ರಾಜಧಾನಿಯಲ್ಲಿ ಕಳೆಗಟ್ಟಿದ ನಾಗರಪಂಚಮಿ

Team Udayavani, Aug 16, 2018, 12:58 PM IST

rajaadhani.jpg

ಬೆಂಗಳೂರು: ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಆಚರಣೆ ಸಂಭ್ರಮ ಬುಧವಾರ ಸಿಲಿಕಾನ್‌ ಸಿಟಿಯಲ್ಲೂ ಕಳೆಗಟ್ಟಿತ್ತು. ಜಿಟಿ ಜಿಟಿ ಮಳೆ ಹಾಗೂ ಸ್ವಾತಂತ್ರೋತ್ಸವದ ಸಂಭ್ರಮ ಹಬ್ಬಕ್ಕೆ ಮತ್ತಷ್ಟು ಮೆರುಗು ತಂದಿತ್ತು.

ಮಲ್ಲೇಶ್ವರದಲ್ಲಿರುವ ಕಾಡುಮಲ್ಲೇಶ್ವರ ದೇವಾಲಯ, ಓಕಳಿಪುರ ಸಮೀಪದ ಅಮ್ಮ ನಾಗಮ್ಮ ದೇವಾಲಯ, ಗವಿಪುರದ ಗವಿ ಗಂಗಾಧರೇಶ್ವರ ದೇವಾಲಯ, ಸಜ್ಜನ ರಾವ್‌ ವೃತ್ತ, ಮೈಸೂರು ರಸ್ತೆಯ ದೊಡ್ಡಆಲದ ಮರ, ಪಾದುರಾಯನಪುರ, ಹಲಸೂರು ಸೇರಿದಂತೆ ಇನ್ನಿತರೆ ದೇವಾಲಯಗಳಲ್ಲಿ ಭಕ್ತಾದಿಗಳ ಸಂಖ್ಯೆ ಹೆಚ್ಚಿತ್ತು.

ಹಬ್ಬದ ಅಂಗವಾಗಿ  ದೇವರಿಗೆ ತಂಬಿಲೆ ಸೇವೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕದಂಥ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಜತೆಗೆ ನಗರದ ವಿವಿಧೆಡೆ ಇರುವ ಈಶ್ವರ ಹಾಗೂ ಸುಬ್ರಹ್ಮಣ್ಯೇಶ್ವರ ದೇವಾಲಯಗಳು, ಅರಳೀ ಕಟ್ಟೆಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ನಾಗರಮೂರ್ತಿಗಳು ಹಾಗೂ ಹುತ್ತಗಳಿಗೆ ಮಹಿಳೆಯರು  ಶ್ರದ್ಧಾಭಕ್ತಿಯಿಂದ ಹಾಲೆರೆದು ಭಕ್ತಿ ಸಮರ್ಪಿಸಿದರು.

ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತುಕೊಂಡಿದ್ದ ಮಹಿಳೆಯರು  ನಾಗಮೂರ್ತಿಗಳಿಗೆ ಹಂಗುನೂಲು ಸುತ್ತಿ ಪ್ರದಕ್ಷಿಣೆ ಹಾಕಿದರು. ಅಲ್ಲದೆ, ಪಂಚಮಿಯ ಹಬ್ಬಕ್ಕೆ ತಯಾರಿಸಿದ್ದ  ತರತರಹದ ಉಂಡೆ, ಕಜ್ಜಾಯ, ನೆನೆದ ಕಡಲೆಕಾಳುಗಳನ್ನು ನೈವೇದ್ಯವಾಗಿ ಅರ್ಪಿಸಿದರು. ಜನ ನಾಗರ ಪಂಚಮಿ ಆಚರಿಸುತ್ತಾ  ಶುಭಾಶಯಳನ್ನು ಪರಸ್ಪರ ವಿನಿಮಯ ಮಾಡಿಕೊಂಡು, ಪ್ರಸಾದ ಹಂಚುತ್ತಿದ್ದ ದೃಶ್ಯಗಳು ಕಂಡುಬಂತು.

ಹೂವು ಹಣ್ಣು/ ತಿಂಡಿ ತಿನಿಸುಗಳ ಮಾರಾಟವೂ ಜೋರು: ಸ್ವಾತಂತ್ರೊತ್ಸವ ಹಾಗೂ ನಾಗರ ಪಂಚಮಿ ಹಬ್ಬ ಹಿನ್ನೆಲೆಯಲ್ಲಿ ಹೂವು, ಹಣ್ಣು ಮಾರಾಟವೂ ಜೋರಾಗಿತ್ತು. ಅಲ್ಲದೆ, ಉತ್ತರಕರ್ನಾಟಕದ ಭಾಗದ ನಾಗರ ಪಂಚಮಿಯ ವಿಶೇಷ ತಿನಿಸುಗಳಾದ ತಂಬಿಟ್ಟು, ಅಳ್ಳಿನ ಉಂಡಿ, ಎಳ್ಳುಂಡಿ, ಶೇಂಗಾ ಉಂಡಿ, ನವಣೆ ಉಂಡಿ, ಬೂಂದಿ ಉಂಡಿ, ಅಂಟಿನ ಉಂಡಿ, ಬೇಸನ್‌ ಉಂಡಿ, ಚಕ್ಕುಲಿ, ನಿಪ್ಪಟ್ಟು, ಅವಲಕ್ಕಿ, ಮಂಡಕ್ಕಿ ವ್ಯಾಪಾರವೂ ಹೆಚಿತ್ತು.

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.