ಯುವತಿ ವಿಚಾರಕ್ಕೆ ಕೊಲೆ: ಐವರ ಬಂಧನ
Team Udayavani, Feb 27, 2019, 5:59 AM IST
ಬೆಂಗಳೂರು: ಬಿಳೇಕಲ್ಲಹಳ್ಳಿಯ 5ನೇ ಕ್ರಾಸ್‌ನಲ್ಲಿ ಯುವತಿ ವಿಚಾರಕ್ಕೆ ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣವನ್ನು ಬೇಧಿಸಿರುವ ಮೈಕೋ ಲೇಔಟ್ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪುಟ್ಟೇನಹಳ್ಳಿಯ ಮನ್ಸೂರ್ ಷರೀಫ್, ತಲ್ಲಘಟ್ಟಪುರದ ಪೀಟರ್, ಪ್ರವೀಣ್, ಸಂತೋಷ್, ಕಿರಣ್ ಅಲಿಯಾಸ್ ಕಪ್ಪೆ ಬಂಧಿತರು.
ಆರೋಪಿಗಳಿಂದ ಒಂದು ಕಾರು, ಮೂರು ಬೈಕ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಫೆ.14ರಂದು ಪುಟ್ಟೇನಹಳ್ಳಿ ನಿವಾಸಿ ಮೊಹಮ್ಮದ್ ಯುಸೂಫ್ (26) ಎಂಬಾತನನ್ನು ಹತ್ಯೆಗೈದಿದ್ದರು ಎಂದು ಪೊಲೀಸರು ಹೇಳಿದರು.
ಯುಸೂಫ್ ನಗರದಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ಅಸ್ಸಾಂ ಮೂಲದ ಯುವತಿಯನ್ನು ಪ್ರೀತಿಸಿದ್ದ. ಇದೇ ಯುವತಿಯನ್ನು ಆರೋಪಿ ಮನ್ಸೂರ್ ಷರೀಫ್ ಕೂಡ ಇಷ್ಟಪಟ್ಟಿದ್ದ. ಈ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು.
ಫೆ.14ರಂದು ತಡರಾತ್ರಿ 12.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಅರಕೆರೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಹೋಗುತ್ತಿದ್ದ ಯುಸೂಫ್ನನ್ನು ಹಿಂಬಾಲಿಸಿದ ದುಷ್ಕರ್ಮಿಗಳು, ಡಿಕ್ಕಿ ಹೊಡೆದಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.