ಕೃಷಿ ಕಾನೂನು ಅನಿವಾರ್ಯತೆ ಪ್ರತಿಭಟನಾಕಾರರಿಗೆ ಅರ್ಥ ಮಾಡಿಸಬೇಕು :ಕಟೀಲ್
Team Udayavani, Feb 8, 2021, 9:45 PM IST
ಬೆಂಗಳೂರು: ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಮೂರು ನೂತನ ಕೃಷಿ ಕಾಯ್ದೆಗಳ ಬಗ್ಗೆ ವಿವರವಾಗಿ ಮಾತನಾಡಿದ್ದು, ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಕಾಯಿದೆಗಳ ಅನುಷ್ಠಾನ ಅನಿವಾರ್ಯ ಎಂಬುದನ್ನು ಪ್ರತಿಭಟನಾಕಾರರಿಗೆ ಅರ್ಥ ಮಾಡಿಸಿ, ದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕಾಗಿದೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಇಂದು ಹೊರಡಿಸಲಾದ ಪ್ರಕಟನೆಯಲ್ಲಿ “ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಆಧುನೀಕರಣ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಮುಂದುವರಿಕೆ, 80 ಕೋಟಿ ಬಡವರಿಗೆ ಕಡಿಮೆ ದರದಲ್ಲಿ ಪಡಿತರ ವಿತರಣೆ ಮುಂದುವರಿಯುವುದೆಂದು ಪ್ರಧಾನಿ ಹೇಳಿರುವುದು ಅವರಿಗೆ ಬಡವರ ಕುರಿತು ಇರುವ ಕಳಕಳಿಗೆ ಸ್ಪಷ್ಟ ಉದಾಹರಣೆ.
ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಕಾಯಿದೆಗಳ ಅನುಷ್ಠಾನ ಅನಿವಾರ್ಯ. ಈ ವಿಚಾರದಲ್ಲಿ ವಿರೋಧ ಪಕ್ಷಗಳ ಸಹಕಾರ ಬೇಕಿದೆ ಎಂದು ಪ್ರಧಾನಿಗಳು ತಿಳಿಸಿದ್ದಾರೆ. ಸಣ್ಣ ರೈತರ ಪರಿಸ್ಥಿತಿ ಸುಧಾರಣೆಗಾಗಿ ರಸಗೊಬ್ಬರ ಸರಿಯಾಗಿ ದೊರೆಯುವಂತೆ ನೋಡಿಕೊಳ್ಳಲಾಗಿದೆ. ದಾಖಲೆಯ ಉತ್ಪಾದನೆಯೂ ನಮ್ಮದಾಗಿದೆ. ರೈತರಿಂದ ಉತ್ಪನ್ನಗಳ ದಾಖಲೆ ಪ್ರಮಾಣದ ಖರೀದಿಯೂ ನಡೆದಿದೆ ಎಂದು ಪ್ರಧಾನಿಯವರು ತಿಳಿಸಿರುವುದನ್ನು ಕಟೀಲ್ ಸ್ವಾಗತಿಸಿದ್ದಾರೆ.
ಇದನ್ನೂ ಓದಿ : ಮಾರ್ಚ್‌ನಲ್ಲಿ ಭಾರತಕ್ಕೆ ಬರಲಿವೆ 17 ರಫೇಲ್ ವಿಮಾನಗಳು : ರಕ್ಷಣಾ ಸಚಿವ
ಫಸಲ್ ಬಿಮಾ ಯೋಜನೆಯಡಿ ರೈತರಿಗೆ 90,000 ಕೋಟಿ ರೂಪಾಯಿ ನೀಡಲಾಗಿದೆ. ಪ್ರತಿ ರೈತರಿಗೆ ಕ್ರೆಡಿಟ್ ಕಾರ್ಡ್ ನೀಡುತ್ತಿರುವುದು, ಮೀನುಗಾರರಿಗೂ ಇಂಥ ಸೌಲಭ್ಯಗಳ ವಿಸ್ತರಣೆ ಕುರಿತು ಪ್ರಧಾನಿಗಳಾದ ನರೇಂದ್ರ ಮೋದಿಯವರು ತಿಳಿಸಿದ್ದಾರೆ. ಕೃಷಿ ಮಾರುಕಟ್ಟೆಯ ನ್ಯೂನತೆಗಳನ್ನು ನಿವಾರಿಸುವ ದೃಷ್ಟಿಯಿಂದ ಹಿಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಇದೇ ಮಾದರಿಯ ಕೃಷಿ ಸುಧಾರಣೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದುದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ವಿವರಿಸಿದ್ದಾರೆ.
