ಕುಡಿದು ಕಿರುಕುಳ ನೀಡುತ್ತಿದ್ದ ಪುತ್ರನಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದ ತಾಯಿ
Team Udayavani, Jul 18, 2023, 1:32 PM IST
ಬೆಂಗಳೂರು: ಕುಡಿದು ಬಂದು ನಿತ್ಯ ಕಿರಿಕುಳ ನೀಡುತ್ತಿದ್ದ ಪುತ್ರನನ್ನು ತಾಯಿಯೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೈದಿರುವ ಘಟನೆ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಜನತಾ ಕಾಲೋನಿ ನಿವಾಸಿ ಚಾಂದ್ ಪಾಷಾ(40) ಕೊಲೆಯಾದ ಪುತ್ರ. ಕೃತ್ಯ ಎಸಗಿದ ಆತನ ತಾಯಿ ಸುಫಿಯಾಬಿ(60) ಎಂಬಾಕೆ ಯನ್ನು ಬಂಧಿಸಲಾಗಿದೆ.
ಚಿಕ್ಕಬಾಣವಾರದ ಜನತಾ ಕಾಲೋನಿ ನಿವಾಸಿ ಸುಫಿಯಾಬಿರ ಎರಡನೇ ಪುತ್ರ ಚಾಂದ್ ಪಾಷಾನಿಗೆ ಮದುವೆಯಾಗಿದ್ದು, ಮಕ್ಕಳು ಇದ್ದಾರೆ. ಆದರೆ, ಯಾವುದೇ ಕೆಲಸಕ್ಕೆ ಹೋಗದೆ ನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದ. ಹೀಗಾಗಿ ಆತನ ಪತ್ನಿ, ಮಕ್ಕಳ ಜತೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಆದರಿಂದ ಚಾಂದ್‌ಪಾಷಾ ತಾಯಿ ಜತೆ ವಾಸವಾಗಿದ್ದಾನೆ. ಯಾವುದೇ ಕೆಲಸಕ್ಕೆ ಹೋಗದೆ ನಿತ್ಯ ಕುಡಿದು ಬಂದು ಗಲಾಟೆ ಮಾಡುವುದು, ತಾಯಿ ಮೇಲೆಯೇ ಹಲ್ಲೆ ನಡೆಸುತ್ತಿದ್ದ. ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಕುಡಿದು ಬಂದು ಮನೆ ಬಾಗಿಲು ಬಳಿ ಕುಳಿತು ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡುತ್ತಿದ್ದ. ಅದರಿಂದ ಆಕ್ರೋಶಗೊಂಡ ಸುಫಿಯಾಬಿ, ಮನೆಯಲ್ಲಿದ್ದ ಸಿಮೇಎಣ್ಣೆ ತಂದು ಆತನ ಮೈಮೇಲೆ ಸುರಿದು, ಬೆಂಕಿ ಹಚ್ಚಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಚಾಂದ್‌ಪಾಷಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಸುಫಿಯಾಬಿಯನ್ನು ಬಂಧಿಸಿದ್ದು, ಚಾಂದ್‌ಪಾಷಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.