ರಸ್ತೆ ಅಪಘಾತದಲ್ಲಿ ತಾಯಿ, ಮಗಳು ಸಾವು

Team Udayavani, Oct 24, 2017, 12:04 PM IST

accident.jpg

ಬೆಂಗಳೂರು: ಲಾರಿ ಹರಿದು ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಣಸವಾಡಿಯ ಬಾಬುಸಾಬ್‌ಪಾಳ್ಯ ಬಸ್‌ ನಿಲ್ದಾಣ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ತಮಿಳುನಾಡು ಮೂಲದ ವಲ್ಲಚ್ಚಿ (70) ಮತ್ತು ಇವರ ಪುತ್ರಿ ವಸಂತ (49) ಮೃತರು. ಕೃತ್ಯವೆಸಗಿದ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು, ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನ ತಿರುವಣ್ಣಾಮಲೈ ಮೂಲದ ಮೃತರು ಕೆಲ ವರ್ಷಗಳಿಂದ ಇಲ್ಲಿನ ಬಾಬುಸಾಬ್‌ಪಾಳ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾರೆ. ಮೃತ ವಸಂತ ಅವರ ಪತಿ ತಮಿಳುನಾಡಿನಲ್ಲೇ ವಾಸಿಸುತ್ತಿದ್ದು, ವಸಂತ ಅವರು ಮಕ್ಕಳೊಂದಿಗೆ ನಗರದಲ್ಲಿ ನೆಲೆಸಿದ್ದಾರೆ. ಜೀವನ ನಿರ್ವಹಣೆಗಾಗಿ ಮನೆ ಕೆಲಸ ಮಾಡಿಕೊಂಡಿದ್ದು, ಇವರ ಪುತ್ರ ಎಲೆಕ್ಟ್ರಿಷಿಯನ್‌ ಕೆಲಸ ಮಾಡುತ್ತಿದ್ದಾರೆ.

ದೀಪಾವಳಿ ಹಬ್ಬದ ಸಂಭ್ರಮಾಚರಣೆಗೆ ವಸಂತ ಮತ್ತು ಅವರ ತಾಯಿ ವಲ್ಲಚ್ಚಿ ತಮಿಳುನಾಡಿನ ತಿರುವಣ್ಣಾಮಲೈಗೆ ತೆರಳಿದ್ದರು. ಇಲ್ಲಿಂದ ಸೋಮವಾರ ಬೆಳಗಿನ ಜಾವ ನಗರಕ್ಕೆ ವಾಪಸ್‌ ಆಗಿದ್ದು, ಬಾಬುಸಾಬ್‌ಪಾಳ್ಯದಲ್ಲಿ ಬಸ್‌ ಇಳಿದಿದ್ದಾರೆ. ಬಸ್‌ ನಿಲ್ದಾಣ ಸಮೀಪವೇ ಸ್ಕೈವಾಕ್‌ ಇದೆ.

ಆದರೆ ತಾಯಿ ವಲ್ಲಚ್ಚಿ ಅವರಿಗೆ ವಯಸ್ಸಾಗಿದ್ದು, ಸ್ಕೈವಾಕ್‌ ಹತ್ತಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಮಗಳು ವಸಂತಾ ತಾಯಿಯ ಕೈ ಹಿಡಿದುಕೊಂಡು ರಸ್ತೆ ದಾಟುತ್ತಿದ್ದರು. ಈ ವೇಳೆ ಕೆ.ಆರ್‌.ಪುರ ಕಡೆಯಿಂದ ಬಂದ ಲಾರಿ ತಾಯಿ, ಮಗಳಿಗೆ ಡಿಕ್ಕಿಹೊಡೆದಿದೆ. ಪರಿಣಾಮ ಲಾರಿಯ ಮಂದಿನ ಮತ್ತು ಹಿಂದಿನ ಚಕ್ರಗಳಡಿ ಸಿಲುಕಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತವೆಸಗಿದ ಲಾರಿ ಮಹಾರಾಷ್ಟ್ರಕ್ಕೆ ಸೇರಿದೆ ಎಂಬ ಮಾಹಿತಿಯಿದ್ದು, ಚಾಲಕನ‌ ಪತ್ತೆ ಕ್ರಮಕೈಗೊಳ್ಳಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬಾಣಸವಾಡಿ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

5

Arrested: ಫಾರೆಸ್ಟ್‌ ಗಾರ್ಡ್‌ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Crime: ಹೆತ್ತ ತಾಯಿಯನ್ನೇ ಕೊಂದ ಮಗ!

Crime: ಹೆತ್ತ ತಾಯಿಯನ್ನೇ ಕೊಂದ ಮಗ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.