ಸಂಗೀತ, ನೃತ್ಯ ಮನೋರಂಜನೆಗೆ ಸೀಮಿತವಲ್ಲ
Team Udayavani, Aug 7, 2018, 12:03 PM IST
ಬೆಂಗಳೂರು: ಸಂಗೀತ ಹಾಗೂ ನೃತ್ಯ ಪ್ರಕಾರಗಳು ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಬದಲಾಗಿ ಸಮಾಜಕ್ಕೆ ಸಂದೇಶ ಸಾರುವಂತಹ ವೇದಿಕೆಗಳಾಗಿವೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಫಯಾಜ್ ಖಾನ್ ಅಭಿಪ್ರಾಯಪಟ್ಟರು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಸೋಮವಾರ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಗೀತ ಹಾಗೂ ನೃತ್ಯಗಳು ಸಮಾಜದ ಒಂದು ಭಾಗವಾಗಿದ್ದು, ಪ್ರತಿಯೊಬ್ಬರ ವ್ಯಕ್ತಿಯನ್ನು ತನ್ನತ್ತ ಸೆಳೆಯುವಂತಹ ಶಕ್ತಿಯನ್ನು ಹೊಂದಿವೆ. ಕಲೆ ಹಾಗೂ ಸಾಹಿತ್ಯವಿಲ್ಲದ ಸಮಾಜ ನರಕದಂತಾಗುತ್ತದೆ ಎಂದು ಹೇಳಿದರು.
ದೇಶದಲ್ಲಿ ಸಂಗೀತ, ನೃತ್ಯ ಸೇರಿದಂತೆ ಎಲ್ಲ ರೀತಿಯ ಕಲಾ ಪ್ರಕಾರಗಳು ಸಮೃದ್ಧವಾಗಿ ಬೆಳವಣಿಗೆಯಾಗಿದ್ದು, ಪ್ರತಿಯೊಬ್ಬರೂ ಕಲಾ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಕಲಾ ಪ್ರಕಾರಗಳನ್ನು ಸವಿಯುವ ಮೂಲಕ ಅವುಗಳನ್ನು ಗೌರವಿಸಬೇಕು ಎಂದು ಹೇಳಿದರು.
ಅಕಾಡೆಮಿಯ ವತಿಯಿಂದ ಕಳೆದ ಎರಡು ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ವಿದ್ವಾಂಸರ ಮೂಲಕ ಪುಸ್ತಕಗಳನ್ನು ಹೊರತಂದಿದ್ದು, ಇವು ಕೇವಲ ಪಠ್ಯಗಳಿಗೆ ಸೀಮಿತವಾಗಿಲ್ಲ. ಬದಲಾಗಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುವವರಿಗೆ ಮಾರ್ಗದರ್ಶಕ ಕೃತಿಗಳಾಗಿದ್ದು, ಕೃತಿಗಳಿಂದ ಜನರು ಸಂಗೀತದ ಕುರಿತು ಹಲವಾರು ವಿಷಯಗಳನ್ನು ತಿಳಿಯಬಹುದಾಗಿದೆ ಎಂದು ಹೇಳಿದರು.
ವಿಮರ್ಶಕ ಡಾ.ಎಂ.ಸೂರ್ಯ ಪ್ರಸಾದ್ ಮಾತನಾಡಿ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಹಾಗೂ ನೃತ್ಯ ಪ್ರಕಾರಗಳು ಸಮಾನವಾಗಿ ಬೆಳೆಯುತ್ತಿದ್ದು, ದೇಶ-ವಿದೇಶಗಳಲ್ಲಿ ಅಪಾರವಾದ ಗೌರವ ಮನ್ನಣೆಗೆ ಪಾತ್ರವಾಗಿವೆ. ನಮ್ಮ ಸಂಗೀತ ಗಟ್ಟಿತನದಿಂದ ಕೂಡಿದ್ದು, ಗಟ್ಟಿತನದಿಂದ ಕೂಡಿದ ಕಲೆ ಎಲ್ಲವನ್ನೂ ಮೀರಿ ಬೆಳೆಯುವ ಶಕ್ತಿಯನ್ನು ಹೊಂದಿರುತ್ತವೆ ಎಂದರು.
ಕಾರ್ಯಕ್ರಮದಲ್ಲಿ ರಾಗವಲ್ಲಿರಸಾಲ, ಸಂಗೀತ ಶಾಸ್ತ್ರಗ್ರಂಥ ಚಂದ್ರಿಕೆ, ಸಂಗೀತ ಶಾಸ್ತ್ರ ಮಂದಾಕಿನಿ (ಭಾಗ 1 ಮತ್ತು ಭಾಗ 2), ತೌಲನಿಕ ಸಂಗೀತ ಸಮೀಕ್ಷೆ ಹಾಗೂ ಕಲಾನ್ವೇಷಣೆ ಕೃತಿಗಳು ಬಿಡುಗಡೆಗೊಂಡವು. ಈ ವೇಳೆ ಹಿರಿಯ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣುಭಟ್, ಲೇಖಕರಾದ ಡಾ.ನಾಗವಲ್ಲಿ ನಾಗರಾಜ್, ಶತಾವಧಾನಿ ಆರ್.ಗಣೇಶ್, ವಸಂತ ಮಾಧವಿ, ಡಾ.ಡಿ.ಎ.ಉಪಾಧ್ಯ, ಡಾ.ಎಸ್.ಕಾರ್ತಿಕ್ ಹಾಜರಿದ್ದರು.
ಕೈಕೊಟ್ಟ ವಿದ್ಯುತ್ – ಸೊಳ್ಳೆ ಕಾಟ: ಕಾರ್ಯಕ್ರಮದ ಆರಂಭದಲ್ಲಿಯೇ ಸಭಾಂಗಣದಲ್ಲಿ ವಿದ್ಯುತ್ ಕೈಕೊಟ್ಟ ಪರಿಣಾಮ ಅತಿಥಿಗಳು ಹಾಗೂ ಸಭಿಕರು ತೊಂದರೆ ಅನುಭವಿಸುವಂತಾಯಿತು. ಸುಮಾರು ಒಂದು ಗಂಟೆ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿದ್ದರಿಂದ ಅತಿಥಿಗಳು ಮೈಕ್ ಇಲ್ಲದೆ ಮಾತನಾಡಬೇಕಾಯಿತು. ಆಯೋಜಕರು ಕೈಯಲ್ಲಿ ಮೊಬೈಲ್ ಟಾರ್ಚ್ ಹಿಡಿದು ಅತಿಥಿಗಳನ್ನು ತೋರಿಸಬೇಕಾಯಿತು. ಇದರ ನಡುವೆ ಸಭಾಂಗಣದಲ್ಲಿ ಸೊಳ್ಳೆಗಳ ಕಾಟ ತೀವ್ರವಾಗಿದ್ದರಿಂದ ಸಭಿಕರು ಕಾರ್ಯಕ್ರಮದಿಂದ ಎದ್ದು ಹೋಗಿದ್ದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ
Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ
Atul Subhash: ಟೆಕಿ ಅತುಲ್ ಪತ್ನಿ ಬೇಲ್ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.