ನೇತಾಜಿಯವರ ತತ್ವ ಹಾಗೂ ಆದರ್ಶಗಳನ್ನು ನಾವು ಮರೆಯುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿದ ಪ್ರಧಾನಿ, ಜಲ, ಭೂಮಿ, ಆಕಾಶ, ಬಾಹ್ಯಾಕಾಶ ಸೇರಿದಂತೆ ಸರ್ವ ಕ್ಷೇತ್ರಗಳಲ್ಲಿ ತನ್ನನ್ನು ರಕ್ಷಿಸಿಕೊಳ್ಳುವ ಶಕ್ತಿಯನ್ನು ಭಾರತ ಹೊಂದಿದೆ ಎಂದು ತಿಳಿಸಿದ್ದಾರೆ. ಸರ್ಜಿಕಲ್ ದಾಳಿ ಅಥವಾ ವೈಮಾನಿಕ ದಾಳಿಗಳಲ್ಲಿ ದೇಶದ ಸಾಮಥ್ರ್ಯ ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ.
ಭಾರತದ ರಾಷ್ಟ್ರೀಯತೆಯು ಸಂಕುಚಿತತೆಯನ್ನು ಹೊಂದಿಲ್ಲ. ಸ್ವಾರ್ಥ ಅಥವಾ ಆಕ್ರಮಣಕಾರಿಯಾಗಿಲ್ಲ. ಆದ್ದರಿಂದ ನಮ್ಮ ರಾಷ್ಟ್ರೀಯತೆಯ ಮೇಲೆ ನಡೆಯುತ್ತಿರುವ ದಾಳಿಯ ವಿರುದ್ಧ ಪ್ರತ್ಯುತ್ತರ ನೀಡುವುದು ಅವಶ್ಯಕ. ದೇಶದ ವಿದೇಶಿ ವಿನಿಮಯ ಸಂಗ್ರಹವು ಗರಿಷ್ಠ ಮಟ್ಟದಲ್ಲಿದೆ. ಮೊಬೈಲ್ ಉತ್ಪಾದನೆ ಹಾಗೂ ಇಂಟರ್‍ನೆಟ್ ಬಳಕೆ ವಿಚಾರದಲ್ಲೂ ಜಾಗತಿಕವಾಗಿ ಎರಡನೇ ಸ್ಥಾನದಲ್ಲಿ ಇರುವುದನ್ನು ಪ್ರಧಾನಿಗಳು ಜನತೆಗೆ ವಿವರಿಸಿದ್ದಾರೆ ಎಂದು ಹೇಳಿದ್ದಾರೆ.
ದೇಶದ 75ನೇ ಸ್ವಾತಂತ್ರ್ಯದ ಹಬ್ಬವನ್ನು ತಾಯಿ ಭಾರತಿಯ ಮಕ್ಕಳಂತೆ ನಾವು ಆಚರಿಸಬೇಕು. ಕೊರೋನಾ ಸಮರದಲ್ಲಿ ನಮ್ಮ ಗೆಲುವು ದೇಶದ ಎಲ್ಲಾ ನಾಗರಿಕರ ಗೆಲುವು ಎಂದು ಪ್ರಧಾನಿಗಳು ತಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕೊರೋನಾ ವಿರುದ್ಧ ದೇಶದ ಜನರು ಹೊಸ ಹುಮ್ಮನಸ್ಸಿನೊಂದಿಗೆ ಹೋರಾಡಿ ಗೆದ್ದಿದ್ದಾರೆ ಎಂದು ಪ್ರಧಾನಿಗಳು ನುಡಿದಿದ್ದಾರೆ ಎಂದು ತಿಳಿಸಿರುವ ಕಟೀಲ್ , ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.