ಮೆಟ್ರೋಗೆ ನಾಡಪ್ರಭು ಹೆಸರಿಡಿ
Team Udayavani, Jul 24, 2017, 11:42 AM IST
ಬೆಂಗಳೂರು: “ನಮ್ಮ ಮೆಟ್ರೋ’ಗೆ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ನಾಮಕರಣ ಮಾಡುವಂತೆ ಶ್ರೀಸ್ಪಟಿಕಮಠದ ಶ್ರೀ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದ್ದಾರೆ.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಆಯೋಜಿಸಿದ್ದ ಜಾನಪದ ಸಂಭ್ರಮ ಮತ್ತು ಹಿರಿಯ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು, ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾದವರಲ್ಲ. ಸಾಮಾಜಿಕ ನ್ಯಾಯದ ಹರಿಕಾರರು. ಹಾಗಾಗಿ ನಮ್ಮ ಮೆಟ್ರೋಗೆ ಅವರ ಹೆಸರಿಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
12ನೇ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರ ಭಾವಚಿತ್ರಗಳನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕುವುದನ್ನು ಕಡ್ಡಾಯಗೊಳಿಸಿರುವಂತೆ ಕೆಂಪೇಗೌಡರ ಭಾವಚಿತ್ರವನ್ನು ಕೂಡ ಹಾಕುವ ತೀರ್ಮಾನವನ್ನು ಸರ್ಕಾರ ಕೈಗೊಳ್ಳಬೇಕು. ಹೊಸದಾಗಿ ಸ್ಥಾಪನೆಯಾಗಲಿರುವ ಬೆಂಗಳೂರು ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಕೆಂಪೇಗೌಡರ ಹೆಸರಿಡಬೇಕು. ಜತೆಗೆ ಬೆಂಗಳೂರಿನಲ್ಲಿ 100 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಸ್ಥಾಪನೆಯಾಗಬೇಕು.
ಕೆಂಪೇಗೌಡರ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಲು ಅವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಾತಿ ಗಣತಿಯಿಂದ ಸಮುದಾಯವನ್ನು ಛಿದ್ರಗೊಳಿಸುವ ಕೆಲಸ ಆಗುತ್ತದೆ. ಇದರಿಂದ ಐಕ್ಯತೆಗೆ ಧಕ್ಕೆಯಾಗುತ್ತದೆ. ಸರ್ಕಾರ ಜಾತಿಗಣತಿಯನ್ನು ಕೈಬಿಟ್ಟು ಸಮಾಜದ ಐಕ್ಯತೆ ಕಾಪಾಡಬೇಕು ಎಂದು ಸಲಹೆ ನೀಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಸತಿ ಸಚಿವ ಎಂ. ಕೃಷ್ಣಪ್ಪ, ಮೇಯರ್ ಜಿ. ಪದ್ಮಾವತಿ, ವಿಧಾನ ಪರಿಷತ್ ಸದಸ್ಯ ಎ.ಶರವಣ, ನಟ ಶ್ರೀನಗರ ಕಿಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.