ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಆರೋಪಿಗಳು | ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ

Team Udayavani, Oct 24, 2021, 9:49 AM IST

kole

ಬೆಂಗಳೂರು: ಹಣಕಾಸು ಮತ್ತು ಅನೈತಿಕ ಸಂಬಂಧ ವಿಚಾರಕ್ಕೆ ಪರಿಚಯಸ್ಥರೇ ಟೆಂಪೋ ಟಾವೆಲ್ಲರ್‌ ಚಾಲಕನನ್ನು ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಘಟನೆ ಬ್ಯಾಟರಾ ಯನಪುರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಆರ್‌.ಆರ್‌.ನಗರ ನಿವಾಸಿ ಚಂದ್ರಶೇಖರ್‌ (42) ಕೊಲೆ ಯಾದ ಚಾಲಕ. ಈ ಸಂಬಂಧ ಹನುಮಂತನಗರ ನಿವಾಸಿ ಭಾಸ್ಕರ್‌ ಹಾಗೂ ಆತನ ಸಹಚರರಿಗಾಗಿ ಹುಡುಕಾಟ ನಡೆ ಯುತ್ತಿದೆ ಎಂದು ಪೊಲೀಸರು ಹೇಳಿದರು.

ಮಂಡ್ಯ ಮೂಲದ ಚಂದ್ರಶೇಖರ್‌ ಈ ಮೊದಲು ಮಾರುಕಟ್ಟೆಯಲ್ಲಿ ಹೂ ವ್ಯಾ ಪಾರ ಮಾಡಿಕೊಂಡಿದ್ದು, ಶ್ರೀನಗರದಲ್ಲಿ ವಾಸವಾಗಿದ್ದ. ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ವ್ಯಾಪಾರದಲ್ಲಿ ನಷ್ಟ ಹೊಂದಿ ದ್ದರಿಂದ ಸ್ವಂತ ಊರಿಗೆ ತೆರಳಿದ್ದ. ಲಾಕ್‌ ಡೌನ್‌ ತೆರವು ಬಳಿಕ ಬೆಂಗಳೂರಿಗೆ ಬಂದು, ಆರ್‌.ಆರ್‌.ನಗರದಲ್ಲಿ ಮನೆ ಮಾಡಿಕೊಂಡಿದ್ದ. ಜತೆಗೆ ಸಹೋದರನ ಟೆಂಪೋ ಟ್ರಾವೆಲ್ಲರ್‌ನ ಚಾಲಕನಾಗಿ ಕೆಲಸ ಮಾಡುತ್ತಿದ್ದ.

ಈ ಮಧ್ಯೆ ಪರಿಚಯಸ್ಥ ಭಾಸ್ಕರ್‌ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದಿದ್ದ ಭಾಸ್ಕರ್‌, ಚಂದ್ರಶೇಖರ್‌ ಗೆ ಬಹಳಷ್ಟು ಬಾರಿ ಎಚ್ಚರಿಕೆ ನೀಡಿದ್ದ. ಒಂದೆರಡು ಬಾರಿ ಹಲ್ಲೆ ಕೂಡ ನಡೆಸಿದ್ದ. ಈ ಸಂಬಂಧ ಕೆಲ ದಿನಗಳ ಹಿಂದೆ ಹನುಮಂತನಗರ ಠಾಣೆಯಲ್ಲಿ ಚಂದ್ರಶೇಖರ್‌ ಪ್ರಾಣ ರಕ್ಷಣೆ ಕೋರಿ ದೂರು ನೀಡಿದ್ದು, ತನ್ನ ಪ್ರಾಣಕ್ಕೆ ಹಾನಿಯಾದರೆ ಅದಕ್ಕೆ ಭಾಸ್ಕರ್‌ ಮತ್ತು ಆತನ ಸ್ನೇಹಿತರೇ ಕಾರಣ ಎಂದು ದೂರಿನಲ್ಲಿ ಉಲ್ಲೇಖೀಸಿದ್ದ.

ಇದನ್ನೂ ಓದಿ:- ಡ್ರೋಣ್‌ ಮೂಲಕ ಕೀಟನಾಶಕ ಸಿಂಪರಣೆ

ನಂತರ ಆರೋಪಿ ಠಾಣೆಗೆ ಬಂದು ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದ ಎಂಬುದು ಗೊತ್ತಾಗಿದೆ ಎಂದು ಪಶ್ಚಿಮ ವಿಭಾಗ ಪೊಲೀಸರು ಹೇಳಿದರು. ಮತ್ತೂಂದೆಡೆ ಭಾಸ್ಕರ್‌ ಜತೆಯೂ ಚಂದ್ರಶೇಖರ್‌ ಹಣಕಾಸಿನ ವ್ಯವಹಾರ ನಡೆಸಿದ್ದ. ಹೀಗಾಗಿ ಹಣ ಕೊಡುವಂತೆ ಪದೇ ಪದೆ ಕರೆ ಮಾಡಿ ಪೀಡಿಸುತ್ತಿದ್ದ. ಶುಕ್ರವಾರ ರಾತ್ರಿ ಭಾಸ್ಕರ್‌ ಮತ್ತು ತಂಡ ಮದ್ಯ ಸೇವಿಸುವ ನೆಪ ದಲ್ಲಿ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಮಹಾವೀರ್‌ ಜೈನ್‌ ಆಸ್ಪತ್ರೆಯ ಹಿಂಭಾಗದ ನೈಸ್‌ ರಸ್ತೆಗೆ ಚಂದ್ರಶೇಖರ್‌ನನ್ನು ಕರೆಸಿಕೊಂಡಿದ್ದಾರೆ. ಬಳಿಕ ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ.

ಈ ವೇಳೆ ಆರೋಪಿಗಳು ಹಾಗೂ ಚಂದ್ರಶೇಖರ್‌ ನಡುವೆ ಗಲಾಟೆ ಯಾಗಿದ್ದು, ಅದು ವಿಕೋಪಕ್ಕೆ ಹೋಗಿದೆ. ಈ ವೇಳೆ ಆರೋಪಿಗಳು, ಮೊದಲಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ಪರಾರಿ ಯಾಗಿದ್ದಾರೆ. ಶನಿವಾರ ಬೆಳಗ್ಗೆ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಚಂದ್ರಶೇಖರ್‌ ಸಹೋದರ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಬ್ಯಾಟರಾಯನ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.