ನಾಗನ ಪರ ವಕೀಲ ರೆಡ್ಡಿಗೆ ಜಾಮೀನು


Team Udayavani, May 19, 2017, 11:36 AM IST

bomb-naga.jpg

ಬೆಂಗಳೂರು: ಬ್ಲ್ಯಾಂಕ್‌ ಆ್ಯಂಡ್‌ ವೈಟ್‌ ದಂಧೆ ಆರೋಪಿ, ಮಾಜಿ ಕಾರ್ಪೋರೇಟರ್‌ ನಾಗರಾಜು ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ವಕೀಲ ಶ್ರೀರಾಮರೆಡ್ಡಿಗೆ ನಗರ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಗುರುವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನಾಗನ ಪ್ರಕರಣದ ತನಿಖೆಯ ಉಸ್ತುವಾರಿ ವಹಿಸಿಕೊಂಡಿರುವ ಕೆ.ಆರ್‌ಪುರಂ ವಿಭಾಗದ ಎಸಿಪಿ ಕೆ.ಪಿ ರವಿಕುಮಾರ್‌ ಅವರನ್ನು ಭೇಟಿಯಾಗಿದ್ದ ವಕೀಲ ಶ್ರೀರಾಮರೆಡ್ಡಿ ಬೆದರಿಕೆ ಹಾಕಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ವಕೀಲ ಶ್ರೀರಾಮರೆಡ್ಡಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ  22ನೇ ಸಿಟಿ ಸಿವಿಲ್‌ ಕೋರ್ಟ್‌, 1 ಲಕ್ಷ ಬಾಂಡ್‌ ಹಾಗೂ ಒಬ್ಬರ ಭದ್ರತಾ ಖಾತ್ರಿ ಒದಗಿಸುವಂತೆ ಷರತ್ತು ವಿಧಿಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತು. ಅಲ್ಲದೆ ಈ ಅರ್ಜಿಯ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ  ಸೂಚಿಸಿ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿತು.

ಏನಿದು ಪ್ರಕರಣ?: ವಂಚನೆ ಅಪಹರಣ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮಾಜಿ ಕಾರ್ಪೋರೇಟರ್‌ ನಾಗನ ಪರ ವಕಾಲತ್ತು ವಹಿಸಿದ್ದ ವಕೀಲ ಶ್ರೀರಾಮರೆಡ್ಡಿ ಮೇ 8ರಂದು ಬೆಳಿಗ್ಗೆ ಸುಮಾರು 11.15ಕ್ಕೆ ಬಾಣಸವಾಡಿ­ಯಯಲ್ಲಿರುವ ಎಸಿಪಿ ಕಚೇರಿಗೆ ತೆರಳಿದ್ದರು.

ಈ ವೇಳೆ ಎಸಿಪಿ ರವಿಕುಮಾರ್‌ ಜೊತೆ ಮಾತನಾಡುತ್ತಾ, ನನ್ನ ಷರತ್ತುಗಳನ್ನು ಒಪ್ಪಿಕೊಂಡರೆ ನಾಗನನ್ನು ಶರಣಾಗತಿ ಮಾಡಿಸುತ್ತೇನೆ. ಇಲ್ಲದಿದ್ದರೆ ನೀವೂ ಸೇರಿದಂತೆ ಪೊಲೀಸ್‌  ಅಧಿಕಾರಿಗಳನ್ನು ಹೈಕೋರ್ಟ್‌ ಮುಂದೆ ನಿಲ್ಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಜತೆಗೆ ಅನಗತ್ಯವಾಗಿ ವಾಗ್ವಾದ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಎಸಿಪಿ ರವಿಕುಮಾರ್‌ ನೀಡಿದ ದೂರಿನ ಅನ್ವಯ, ನ್ಯಾಯಾಲಯದ ಅನುಮತಿ ಪಡೆದುಕೊಂಡಿದ್ದ ಬಾಣಸವಾಡಿ ಠಾಣೆ ಪೊಲೀಸರು ಶ್ರೀರಾಮರೆಡ್ಡಿ ವಿರುದ್ಧ ಬೆದರಿಕೆ ಹಾಗೂ ಸರ್ಕಾರಿ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಎಫ್ಐಆರ್‌ ದಾಖಲಿಸಿದ್ದರು. ಈ ನಡುವೆ ನಾಗ ಮತ್ತು ಆತನ ಪುತ್ರರು ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. 

ಟಾಪ್ ನ್ಯೂಸ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.