ಕೊಲೆ ಆರೋಪಿ ಕಾಲಿಗೆ ಗುಂಡೇಟು: ಸೆರೆ


Team Udayavani, Dec 5, 2018, 11:50 AM IST

aropi-kalige.jpg

ಬೆಂಗಳೂರು: ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲ್‌ ಸದ್ದು ಮಾಡಿದೆ. ಲಾರಿ ಚಾಲಕನನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಗೆ ಹೆಣ್ಣೂರು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಹೆಣ್ಣೂರಿನ ವಡ್ಡರಪಾಳ್ಯ ನಿವಾಸಿ ಅಭಿಷೇಕ್‌(19) ಗುಂಡೇಟು ತಿಂದು ಬಂಧನಕ್ಕೊಳಗಾದವನು. ಆರೋಪಿಯ ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದೇ ವೇಳೆ ಆರೋಪಿಯಿಂದ ಹಲ್ಲೆಗೊಳಗಾದ ಕಾನ್‌ಸ್ಟೆàಬಲ್‌ ಸಂತೋಷ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ನ.30ರಂದು ಹೆಣ್ಣೂರು ಬಂಡೆ ಬಳಿಯ ಬಾರೊಂದರಲ್ಲಿ ಮದ್ಯ ಸೇವಿಸಿ ಹೊರಬರುತ್ತಿದ್ದ ವಡ್ಡರಪಾಳ್ಯ ನಿವಾಸಿ, ಲಾರಿ ಚಾಲಕ ಕೇಶವನನ್ನು ಅಭಿಷೇಕ್‌ ಹಾಗೂ ಬಾಗಲೂರು ಲೇಔಟ್‌ನ ಗುರುಬ್ರಹ್ಮ, ಅವಿನಾಶ್‌, ದಿಲೀಪ್‌ ಮತ್ತು ಅರ್ಜುನ್‌ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು.

ಎಡಗಾಲಿಗೆ ಗುಂಡು: ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಅಭಿಷೇಕ್‌ ಮಂಗಳವಾರ ನಸುಕಿನ ಎರಡು ಗಂಟೆ ಸುಮಾರಿಗೆ ಹೆಣ್ಣೂರು ಬಂಡೆ ಬಳಿ ನಡೆದು ಹೋಗುತ್ತಿದ್ದ. ಈ ಮಾಹಿತಿ ಸಂಗ್ರಹಿಸಿದ ಹೆಣ್ಣೂರು ಠಾಣೆ ಇನ್‌ಸ್ಪೆಕ್ಟರ್‌ ಎಚ್‌.ಡಿ.ಕುಲಕರ್ಣಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲು ಮುಂದಾಗಿತ್ತು. 

ಪೊಲೀಸರನ್ನು ಕಂಡ ಕೂಡಲೇ ಪರಾರಿಯಾಗಲು ಯತ್ನಿಸಿದ ಅಭಿಷೇಕ್‌ನನ್ನು ಹಿಡಿಯಲು ಹೋದ ಕಾನ್‌ಸ್ಟೆàಬಲ್‌ ಸಂತೋಷ್‌ಗೆ ಚಾಕುನಿಂದ ಹಲ್ಲೆ ನಡೆಸಿದ್ದು, ಕಾನ್‌ಸ್ಟೆàಬಲ್‌ ಕೈಗೆ ಗಾಯವಾಗಿದೆ. ಈ ವೇಳೆ ಶರಣಾಗುವಂತೆ ಇನ್‌ಸ್ಪೆಕ್ಟರ್‌ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ಶರಣಾಗದ ಆರೋಪಿ ಮತ್ತೂಮ್ಮೆ ಕಾನ್‌ಸ್ಟೆàಬಲ್‌ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಈ ವೇಳೆ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್‌ ಆರೋಪಿಯ ಮೇಲೆ ಎಡಗಾಲಿಗೆ ಗುಂಡು ಹೊಡೆದು ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ಹೇಳಿದರು.  ಬಂಧಿತ ಅಭಿಷೇಕ್‌ ವಿರುದ್ಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತ ಕಳೆದ 10 ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ ಎಂದು ಪೊಲೀಸರು ಹೇಳಿದರು.

