ಮೈಸೂರಲ್ಲಿ ಮೈಕೊರೆವ ಚಳಿ!
Team Udayavani, Nov 12, 2018, 6:00 AM IST
ಬೆಂಗಳೂರು: ಮೈಸೂರಲ್ಲಿ ಈಗ ಮೈಕೊರೆವ ಚಳಿ ಇದ್ದು, ಭಾನುವಾರ ಬೆಳಿಗ್ಗೆ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದೆ.
ಅ. 30ರಂದು ಇಲ್ಲಿ ಅತ್ಯಂತ ಕನಿಷ್ಠ 11.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಹತ್ತು ದಿನಗಳ ಅಂತರದಲ್ಲಿ ಮತ್ತೆ ಕನಿಷ್ಠ ತಾಪಮಾನ 13.1 ಡಿಗ್ರಿ ದಾಖಲಾಗಿದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ 2ರಿಂದ 3 ಡಿಗ್ರಿ ಕಡಿಮೆ ಇರುತ್ತದೆ. ಆದರೆ, ಬೆಳಿಗ್ಗೆ 8.30ಕ್ಕೆ ದುಪ್ಪಟ್ಟು ಅಂದರೆ 6 ಡಿಗ್ರಿ ಕುಸಿತ ಕಂಡಿದೆ. ರಾಜ್ಯದಲ್ಲಿ ಭಾನುವಾರದ ಮಟ್ಟಿಗೆ ಅತಿ ಕಡಿಮೆ ಉಷ್ಣಾಂಶ ಇದಾಗಿದೆ.
ಅದೇ ರೀತಿ, ಚಿತ್ರದುರ್ಗ ಮತ್ತು ವಿಜಯಪುರದಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಇದ್ದು, ಕ್ರಮವಾಗಿ 16.2 ಮತ್ತು 16.4 ಡಿಗ್ರಿ ಇದೆ. ಆದರೆ, ಇದಾವುದೂ ದಾಖಲೆ ಪ್ರಮಾಣದ ಕನಿಷ್ಠ ಉಷ್ಣಾಂಶ ಅಲ್ಲ. ಹಿಂದಿನ ವರ್ಷಗಳಲ್ಲಿ ಇದೇ ತಿಂಗಳಲ್ಲಿ ಹಲವು ಬಾರಿ ಇದಕ್ಕಿಂತ ಕಡಿಮೆ ಉಷ್ಣಾಂಶ ದಾಖಲಾದ ಉದಾಹರಣೆಗಳಿವೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಸ್ಪಷ್ಟಪಡಿಸಿದೆ.
ಸುಮಾರು ದಿನಗಳಿಂದ ಮಳೆ ಆಗಿಲ್ಲ. ಮಳೆಗೆ ಪೂರಕವಾದ ಸನ್ನಿವೇಶಗಳೂ ಸೃಷ್ಟಿಯಾಗಿಲ್ಲ. ಇದರಿಂದ ವಾತಾವರಣದಲ್ಲಿ ತೇವಾಂಶ ಇಲ್ಲ. ಒಣಹವೆ ಇರುವುದರಿಂದ ಭೂಮಿಗೆ ಬೀಳುವ ಸೂರ್ಯನ ಕಿರಣಗಳು, ಪ್ರತಿಫಲನಗೊಂಡು ಹೊರಹೋಗುತ್ತವೆ. ಇದು ಕನಿಷ್ಠ ಉಷ್ಣಾಂಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.