ಕಾಂಗ್ರೆಸ್ ಮುಖಂಡನ ಕೊಲೆಯತ್ನ! ಹೆಲ್ಮೆಟ್ ಧರಿಸಿ ಮಚ್ಚಲ್ಲಿ ಹೊಡೆದ ಮುಸುಕುಧಾರಿಗಳು
Team Udayavani, Dec 10, 2019, 9:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಸಿದ್ದಾಪುರದ ಸೋಮೇಶ್ವರ ನಗರದಲ್ಲಿ ಹಾಡಹಗಲೇ ಸೈಯದ್ ರಿಯಾಜ್ (37) ಎಂಬವರ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ. ದುಷ್ಕರ್ಮಿಗಳ ಹಲ್ಲೆಯಿಂದ ಗಾಯಗೊಂಡಿರುವ ಸೈಯದ್ ಅವರು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಪ್ರಾಣಾಪಾಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯವಾಗಿ ಕಾಂಗ್ರೆಸ್ ಮುಖಂಡನಾಗಿ ಗುರುತಿಸಿಕೊಂಡಿರುವ ಸೈಯದ್ ಅವರು ಸ್ವಯಂ ಸೇವಾ ಸಂಸ್ಥೆಯೊಂದನ್ನು (ಎನ್‌ಜಿಒ) ನಡೆಸುತ್ತಿದ್ದಾರೆ. ಸೋಮವಾರ ಮಧ್ಯಾಹ್ನ 3.50ರ ಸುಮಾರಿಗೆ ಸೋಮೇಶ್ವರ ನಗರದಲ್ಲಿರುವ ತಮ್ಮ ಮನೆಗೆ ಊಟಕ್ಕೆ ಆಗಮಿಸಿದ್ದರು.
ಮನೆ ಮುಂದೆ ಬೈಕ್ ನಿಲ್ಲಿಸುತ್ತಲೇ ಎರಡು ಬೈಕ್‌ಗಳಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ನಾಲ್ವರು ಏಕಾಏಕಿ ಮಚ್ಚು ಸಹಿತ ಇತರ ಮಾರಕಾಸ್ತ್ರಗಳಿಂದ ಸೈಯದ್ ತಲೆಗೆ ಹೊಡೆದು ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಸೈಯದ್‌ನ ಕಿರುಚಾಟ ಕೇಳಿ ಮನೆಯಲ್ಲಿದ್ದ ಪತ್ನಿ ಮತ್ತು ಅಕ್ಕ-ಪಕ್ಕದ ನಿವಾಸಿಗಳು ಓಡಿ ಬಂದಿದ್ದು, ರಕ್ತದ ಮಡುವಿನಲ್ಲಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈಯದ್ ರಿಯಾಜ್ ಅವರ ದೂರು ಆಧರಿಸಿ ಕೊಲೆಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯಾವ ಕಾರಣಕ್ಕೆ ಕೊಲೆ ನಡೆದಿರಬಹುದು ಎಂಬುದು ಗೊತ್ತಾಗಿಲ್ಲ. ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.