ನನ್ನ ಅಂಕಣಗಳೇ ನನಗೆ ಮಹಾಕಾವ್ಯ
Team Udayavani, Aug 5, 2019, 3:05 AM IST
ಬೆಂಗಳೂರು: “ನನ್ನ ಅಂಕಣಗಳೇ ನನಗೆ ಮಹಾಕಾವ್ಯಗಳು’ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ನಡೆದ ತಮ್ಮ “ಕರುಳು ಕಟ್ಟಿದ ಬರಹ ‘ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೆಲವರು ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುವುದರಿಂದ ನಿಮ್ಮ ಸೃಜನಶೀಲ ಸಾಹಿತ್ಯಕ್ಕೆ ಅಡ್ಡಿಯುಂಟಾಗುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಇಂತಹ ಬರವಣಿಗೆಯಿಂದ ಯಾವುದೇ ರೀತಿಯ ಧಕ್ಕೆ ಆಗುವುದಿಲ್ಲ. ಆತ್ಮ ಸಂತೋಷಕ್ಕೆ ನಾನು ಅಂಕಣ ಬರೆಯುತ್ತೇನೆ. ಅಂಕಣ ಬರಹದ ಮೂಲಕ ಹೆಚ್ಚು ವಿಚಾರಗಳನ್ನು ಜನರಿಗೆ ತಲುಪಿಸುತ್ತೇನೆ. ಅವು ಜನರಲ್ಲಿ ಚರ್ಚೆ ಹುಟ್ಟುಹಾಕುತ್ತವೆ ಎಂದರು.
ಅಂಕಣ ಬರಹವು ನನಗೆ ಬೃಹತ್ ಕಾವ್ಯವಿದ್ದಂತೆ. ಅಂಕಣಕ್ಕೆ ಒಂದು ಚೌಕಟ್ಟು ಇರುತ್ತದೆ. ಆ ಚೌಕಟ್ಟಿನ ಒಳಗೆ ಆತ್ಮವಂಚನೆ ಮಾಡಿಕೊಳ್ಳದೇ ಹೇಳಬೇಕಾದದ್ದನ್ನು ನೇರವಾಗಿ ಜನರ ಮುಂದೆ ಇಡಬೇಕಾಗಿದೆ. ಹೀಗಾಗಿ ಅಂಕಣ ಬರಹ ಖುಷಿ ಕೊಟ್ಟಿದೆ ಎಂದು ತಿಳಿಸಿದರು.
ನಾನು ಕನ್ನಡ ಅಧ್ಯಯನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಾಗ ಜಿ.ಎಸ್.ಶಿವರುದ್ರಪ್ಪ ಸೇರಿದಂತೆ ದೊಡ್ಡ ವಿದ್ವಾಂಸರಿದ್ದರು. ಸುಮಾರು ಏಳು ವರ್ಷಗಳ ಕಾಲ ಸ್ವಾಗತ ಭಾಷಣ ಮಾಡಲು ಕೂಡ ಅವಕಾಶ ಸಿಕ್ಕಿರಲಿಲ್ಲ. ಕನ್ನಡ ಅಧ್ಯಯನ ಕೇಂದ್ರವು ನನ್ನ ಸಾಹಿತ್ಯ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಯಿತು ಎಂದು ಹೇಳಿದರು.
ಸಾಹಿತಿಗಳು ಅಕ್ಷರ ಬೇಟೆಗಾರರಾಗಬಾರದು. ಅಂತಃಕರಣ ಮತ್ತು ಮನುಷ್ಯತ್ವ ಅವರ ಬರವಣಿಗೆಯಲ್ಲಿ ಅಡಕವಾಗಿರಬೇಕು. ಈ ಹಿಂದೆ ಸಾಹಿತಿಯೊಬ್ಬರು ಬರಗೂರರು ಸಾಹಿತಿಯೇ ಅಲ್ಲ ಎಂದು ಟೀಕಿಸಿದ್ದರು.ಆಗ ನನಗೆ ಬೇಸರವಾಗಲಿಲ್ಲ. ಆದರೆ ಮನುಷ್ಯತ್ವ ಇಲ್ಲ ಎಂದಿದ್ದರೆ ಬೇಸರವಾಗುತ್ತಿತ್ತು ಎಂದು ಹಾಸ್ಯ ಚಟಾಕಿ ಹಾರಿಸಿದರು.
ವಿಮರ್ಶಕ ಎಸ್.ಆರ್.ವಿಜಯಶಂಕರ ಮಾತನಾಡಿ, ಬರಗೂರರ ಬರಹ ತನ್ಮಯಗೊಳಿಸುತ್ತವೆ ಎಂದು ಹೇಳಿದರು. ಬರಗೂರರ “ಕರುಳು ಕಟ್ಟಿದ ಬರಹ’ ಕೃತಿ ಶೋಧನೆಯ ಭಾಗವಾಗಿ ಮೂಡಿ ಬಂದಿದೆ. ಅಂಕಣ ಸಾಹಿತ್ಯದ ಉತ್ತಮ ಲೇಖನಗಳಿಗೆ ಪುಸ್ತಕ ರೂಪ ನೀಡಲಾಗಿದೆ. ಇವರ ಅಂಕಣ ಬರಹ ಹಲವು ರೀತಿಯ ಚರ್ಚೆಗಳನ್ನು ಹುಟ್ಟುಹಾಕಿವೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್‌ನ ವಿಶ್ರಾಂತ ನ್ಯಾಯಾಧೀಶ, ವಿ.ಗೋಪಾಲಗೌಡ ಮಾತನಾಡಿ, ಎಲ್ಲಾ ಪ್ರಕಾರದ ಸಾಹಿತ್ಯದಲ್ಲಿ ತೊಡಗಿಕೊಂಡಿರುವ ಬರಗೂರು ರಾಮಚಂದ್ರಪ್ಪ ಅವರಿಗೆ ಜ್ಞಾನ ಪೀಠ ಪ್ರಶಸ್ತಿ ದೊರಕಬೇಕು ಎಂದರು. ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ,ಅಂಕಿತ ಪುಸ್ತಕ ಪ್ರಕಾಶನದ ಪ್ರಕಾಶ್ ಕಂಬತ್ತಳ್ಳಿ, ಕನ್ನಡ ಜನಶಕ್ತಿ ಕೇಂದ್ರದ ಸಿ.ಕೆ.ರಾಮೇಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.