ಹ್ಯಾರಿಸ್ ಪುತ್ರ ಪೊಲೀಸ್ ವಶ
Team Udayavani, Feb 20, 2018, 6:00 AM IST
ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಕೊನೆಗೂ ಪೊಲೀಸರಿಗೆ ಶರಣಾಗಿದ್ದಾನೆ.
ಸೋಮವಾರ ಬೆಳಗ್ಗೆ 10.45ರ ಸುಮಾರಿಗೆ ಆಟೋದಲ್ಲಿ ಪೊಲೀಸ್ ಠಾಣೆಗೆ ಬಂದ ಆರೋಪಿ ಮೊಹಮ್ಮದ್‌ನನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಒಳಗೆ ಕರೆದೊಯ್ದರು. ಬೆನ್ನಲ್ಲೇ ಆರೋಪಿ ಮೊಹಮ್ಮದ್ ಹಾಗೂ ಇತರೆ ಆರು ಸಹಚರರನ್ನು ಸಂಜೆ 5 ಗಂಟೆಗೆ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಎರಡು ದಿನ ವಶಕ್ಕೆ ಪಡೆದಿದ್ದಾರೆ.
ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳಾದ ಮಂಜುನಾಥ್, ಅರುಣ್ ಬಾಬು, ಮೊಹಮ್ಮದ್ ಅಬ್ರಾಸ್, ಬಾಲಕೃಷ್ಣ, ಅಭಿಷೇಕ್, ನಫಿ ಮೊಹಮ್ಮದ್‌ನನ್ನು ಬಂಧಿಸಲಾಗಿದ್ದು, ಮತ್ತೂಬ್ಬ ಆರೋಪಿ ಶ್ರೀಕೃಷ್ಣ ನಾಪತ್ತೆಯಾಗಿದ್ದಾನೆ.
ಆರೋಪಿಗಳ ಬಂಧನ ವಿಳಂಬ ಖಂಡಿಸಿ ಬೆಳಗ್ಗೆ 10 ಗಂಟೆ ಸುಮಾರಿಗೆ ಬಿಜೆಪಿ ಮತ್ತು ಜೆಡಿಎಸ್‌ನ ನೂರಾರು ಕಾರ್ಯಕರ್ತರು ಕಬ್ಬನ್ ಪಾರ್ಕ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಜತೆಗೆ ಆರೋಪಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದರು. ಪೊಲೀಸರ ನಿರ್ಲಕ್ಷ್ಯ ವಿರೋಧಿಸಿ ಪ್ರತಿಭಟನಾಕಾರರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಸಿಸಿಬಿ ಪೊಲೀಸರಿಂದ ವಿಚಾರಣೆ
ಅಪರಾಹ್ನ 12 ಗಂಟೆ ವೇಳೆ ಕಬ್ಬನ್ ಪಾರ್ಕ್ ಠಾಣೆಗೆ ಆಗಮಿಸಿದ ಸಿಸಿಬಿ ಪೊಲೀಸರು ಮಧ್ಯಾಹ್ನ 3.45ರವರೆಗೆ ಎಲ್ಲ ಆರೋಪಿಗಳ ಬೆರಳಚ್ಚು ಹಾಗೂ ಹೇಳಿಕೆ ದಾಖಲಿಸಿಕೊಂಡರು. 4 ಗಂಟೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಎರಡು ದಿನ ವಶಕ್ಕೆ ಪಡೆದು ಕೊನೆಗೆ ಕಬ್ಬನ್ ಪಾರ್ಕ್ ಠಾಣೆಯಲ್ಲೇ ಆರೋಪಿಗಳನ್ನಿಟ್ಟು ವಿಚಾರಣೆ ಮುಂದುವರಿಸಿದ್ದಾರೆ.
10 ದಿನ ಕೇಳಿದ್ದಕ್ಕೆ 2 ದಿನ ಕೊಟ್ರಾ
ಸರಿಯಾಗಿ 5 ಗಂಟೆಗೆ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಮೊಹಮ್ಮದ್ ಸೇರಿ ಆರು ಮಂದಿ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಿದರು. ಈ ವೇಳೆ ಆರೋಪಿಗಳ ವಿರುದ್ಧ ಹೆಚ್ಚುವರಿಯಾಗಿ ಕೊಲೆ ಯತ್ನ ಪ್ರಕರಣ ದಾಖಲಿಸಿಬೇಕು ಎಂದು ಮನವಿ ಮಾಡಿದರು. ಈ ಮನವಿಗೆ ನ್ಯಾಯಾಧೀಶರು ಸಹಮತ ವ್ಯಕ್ತಪಡಿಸಿದರು.
