ನಾಗರಾಜ್ ಮನೆಯಲ್ಲಿ 120 ಕೋಟಿ ರೂ. ಪತ್ತೆ
Team Udayavani, Feb 12, 2017, 3:45 AM IST
ಬೆಂಗಳೂರು :ಆದಾಯ ತೆರಿಗೆ ವಂಚನೆ ಆರೋಪದ ಮೇಲೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ನಿವಾಸ ಮತ್ತು ಕಚೇರಿಗಳ ಮೇಲೆ ನಡೆಸಿದ ದಾಳಿಯಲ್ಲಿ 120 ಕೋಟಿ ರೂ.ನಷ್ಟು ಅಘೋಷಿತ ಆದಾಯ ಮತ್ತು 10 ಕೆಜಿ ಚಿನ್ನ ಪತ್ತೆಯಾಗಿದೆ.
ದಾಳಿ ವೇಳೆ ಅಧಿಕಾರಿಗಳು ನಡೆಸಿದ ಪರಿಶೀಲನೆ ಸಮಯದಲ್ಲಿ 10 ಕೆಜೆ ಚಿನ್ನದ ಜತೆಗೆ 1.10 ಕೋಟಿ ರೂ. ಸಹ ಸಿಕ್ಕಿದ್ದು, ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ, ಸಮರ್ಪಕ ಲೆಕ್ಕವಿಲ್ಲದ ಆಸ್ತಿಗಳ ಮೇಲೆ ಮತ್ತು ವಾಣಿಜ್ಯ ಕಟ್ಟಡಗಳ ನಿರ್ಮಾಣದಲ್ಲಿ ಹೂಡಿಕೆ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.
ಆಸ್ಪತ್ರೆ, ನಿವಾಸಗಳ ದಾಖಲೆಗಳು ಅನುಮಾನಸ್ಪದವಾಗಿದ್ದು, ಸಾಲ ಪಡೆದುಕೊಳ್ಳಲು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತನಿಖೆ ನಡೆಸಿದ್ದು, ಶೀಘ್ರದಲ್ಲಿ ಈ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಲಿದ್ದಾರೆ. ತೆರಿಗೆಯಿಂದ ತಪ್ಪಿಸಿಕೊಳ್ಳಲು ತಪ್ಪು ದಾರಿ ಅನುಸರಿಸುವುದು ಸಹ ಗೊತ್ತಾಗಿದೆ ಎಂದು ಹೇಳಲಾಗಿದೆ.
ಭೂ ಮಾಲೀಕರಿಂದ ಸುಮಾರು 70 ಕೋಟಿ ರೂ. ಪಡೆಯಲಾಗಿದೆ. ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ 560 ಎಕರೆಗೆ ಸಂಬಂಧಪಟ್ಟಂತೆ ಸುಮಾರು 3500 ಭೂ ದಾಖಲೆಗಳು ಪತ್ತೆಯಾಗಿವೆ. ಈ ಬಗ್ಗೆ ವಿಚಾರಣೆ ನಡೆಸಿ ಅಧಿಕೃತ ಮಾಹಿತಿ ಪಡೆಯಲಾಗುವುದು. ಅಲ್ಲದೇ, ಪ್ರತಿಯೊಂದರ ದಾಖಲೆಗಳನ್ನು ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು. ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.