ಮುಖ್ಯಪೇದೆ, ಎಎಸ್‌ಐಗೆ ಚಾರ್ಜ್‌ಶೀಟ್ ಹೊಣೆ
Team Udayavani, Apr 11, 2017, 12:25 PM IST
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕ್ ಕುಮಾರ್ ದತ್ತಾ ಅವರು ಸೋಮವಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಎಎಸ್‌ಐ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗಳಿಗೂ ಎಫ್ಐಆರ್ ದಾಖಲಿಸುವದರ ಜತೆಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸುವ ಹೊಣೆ ನೀಡಿದ್ದಾರೆ.
ಈ ಹಿಂದೆ ಸಬ್‌ಇನ್ಸ್‌ಪೆಕ್ಟರ್ ಮತ್ತು ಅವರಿಗೂ ಮೇಲ್ಪಟ್ಟ ಅಧಿಕಾರಿಗಳಿಗೆ ಮಾತ್ರ ಚಾರ್ಜ್‌ಶೀಟ್ ಸಲ್ಲಿಸುವ ಅಧಿಕಾರವಿತ್ತು. ಸದ್ಯದ ಆದೇಶದ ಪ್ರಕಾರ ಠಾಣೆಯ ಎಎಸ್‌ಐ ಹಾಗೂ ಹೆಡ್‌ಕಾನ್‌ಸ್ಟೆಬಲ್ ಕೂಡ ಸಾಧಾರಣ ರಸ್ತೆ ಅಪಘಾತ ಹಾಗೂ ಸಣ್ಣ-ಪುಟ್ಟ ಹಲ್ಲೆ ಪ್ರಕರಣಗಳ ಪ್ರಾಥಮಿಕ ತನಿಖಾ ವರದಿ ಸಿದ್ಧಪಡಿಸಿ, ಚಾರ್ಜ್‌ಶೀಟ್ ಸಲ್ಲಿಸಬಹುದು.
ಹಿರಿಯ ಅಧಿಕಾರಿಗಳ ಮೇಲೆನ ಹೊರೆ ಇಳಿಕೆ: ರಾಜ್ಯ ಪೊಲೀಸ್ ಇಲಾಖೆಯ ಇತಿಹಾಸದಲ್ಲೇ ಇದೊಂದು ಮಹತ್ತರ ನಿರ್ಧಾರಾಗಿದ್ದು, ಈ ಕ್ರಮದಿಂದ ಹಿರಿಯ ಅಧಿಕಾರಿಗಳ ಮೇಲಿನ ಕೆಲಸದೊತ್ತಡ ಕಡಿಮೆಯಾಗಲಿದೆ. ಪೊಲೀಸ್ ಇಲಾಖೆಯಲ್ಲಿರುವ ಶೇ.90ರಷ್ಟು ಮಂದಿ ಎಎಸ್‌ಐ ಮತ್ತು ಹೆಡ್‌ಕಾನ್‌ಸ್ಟೆಬಲ್‌ಗಳು ಪದವಿಧರರಾಗಿದ್ದು, ಅವರಲ್ಲಿರುವ ಜ್ಞಾನವನ್ನು ಈ ಮೂಲಕ ಬಳಸಿಕೊಳ್ಳಲು ಸಾಧ್ಯವಿದೆ.
ಜತೆಗೆ ಹಿರಿಯ ಅಧಿಕಾರಿಗಳ ನಡುವಿನ ಅಧಿಕಾರದ ಅಂತರ ಕಡಿಮೆ ಮಾಡಲು ಮತ್ತು ಪ್ರಕರಣಗಳನ್ನು ನಿರ್ವಹಿಸುವ ಅನುಭವವನ್ನು ಹೆಚ್ಚಿಸುವ ಸಲುವಾಗಿ ಈ ನಿರ್ಧಾರಕೈಗೊಳ್ಳಲಾಗಿದೆ. ಈ ರೀತಿ ಸಿಬ್ಬಂದಿಯಲ್ಲಿ ಉತ್ತೇಜನ ನೀಡುವುದರಿಂದ ಮುಂದಿನ ದಿನಗಳಲ್ಲಿ ಇಲಾಖೆಯಲ್ಲಿ ದಕ್ಷ ಹಾಗೂ ಉತ್ತಮ ಅಧಿಕಾರಿಗಳ ಸೇವೆ ಇಲಾಖೆಗೆ ದೊರೆಯಲಿದೆ ಎಂದು ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಉದಯವಾಣಿಗೆ ತಿಳಿಸಿದರು.
ಯ್ನಾವ್ಯಾವ ಪ್ರಕರಣಗಳು?: ಸಾಧಾರಣ ರಸ್ತೆ ಅಪಘಾತ(ಐಪಿಸಿ 279, 377). ಹಲ್ಲೆ, ದರೋಡೆ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಅವರೇ ಚಾರ್ಜ್‌ಶೀಟ್ ಸಲ್ಲಿಸಬಹುದಾಗಿದೆ. ಇದಕ್ಕೆ ಹಿರಿಯ ಅಧಿಕಾರಿಗಳ ಮಾಗದರ್ಶನವು ಇರಲಿದೆ.
ಸಿಬ್ಬಂದಿಯ ಪ್ರೋತ್ಸಾಹಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಎಎಸ್‌ಐ, ಹೆಡ್‌ಕಾನ್‌ಸ್ಟೆಬಲ್‌ಗಳು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಬಹುದು. ಇದರಿಂದ ಭವಿಷ್ಯದಲ್ಲಿ ಇಲಾಖೆ ಬಹಳ ಉಪಯೋಗವಾಗಲಿದೆ.
-ಆರ್.ಕೆ.ದತ್ತಾ, ಪೊಲೀಸ್ ಮಹಾನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.