ಆನಂತರ ಪ್ರಕರಣ ಗಂಭೀರ ಸ್ವರೂಪದಾಗಿದ್ದು, 10 ದಿನ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ನಿರಾಕರಿಸಿ ಸರ್ಕಾರಿ ಅಭಿಯೋಜಕ ಅರುಣ್ ಕನಿಷ್ಠ 8 ದಿನಗಳಾದರೂ ವಶಕ್ಕೆ ನೀಡುವಂತೆ ಕೇಳಿಕೊಂಡರು. ಆಗ ನ್ಯಾಧೀಶಯರು, ಅಷ್ಟು ದಿನ ಏಕೆ ವಶಕ್ಕೆ ಬೇಕು, ರಿಕವರಿ ಏನಾದರೂ ಇದೆಯೇ ಬೇರೆ ಜಿಲ್ಲೆ ಅಥವಾ ಬೇರೆಡೆ ಹೋಗಬೇಕೇ ಎಂದು ಪ್ರಶ್ನಿಸಿದರು. ಇದಕ್ಕೆ ತನಿಖಾಧಿಕಾರಿಗಳು, ಘಟನಾ ಸ್ಥಳವನ್ನು ಪರಿಶೀಲಿಸಿ, ಸಾಕ್ಷ್ಯಗಳನ್ನು ಸಂಗ್ರಹಿಸಬೇಕು, ಬೇರೆಯವರ ಮೇಲೂ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ. ಅಲ್ಲದೇ ಪ್ರಕರಣ ಸಾಕಷ್ಟು ಸೂಕ್ಷ್ಮವಾಗಿರುವುದರಿಂದ 8ದಿನ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಈ ಮನವಿಗೆ ಒಪ್ಪದ ನ್ಯಾಯಾಧೀಶರು, ಕೇವಲ ವಿಚಾರಣೆಗೆ ಎರಡು ಮಾತ್ರ ನೀಡುವುದಾಗಿ ಆದೇಶ ಹೊರಡಿಸಿ, ಪ್ರಕರಣವನ್ನು ಫೆ.21ಕ್ಕೆ ವಿಚಾರಣೆ ಮುಂದೂಡಿದರು.
ವಿದ್ವತ್ ಮೇಲೂ ಪ್ರಕರಣ
ಮೊಹಮ್ಮದ್ ವಿರುದ್ಧ ಕೊಲೆ ಯತ್ನ ಆರೋಪ ಪ್ರಕರಣದ ಬೆನ್ನಲ್ಲೇ ಆರೋಪಿ ಅರುಣ್‌ಬಾಬು ವಿದ್ವತ್ ವಿರುದ್ಧ ದೂರು ನೀಡಿದ್ದಾನೆ. ನಾನು ನನ್ನ ಸ್ನೇಹಿತರು ಯುಬಿ ಸಿಟಿಯ ಹೋಟೆಲ್‌ಗೆ ಹೋದಾಗ ವಿದ್ವತ್ ಕಾಲು ಮೊಹಮ್ಮದ್ ಸ್ನೇಹಿತನಿಗೆ ತಗುಲಿದೆ. ಇದೇ ವಿಚಾರವಾಗಿ ಜಗಳವಾಗಿದ್ದು, ವಿದ್ವತ್ ನಾನು ಯಾರು ಗೊತ್ತಾ..? ಯಾರ ಪುತ್ರ ಎಂದು ತಿಳಿದಿದೆಯಾ.. ಎಂದು ತಮ್ಮ ಮೇಲೆ ದಬ್ಟಾಳಿಕೆ ನಡೆಸಿ ಕೆನ್ನೆಗೆ ಹೊಡೆದಿದ್ದಾನೆ. ಬಳಿಕ ವಿದ್ವತ್ ಸ್ನೇಹಿತರೆಲ್ಲರೂ ನಮ್ಮ ಮೇಲೆ ಹಲ್ಲೆ ನಡೆಸಿದರು. ಆಗ ಕಂಠಪೂರ್ತಿ ಮದ್ಯ ಸೇವಿಸಿದ್ದ ವಿದ್ವತ್ ಕೆಳಗೆ ಬಿದ್ದು ಮುಖಕ್ಕೆ ಗಾಯಮಾಡಿಕೊಂಡಿದ್ದಾನೆ ಎಂದು ಅರುಣ್ ಬಾಬು ದೂರಿನಲ್ಲಿ ಆರೋಪಿಸಿದ್ದಾನೆ. ವಿದ್ವತ್ ವಿರುದ್ಧ ಐಪಿಸಿ ಸೆಕ್ಷನ್ 341, 323, 504 ಹಾಗೂ 34 ಅಡಿಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪ್ಪ ಹೇಳಿದಕ್ಕೆ ಆರೋಪಿ ಶರಣು!
