ ನಂತರ ಬೇಡಿಕೆ ಹೆಚ್ಚು:
ಕಳೆದ ಆಗಸ್ಟ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಮೇಲೆ ಬಿಜೆಪಿ ಹೋಗುತ್ತಿರುವ ವೇಗ ಮತ್ತು ಆ ಪಕ್ಷದಲ್ಲಿ ಉಂಟಾಗಿರುವ ಒಗ್ಗಟ್ಟಿನಿಂದಾಗಿ ಈ ಹಿಂದೆ ಪಕ್ಷ ಸೇರಲು ಹಿಂದೆ ಸರಿದವರು ಕೂಡ ಈಗ ಬಿಜೆಪಿಯತ್ತ ವಾಲುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಿಂದ ಕೆಲವು ಶಾಸಕರು ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಹಳೆಯ ಕಾಂಗ್ರೆಸಿಗರನ್ನು ದೂರವಿಟ್ಟು ತಮ್ಮೊಂದಿಗೆ ಕಾಂಗ್ರೆಸ್ ಸೇರಿದವರಿಗೆ ಆದ್ಯತೆ ನೀಡುತ್ತಿರುವುದು ಮೂಲ ಕಾಂಗ್ರೆಸಿಗರಲ್ಲಿ ಬೇಸರ ತರಿಸಿದೆ. ಇನ್ನೊಂದೆಡೆ ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಹೆಚ್ಚುತ್ತಿರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ಆರೋಪಗಳೂ ಕೆಲವು ಶಾಸಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಬಗ್ಗೆ ಮುಂದುವರಿದ ಮೆಚ್ಚುಗೆ ರಾಜ್ಯದಲ್ಲಿ ಪ್ರಭಾವ ಬೀರಿದರೆ ಬಿಜೆಪಿ ಅಧಿಕಾರಕ್ಕೆ ಬರಬಹುದು. ಬಹುತೇಕ ಜನವರಿ ವೇಳೆಗೆ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಹೀಗಾಗಿ ಜನವರಿ ಅಂತ್ಯದ ವೇಳೆ ನಿರ್ಧಾರ ಕೈಗೊಳ್ಳಲು ಶಾಸಕರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಂತೆ ಕಾಂಗ್ರೆಸ್‌ನ ಸ್ಥಳೀಯ ನಾಯರನ್ನು ಸಂಪರ್ಕಿಸಿದಾಗ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಿಂದ ಏಕೆ ಬಿಜೆಪಿಗೆ ಹೋಗಬೇಕು ಎಂದು ಕೆಲವರು ಪ್ರಶ್ನಿಸಿದರೆ, ಇನ್ನು ಕೆಲವರು ಮೌನಕ್ಕೆ ಶರಣಾಗಿದ್ದಾರೆ. ಬಿಜೆಪಿ ಪ್ರಮುಖರನ್ನು ಸಂಪರ್ಕಿಸಿದಾಗ, ರಾಜ್ಯ ನಾಯಕರೆಡೆ ಕೈತೋರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.