ಹಳೇ ದ್ವೇಷವೇ ಕಾರಣ: ಸೆಪ್ಟೆಂಬರ್‌ ಗಣೇಶ ಹಬ್ಬದ ಸಂದರ್ಭದಲ್ಲಿ ವಡ್ಡರಪಾಳ್ಯದಲ್ಲಿ ಗಣಪತಿ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಆರೋಪಿ ಅಭಿಷೇಕ್‌ ಬಾಗಲೂರು ಲೇಔಟ್‌ನ ಸ್ನೇಹಿತರಾದ ಅರ್ಜುನ್‌, ಗುರುಬ್ರಹ್ಮ, ದಿಲೀಪ್‌ ಮತ್ತು ಅವಿನಾಶ್‌ರನ್ನು ಕರೆತಂದು ಡ್ಯಾನ್ಸ್‌ ಮಾಡಿದ್ದ. ಈ ವೇಳೆ ಕ್ಲುಲಕ ಕಾರಣಕ್ಕೆ ಆರೋಪಿ ಅಭಿಷೇಕ್‌ ಮೇಲೆ ಕೇಶವ ಮತ್ತು ಸಾರ್ವಜನಿಕರು ಹಲ್ಲೆ ನಡೆಸಿದ್ದರು.

ಸಾರ್ವಜನಿಕ ಹಲ್ಲೆಯಿಂದ ಆಕ್ರೋಶಗೊಂಡಿದ್ದ ಅಭಿಷೇಕ್‌ ತನ್ನ ನಾಲ್ವರು ಸಹಚರರೊಂದಿಗೆ ಕೇಶವನ ಕೊಲೆಗೆ ಸಂಚು ರೂಪಿಸಿದ್ದ. ಅದರಂತೆ ನ.30ರಂದು ಹೆಣ್ಣೂರು ಬಂಡೆ ಬಳಿ ಕೇಶವನನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದರು ಎಂದು ಪೊಲೀಸರು ಹೇಳಿದರು.

ಬಟ್ಟೆ ಬದಲಿಸಲು ಬಂದಿದ್ದ: ನ.30ರಂದು ತನ್ನ ಸಹಚರರ ಜತೆ ಸೇರಿ ಕೇಶವನನ್ನು ಹತ್ಯೆಗೈದು ಅದೇ ಬಟ್ಟೆಯಲ್ಲಿ ಅಭಿಷೇಕ್‌ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ವಡ್ಡರಪಾಳ್ಯದಲ್ಲಿರುವ ತನ್ನ ಮನೆಗೆ ಬಂದು ಬಟ್ಟೆ ಬದಲಿಸಿ ಇನ್ನೊಂದಿಷ್ಟು ಬಟ್ಟೆಗಳನ್ನು ತುಂಬಿಕೊಂಡು ತಮಿಳುನಾಡು ಕಡೆ ತಲೆಮರೆಸಿಕೊಳ್ಳಲು ತೀರ್ಮಾನಿಸಿದ್ದ.

ಈ ಮಾಹಿತಿ ಪಡೆದ ಹೆಣ್ಣೂರು ಪೊಲೀಸರು ಡಿ. 4ರ ನಸುಕಿನ 2 ಗಂಟೆ ಸುಮಾರಿಗೆ ಆರೋಪಿ ಹೆಣ್ಣೂರು ಬಂಡೆ ಬಳಿ ಬರುತ್ತಿದ್ದಂತೆ ದಾಳಿ ನಡೆಸಿ ಬಂಧಿಸಿದ್ದಾರೆ. ಸಹಚರರಾದ ಮತ್ತೂಬ್ಬ ಆರೋಪಿ ಗುರುಬ್ರಹ್ಮ ಎಂಬಾತನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಅರ್ಜುನ್‌, ಅವಿನಾಶ್‌ ಮತ್ತು ದಿಲೀಪ್‌ಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.