ಪ್ರಕರಣ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕೂಡಲೇ ಶಾಸಕ ಹ್ಯಾರಿಸ್ ಮನೆಯಲ್ಲಿ ಶೋಧ ಕಾರ್ಯ ನಡೆಸಿದರು. ಈ ವೇಳೆ ಹ್ಯಾರಿಸ್, ತಮ್ಮ ಪುತ್ರ ಮೊಹಮ್ಮದ್ ಮನೆಯಲ್ಲಿ ಇಲ್ಲ. ಆತನ ಮೊಬೈಲ್ ನಂಬರ್ ಕೂಡ ಸ್ವಿಚ್ ಆಫ್ ಆಗಿದೆ. ನಾನೇ ಆತನಿಗೆ ಶರಣಾಗಲು ಸೂಚಿಸಿದ್ದೇನೆ ಎಂದು ತನಿಖಾಧಿಕಾರಿಗಳಿಗೆ ಹೇಳಿದ್ದಾರೆ. ಇದಾದ ಕೇವಲ ಒಂದು ಗಂಟೆಯಲ್ಲೇ ಮೊಹಮ್ಮದ್ ಆಟೋದಲ್ಲಿ ಆಗಮಿಸಿ ಕಬ್ಬನ್ ಪಾರ್ಕ್ ಠಾಣೆಗೆ ಶರಣಾಗಿದ್ದಾನೆ.
ಯುಬಿ ಸಿಟಿ ಪಕ್ಕದಲ್ಲೇ ಇದ್ದ ಆರೋಪಿ
ಶನಿವಾರ ರಾತ್ರಿ ವಿದ್ವತ್ ಸ್ನೇಹಿತ ವೆಂಕಟಾಚಲಯ್ಯ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡುತ್ತಿದ್ದಂತೆ ಆರೋಪಿ ಮೊಹಮ್ಮದ್ ನಲಪಾಡ್ ಹ್ಯಾರಿಸ್ ತಲೆಮರೆಸಿಕೊಂಡಿದ್ದ. ಇತ್ತ ಪೊಲೀಸರು ಆರೋಪಿಗೆ ಹುಡುಕಾಟ ನಡೆಸುತ್ತಿದ್ದರು. ಆದರೆ, ಆರೋಪಿ ಮೊಹಮ್ಮದ್ ಮನೆಗೆ ಹೋದರೆ ಪೊಲೀಸರು ಬಂಧಿಸುತ್ತಾರೆ ಎಂಬ ಆತಂಕದಲ್ಲಿ ಯುಬಿ ಸಿಟಿ ಪಕ್ಕದಲ್ಲಿರುವ 7 ಸ್ಟಾರ್ ಹೋಟೆಲ್‌ನ ಕೊಠಡಿಯೊಂದರಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದ ಎಂದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಆರೋಪಿಗಳಿಗೆ ರಾಜಮರ್ಯಾದೆ
ಪ್ರಕರಣ ಸಿಸಿಬಿಗೆ ವರ್ಗಾವಣೆಗೊಂಡಿದ್ದರೂ ಆರೋಪಿಗಳನ್ನು ಕಬ್ಬನ್ ಪಾರ್ಕ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಇದರ ಹಿಂದಿನ ಉದ್ದೇಶ ಬೇರೆಯದ್ದೆ ಆಗಿದ್ದು, ಠಾಣೆಯಿಂದ ಸ್ವಲ್ಪ ದೂರದಲ್ಲಿರುವ ಹ್ಯಾರಿಸ್ ಹೋಟೆಲ್‌ನಿಂದಲೇ ಆರೋಪಿಗಳಿಗೆ ಊಟ, ಟೀ, ಕಾಫಿ ಇತರೆ ಆಹಾರ ಪದಾರ್ಥ ಸರಬರಾಜು ಮಾಡಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇಲ್ಲಿಯೇ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೆಷನ್ ಕೋರ್ಟ್‌ನಲ್ಲಿ ಜಾಮೀನು ಅರ್ಜಿ
ಆರೋಪಿಗಳ ವಿರುದ್ಧ ಕೊಲೆ ಯತ್ನ (ಐಪಿಸಿ 307) ಪ್ರಕರಣ ದಾಖಲಿಸಿದ್ದರಿಂದ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನು ದೊರೆಯುವುದಿಲ್ಲ. ಹೀಗಾಗಿ ಮಂಗಳವಾರ ಅಥವಾ ಬುಧವಾರ ಸೆಷನ್ಸ್ ಕೋರ್ಟ್‌ನಲ್ಲಿ ಆರೋಪಿಗಳ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.