ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
Team Udayavani, Oct 6, 2017, 11:43 AM IST
ಯಲಹಂಕ: ಕುವೆಂಪು, ಬೇಂದ್ರೆ ಮತ್ತು ಕಾರಂತರು ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿಯೇ ಪಡೆದಿದ್ದು, ಸರ್ಕಾರಿ ಶಾಲೆಯಲ್ಲಿ ಕಲಿತು ದೇಶದ ಉನ್ನತ್ತ ಪ್ರಶಸ್ತಿಗಳನ್ನು ಪಡೆದು ಕೊಂಡವರು ನಮ್ಮ ಸಾಧನೆಯ ಹಾದಿಗೆ ಶಾಲೆ ಎಂದಿಗೂ ಅಡ್ಡಿಯಾಗಲಾರದು ಎಂದು ಯಲಹಂಕ ಶಾಸಕ ವಿಶ್ವನಾಥ್ ಹೇಳಿದರು.
ಹೆಸರಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಸೈಕಲ್‌ನ್ನು ವಿತರಣೆ ಮಾಡಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿಯೇ ನಾವು ಮುಂದೆ ಗುರಿ, ಹಿಂದೆ ಗುರುವನ್ನು ಪಡೆದುಕೊಳ್ಳಬೇಕು ಎಂದರು.
ಜಿಪಂ ಸದಸ್ಯ ಕೃಷ್ಣಯ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಇತರೆ ಪ್ರಾಥಮಿಕ ಸೌಲಭ್ಯವನ್ನು ನೀಡುತ್ತಿದ್ದು ಅವರ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ ಕೊಡಲಾಗಿದೆ. ಹೆಣ್ಣು ಮಕ್ಕಳಿಗೆ ಸೈಕಲ್ ನೀಡುತ್ತಿರುವುದರಿಂದ ಅವರಲ್ಲಿ ಓದುವ ಆಸಕ್ತಿ ಹೆಚ್ಚುತ್ತಿದೆ ಎಂದು ಹೇಳಿದರು.
ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಇನ್ನೂರು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ನೂರು ಸೈಕಲ್‌ಗಳನ್ನು ಜಿಪಂ ವತಿಯಿಂದ ನೀಡಲಾಗಿದೆ ಎಂದರು. ಹೆಸರಘಟ್ಟ ಗ್ರಾಪಂ ಅಧ್ಯಕ್ಷೆ ವಸಂತಲಕ್ಷ್ಮೀ, ಬಿಜೆಪಿ ಮುಖಂಡರಾದ ವಾಣಿ ವಿಶ್ವನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.