Mahadevpur ಠಾಣೆ ಆವರಣದಲ್ಲಿದ್ದ 60 ಕ್ಕೂ ಹೆಚ್ಚು ವಾಹನಗಳು ಭಸ್ಮ
Team Udayavani, Apr 13, 2023, 7:06 PM IST
ಮಹದೇವಪುರ: ಜಪ್ತಿ ಮಾಡಿ ವಶಪಡಿಸಿಕೊಂಡಿದ್ದ ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ಅಂಟಿಕೊಂಡ ಪರಿಣಾಮ ಆವಲಹಳ್ಳಿ ಪೊಲೀಸ್ ಠಾಣಾ ಆವರಣದಲ್ಲಿದ್ದ ಸುಮಾರು 60 ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಗುರುವಾರ ನಡೆದಿದೆ.
ಮಧ್ಯಾಹ್ನ ಸುಮಾರು 12.30 ರ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ವಾಹನಗಳಲ್ಲಿ ಕಾಣಿಸಿಕೊಂಡ ಬೆಂಕಿಯು ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಗೆಯಾಯಿತು. ಬೆಂಕಿಯನ್ನು ನಂದಿಸಲು ಹೊಸಕೋಟೆ ಅಗ್ನಿ ಶಾಮಕ ಸಿಬಂದಿ ಸತತ ಎರಡು ಗಂಟೆ ಕಾರ್ಯಚರಣೆ ಮಾಡಿ ಮೂರು ವಾಹನಗಳಲ್ಲಿ ಬೆಂಕಿಯ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸ್ ಠಾಣೆ ಹಿಂಭಾಗ 3 ಎಕರೆ ಜಾಗದಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡು ಗಾಳಿ ಹೆಚ್ಚಾಗಿರುವುದರಿಂದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿ ಪೊಲೀಸ್ ಠಾಣಾ ಆವರಣದಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಬೆಂಕಿ ಅಂಟಿಕೊಂಡು 8 ಆಟೋ, 8 ಕಾರು,45ಬೈಕ್ ಗಳು ಸೇರಿ ಸುಮಾರು 60 ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ಐಜಿ ರವಿಕಾಂತೆಗೌಡ ಮಾಹಿತಿ ನೀಡಿದರು.
ಬೆಂಕಿ ಯಾವುದರಿಂದ ಬಂತು ಎಲ್ಲಿಂದ ಬಂತು ಎಂದು ತನಿಖೆ ಮಾಡಲು ಪೋಲಿಸರಿಗೆ ಸೂಚಿಸಲಾಗಿದೆ ಎಂದರು.ಪೊಲೀಸ್ ಠಾಣೆಗೆ ಅಥವಾ ಠಾಣೆ ಯ ಸ್ವತ್ತು,ದಾಖಲೆ ಗಳಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ . ತನಿಖೆ ಮಾಡಿದ ನಂತರ ಬೆಂಕಿ ಎಲ್ಲಿಂದ ಬಂತು ಯಾವುದರಿಂದ ಬಂತು ಮುಂದೆ ಈ ರೀತಿಯ ಅನಾಹುತ ಆಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಠಾಣೆ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.