Bangalore: ಅಡುಗೆ ಅನಿಲ ಸೋರಿಕೆ ಮಾಡಿಕೊಂಡು ಮಗನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ
Team Udayavani, Jan 4, 2024, 11:58 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ತಾಯಿಯೊಬ್ಬಳು ತನ್ನ ಮಗನೊಂದಿಗೆ ಅಡುಗೆ ಅನಿಲ ಸೋರಿಕೆ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವೈಟ್ ಫೀಲ್ಡ್ ಬಳಿಯ ನಾಗೊಂಡನಹಳ್ಳಿ ಬಳಿ ಬುಧವಾರ ನಡೆದಿದೆ.
ಈ ವಿಚಾರ ತಿಳಿದ ಅಗ್ನಿಶಾಮಕ ದಳ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ಯಲ್ಲಿ ಮನೆಯ ಬಾಗಿಲು ಮುರಿದು ತಾಯಿ ಮತ್ತು ಮಗನನ್ನು ರಕ್ಷಣೆ ಮಾಡಲಾಗಿದೆ. ನಾಗೊಂಡನಹಳ್ಳಿಯ ಅಪಾರ್ಟ್ ಮೆಂಟ್‌ವೊಂದರ ನಿವಾಸಿ ಪ್ರಭು ಎಂಬುವರ ಪತ್ನಿ ತಮಿಳು ಸೆಲ್ವಿ (37) ಮತ್ತು ಆಕೆಯ ಐದು ವರ್ಷದ ಪುತ್ರ ಅಶ್ವತ್ಥನನ್ನು ರಕ್ಷಿಸಲಾಗಿದೆ.
ತಮಿಳುನಾಡು ಮೂಲದ ಪ್ರಭು ಮತ್ತು ತಮಿಳು ಸೆಲ್ವಿ ದಂಪತಿ ಮಗನ ಜತೆ ಅಪಾರ್ಟ್‌ಮೆಂಟ್ ನಲ್ಲಿ ವಾಸವಾಗಿ ದ್ದಾರೆ. ಕಳೆದ ಎರಡು ದಿನಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಅದರಿಂದ ಬೇಸರ ಗೊಂಡ ತಮಿಳು ಸೆಲ್ವಿ, ಬುಧವಾರ ಬೆಳಗ್ಗೆ 9 ಗಂಟೆಗೆ ಪತಿ ಕೆಲಸಕ್ಕೆ ಹೋದಾಗ, ಫ್ಲ್ಯಾಟ್ ಬಾಗಿಲು ಹಾಗೂ ಕಿಟಕಿಗಳನ್ನು ಲಾಕ್ ಮಾಡಿಕೊಂಡು, ಅಡುಗೆ ಸಿಲಿಂಡರ್‌ನ ಅನಿಲವನ್ನು ತಾನೇ ಸೋರಿಕೆ ಮಾಡಿಕೊಂಡಿದ್ದಾರೆ. ಕೆಲ ಹೊತ್ತಿನ ಬಳಿಕ ಮನೆಗೆ ಬಂದ ಪ್ರಭು, ಮನೆಯ ಕಾಲಿಂಗ್ ಬೆಲ್ ಒತ್ತಿದ್ದಾರೆ. ಆದರೆ, ಒಳಗಡೆಯಿಂದ ಯಾವುದೇ ಸ್ಪಂದನೆ ಬಂದಿಲ್ಲ. ಆ ನಂತರ ಪತ್ನಿಗೆ ಕರೆ ಮಾಡಿ ಬಾಗಿಲು ತೆರೆಯುವಂತೆ ಕೇಳಿ ದಾಗ, ಮಗನೊಂದಿಗೆ ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದೇವೆ ಎಂದು ಬೆದರಿಕೆ ಹಾಕಿದ್ದಾರೆ.
ಅದರಿಂದ ಗಾಬರಿಕೊಂಡ ಪ್ರಭು, ಸಮೀಪದ ಅಗ್ನಿಶಾಮಕ ದಳ ಕಚೇರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಬಾಗಿಲು ಒಡೆದು ಇಬ್ಬರನ್ನು ರಕ್ಷಿಸಿದ್ದಾರೆ. ತಮಿಳು ಸೆಲ್ವಿ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದರು ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ
Fraud: ಆಂಧ್ರ ಮಾಜಿ ಸಿಎಂ ಆಪ್ತನ ಹೆಸರಲ್ಲಿ ವಂಚನೆ
Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ
Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ
Bengaluru: ಇಬ್ಬರು ಪತ್ನಿಯರನ್ನು ಬಿಟ್ಟಿದ್ದ ಅಧಿಕಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.