ನಾಡಪ್ರಭು ಸ್ಮರಣೆಗೆ ಸರ್ಕಾರದಿಂದ ವಿಶಿಷ್ಟ ಅಭಿಯಾನ


Team Udayavani, Aug 31, 2022, 6:00 PM IST

tdy-16

ಬೆಂಗಳೂರು: ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ನೆನಪು ಅಜರಾಮರಗೊಳಿಸಲು ಹಾಗೂ ಇದಕ್ಕಾಗಿ ಇಡೀ ನಾಡಿನ ಜನತೆಯನ್ನು ಏಕತೆಯ ಭಾವದಲ್ಲಿ ಒಗ್ಗೂಡಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಇದಕ್ಕಾಗಿ 45 ದಿನಗಳ ವಿಶಿಷ್ಟ ಅಭಿಯಾನವನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ.

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಒಂದೆರಡು ತಿಂಗಳಲ್ಲಿ 108 ಅಡಿ ಎತ್ತರದ ಕೆಂಪೇ ಗೌಡರ ಕಂಚಿನ ಪ್ರತಿಮೆಯಾಗಲಿದ್ದು ಇದಕ್ಕೆ ಪೂರ್ವ ಭಾವಿಯಾಗಿ ‘ಉದ್ಘಾಟನಾ ಅಭಿಯಾನ’ ನಡೆಸಲಿದೆ. ಸೆ.1ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ಹಸಿರು ನಿಶಾನೆ ಕಾಣಲಿರುವ ಅಭಿಯಾನವು ರಾಜ್ಯದ 31 ಜಿಲ್ಲೆಗಳಲ್ಲೂ ನಡೆಯಲಿದೆ. ಇದಕ್ಕೆ ಪೂರಕವಾಗಿ ಅದು “ನಾಡ ಕಟ್ಟೋಣ ಬನ್ನಿ’ ಘೋಷವಾಕ್ಯ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರೂಪಿಸಿದೆ.

ಅಭಿಯಾನದ ಅಡಿಯಲ್ಲಿ ಎಲ್ಲ ಜಿಲ್ಲೆಗಳ ಪ್ರತಿ ಹಳ್ಳಿಯ ಪವಿತ್ರ ಮೃತ್ತಿಕೆ (ಮಣ್ಣು) ಆಯಾ ಊರುಗಳಲ್ಲಿ ರುವ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಕೊಳ, ಚಿಲುಮೆ ಮತ್ತು ಝರಿಗಳಿಂದ ಸಂಗ್ರಹಿಸಲು ಯೋಜನೆ ರೂಪಿಸಲಾಗುತ್ತಿದೆ. ಜತೆಗೆ ನಾಡಿನ ಉದ್ದಗಲಕ್ಕೂ ಇರುವ ಅನುಕರಣೀಯ ಸಾಧಕರ ಮನೆಗಳಿಂದಲೂ ಪವಿತ್ರ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಇದಕ್ಕಾಗಿ ಬೃಹತ್‌ ಎಲ್‌ಇಡಿ ಪರದೆಯನ್ನು ಅಳ ವಡಿಸಿರುವ ತಲಾ ಒಂದು ವಾಹನವನ್ನು ಪ್ರತಿ ಜಿಲ್ಲೆಗೂ ನಿಯೋಜಿಸಲಾಗುವುದು. ಇದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ, ಸಚಿವ ಮತ್ತು ಈ ಪರಿಕಲ್ಪನೆಯ ರೂವಾರಿ ಡಾ.ಸಿ.ಎನ್‌. ಅಶ್ವತ್ಥ ನಾರಾ ಯಣ ಮತ್ತು ನಾಡಿನ ಪ್ರಮುಖ ಸ್ವಾಮೀಜಿಗಳ ಸಂದೇಶಗಳು ಬಿತ್ತರವಾಗಲಿವೆ.

ಜೊತೆಗೆ, ಕೆಂಪೇಗೌಡರಿಗೆ ಸಂಬಂಧಿಸಿದ ಸಾಕ್ಷ್ಯಚಿತ್ರವೂ ಪ್ರಸಾರವಾಗಲಿದೆ ಎಂದು ತಿಳಿದುಬಂದಿದೆ. ಇದಲ್ಲದೆ, ಎಲ್ಲ ಜಿಲ್ಲೆಗಳಲ್ಲೂ ಇರುವ ಮಠ ಮಾನ್ಯ ಗಳ ಶ್ರೀಗಳು, ದೇವಸ್ಥಾನಗಳು, ಸ್ವಾತಂತ್ರ ಹೋರಾಟ ಗಾರರು, ತಾರಾ ವರ್ಚಸ್ಸಿನ ಸಾಧಕರನ್ನು ಕೂಡ ಒಳ ಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಳ್ಳಿಗಳಲ್ಲಿ ನಡೆಯಲಿರುವ “ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ’ವು ಗಿನ್ನಿಸ್‌ ದಾಖಲೆಯಾಗ ಲಿದೆ. ಈ ಅಭಿಯಾನ ನಡೆಯುವ ಒಂದೂವರೆ ತಿಂಗಳುದ್ದಕ್ಕೂ ರಾಜ್ಯದ 10 ಸಾವಿರ ದೇಗುಲಗಳಲ್ಲಿ ನಂದಾದೀಪಗಳು ಪ್ರಜ್ವಲಿಸಲಿದೆ.

ಸೆ.1ರ ಗುರುವಾರ ದೇವನಹಳ್ಳಿಯ ವಿಮಾನ ನಿಲ್ದಾಣದ ಬಳಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ, ನವೆಂಬರ್‌ ಅಥವಾ ಡಿಸೆಂಬರ್‌ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿ, ವಿಮಾನ ನಿಲ್ದಾಣದ ಸಮುಚ್ಚಯದಲ್ಲಿ ತಲೆ ಎತ್ತುತ್ತಿರುವ ಕೆಂಪೇಗೌಡರ ಭವ್ಯವಾದ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸುವುದು ಸರ್ಕಾರದ ಉದ್ದೇಶ ಎಂದು ಹೇಳಲಾಗಿದೆ.

ನಾಡಪ್ರಭು ಕೆಂಪೇಗೌಡರೆಂದರೆ ಪ್ರಗತಿ ಮತ್ತು ಅಭ್ಯುದಯದ ನಾಗಾಲೋಟ ಕ್ಕೊಂದು ಸಂಕೇತ. ಅವರು ಒಂದು ದಿವ್ಯವಾದ ಘಳಿಗೆಯಲ್ಲಿ ಬೆಂಗಳೂರಿನ ಸ್ಥಾಪನೆಗೆ ಶ್ರೀಕಾರ ಹಾಕಿದರು. ಇದರ ಫಲವಾಗಿ ಬೆಂಗಳೂರು ಇಂದು ವಿಶ್ವ ಮಟ್ಟದಲ್ಲಿ ರಾರಾಜಿಸುತ್ತಿದೆ. ಹೀಗಾಗಿಯೇ, ಈ ಪ್ರತಿಮೆಗೆ ‘ಪ್ರಗತಿ ಪ್ರತಿಮೆ’ ಎಂದು ಹೆಸರಿಡಲಾಗುತ್ತಿದೆ. – ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ ಹಾಗೂ ಉಪಾಧ್ಯಕ್ಷರು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ

ಟಾಪ್ ನ್ಯೂಸ್

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.