ಬೆತ್ತಲೆಯಾಗಿ ಪತ್ತೆಯಾದ ಉಪನ್ಯಾಸಕನ ಮೃತದೇಹ !
ಜೋಡಿ ಕೊಲೆ; ಕತ್ತುಸೀಳಿ ವೃದ್ಧೆ ಹತ್ಯೆ ! ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
Team Udayavani, Apr 9, 2021, 7:57 PM IST
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೋಡಿ ಕೊಲೆ ನಡೆದಿದೆ. ಒಂದೇ ಮನೆಯಲ್ಲಿ ವಾಸವಾಗಿದ್ದ ವೃದ್ಧೆ ಸೇರಿ ಇಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಚಾಕುವಿನಿಂದ ಇರಿದು ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಮಮತಾ ಬಸು (73) ಮತ್ತು ಅವರ ಪುತ್ರ ದೇಬದೀಪ್ ಬಸು ಅವರ ಸ್ನೇಹಿತ, ಒಡಿಶಾ ಮೂಲದ ದೇಬ ರಥ್ ಬಹೇರಾ (42) ಕೊಲೆಯಾದವರು. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ.
ಮಮತಾ ಬಸು ಹಾಗೂ ಪುತ್ರ ದೇಬದೀಪ್ ಬಸು 2018ರಲ್ಲಿ ಬೆಂಗಳೂರಿಗೆ ಬಂದಿದ್ದು, ಜೆ.ಪಿ.ನಗರ 7ನೇ ಹಂತದ ಸಂತೃಪ್ತಿ ನಗರ ದಲ್ಲಿರುವ ಡ್ನೂಪ್ಲೆಕ್ಸ್ ಮನೆಯಲ್ಲಿ ವಾಸವಾಗಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿರುವ ದೇಬದೀಪ್ ಬಸು ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಅತ್ತೆ-ಸೊಸೆ ಜಗಳ ನಡೆಯುತ್ತಿದ್ದರಿಂದ ಸಂತೃಪ್ತಿ ನಗರದಲ್ಲೇ ಮತ್ತೂಂದು ಬಾಡಿಗೆ ಮನೆ ಮಾಡಿಕೊಂಡು ಪ್ರತ್ಯೇಕವಾಗಿ ವಾಸವಾಗಿದ್ದರು. ಅವರ ತಾಯಿ ಮಮತಾ ಬಸು ಡ್ನೂಪ್ಲೆಕ್ಸ್ ಮನೆಯಲ್ಲಿ ಒಬ್ಬರೇ ವಾಸವಾಗಿ ದ್ದರು. ಪ್ರತಿನಿತ್ಯ ಬೆಳಗ್ಗೆ ಮತ್ತು ರಾತ್ರಿ ಮನೆಗೆ ಬಂದು ತಾಯಿಯ ಯೋಗಕ್ಷೇಮ ವಿಚಾರಿಸಿಕೊಂಡು ಹೋಗುತ್ತಿದ್ದರು. ಈ ಮಧ್ಯೆ 20 ದಿನಗಳ ಹಿಂದೆ ದೇಬದೀಪ್ ಬಸು ಸ್ನೇಹಿತ ಒಡಿಶಾ ಮೂಲದ ದೇಬರಥ್ ಬಹೇರಾ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದು, ನಗ ರದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಸಿಕ್ಕಿತ್ತು. ನಗರದಲ್ಲಿ ಬೇರೆ ಎಲ್ಲಿಯೂ ಮನೆ ಸಿಗದರಿಂದ ತನ್ನ ವೃದ್ಧ ತಾಯಿ ಜತೆ ಇರುವಂತೆ ದೇಬದೀಪ್ ಸೂಚಿಸಿದ್ದರು. ಹೀಗಾಗಿ ವರ್ಕ್ ಫ್ರಂ ಹೋಮ್ ಅನ್ವಯ ದೇಬರಥ್ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಕತ್ತು ಸಿಳಿ ಕೊಲೆ:
ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದೇಬದೀಪ್ ಬಸು ಮನೆಗೆ ಬಂದು ತಾಯಿ ಹಾಗೂ ಸ್ನೇಹಿತನನ್ನು ಮಾತಾಡಿಸಿಕೊಂಡು ಹೋಗಿ ದ್ದಾರೆ. ಅನಂತರ ತಡರಾತ್ರಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮೊದಲ ಮಹಡಿಯಲ್ಲಿ ಮಲಗಿದ್ದ ವೃದ್ಧೆ ಮಮತಾ ಬಸು ಅವರ ಕತ್ತು ಕೊಯ್ದು ಕೊಲೆಗೈದು, ಬಳಿಕ ಕೆಳ ಮಹಡಿಯ ಕೊಣೆಗಳಲ್ಲಿ ನಿದ್ರಿಸುತ್ತಿದ್ದ ದೇಬರಥ್ ಬಹೇರಾ ಅವರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಡಿವಿಆರ್ ಯಾಕೆ ಕಳವು?:
ಕೊಲೆಗೈದ ಬಳಿಕ ಮನೆ ಯನ್ನು ಶೋಧಿಸಿರುವ ದುಷ್ಕರ್ಮಿಗಳು, ಲ್ಯಾಪ್‌ಟಾಪ್, ಮೊಬೈಲ್‌ಗಳು, ಎಟಿಎಂ ಕಾರ್ಡ್‌ಗಳು, ಚಿನ್ನಾಭ ರಣ, ನಗದು ಮತ್ತು ಮನೆಯಲ್ಲಿದ್ದ ಸಿಸಿ ಕ್ಯಾಮೆರಾದ ಡಿವಿಆರ್ ಹಾಗೂ ಇತರೆ ಮೌಲ್ಯಯುತ ವಸ್ತುಗಳನ್ನು ಕದೊಯ್ದಿದ್ದಾರೆ ಎಂದು ಪೊಲೀಸರು ಹೇಳಿದರು. ಡಿಜಿಟಲ್ ವಿಡಿಯೋ ರೆಕಾರ್ಡರ್‌ನಲ್ಲಿ ಹಂತಕರ ಎಲ್ಲಾ ಸುಳಿವು ಇರುವುದರಿಂದ ಅದನ್ನೇ ದುಷ್ಕರ್ಮಿಗಳು ಹೊತ್ತೂಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲಸದವರು ಬಂದಾಗ ಘಟನೆ ಬೆಳಕಿಗೆ:
ಗುರುವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಮನೆಕೆಲಸದಾಕೆ ಬಂದಾಗ ಮನೆಯ ಬಾಗಿಲು ತೆರೆದಿತ್ತು. ಆಗ ಅಮ್ಮ ಎಂದು ಕೂಗಿ ದಾಗ ಯಾವುದೇ ಪ್ರತಿ ಕ್ರಿಯೆ ಬಂದಿಲ್ಲ. ಒಳಗೆ ಹೋಗಿ ನೋಡಿದಾಗ ದೇಬರಥ್ ಬಹೇರಾ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅನಂತರ ಮೊದಲನೇ ಮಹಡಿಯ ಕೊಠಡಿಯಲ್ಲಿ ನೋಡಿದಾಗ ಮಮತಾ ಬಸು ಕತ್ತು ಕೊಯ್ದು ಕೊಲೆಯಾಗಿದ್ದರು. ಗಾಬರಿಗೊಂಡು ಹೊರಗಡೆ ಬಂದು ಮನೆಕೆಲಸದಾಕೆ, ಕೂಡಲೇ ಪಕ್ಕದ ಮನೆಯವರ ಮೂಲಕ ವೃದ್ಧೆಯ ಪುತ್ರ ದೇಬದೀಪ್ ಬಸುಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ನೋಡಿ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬಂದ ಪುಟ್ಟೇನಹಳ್ಳಿ ಪೊಲೀಸರು ಮತ್ತು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜತೆಗೆ ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿದವು. ವೃದ್ಧೆ ಒಂಟಿಯಾಗಿರುವುದನ್ನು ಗಮನಿಸಿದ ಹಂತಕರು ಮನೆ ಲೂಟಿ ಮಾಡಲು ಬಂದು ಆಕೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವೃದ್ಧೆಯ ಜತೆ ಮತ್ತೂಬ್ಬ ವ್ಯಕ್ತಿ ಇರುವ ಬಗ್ಗೆ ಮಾಹಿತಿ ಇಲ್ಲದಿದ್ದರಿಂದ ಹಂತಕರು ಆತನನ್ನು ಕೊಲೆ ಮಾಡಿ ಪರಾರಿಯಾಗಿರಬಹುದು ಎಂದು ಪೊಲೀ ಸ ರು ಅನುಮಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.