ನಟರಾಜ್ ಹತ್ಯೆ ಹಿಂದೆಪೆಟ್ಟಿಕೋಟ್ ಕೈವಾಡ
Team Udayavani, Jan 18, 2018, 12:38 PM IST
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ನಟರಾಜ್ ಹತ್ಯೆ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಅಕ್ರಮ ಪಾಲುದಾರ ಪೆಟ್ಟಿಕೋಟ್ ಚಂದ್ರಪ್ಪ ಅವರ ಕುಮ್ಮಕ್ಕಿದೆ ಎಂದು ಬಿಜೆಪಿ ನಗರ ವಕ್ತಾರ ಎನ್.ಆರ್. ರಮೇಶ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿರುವ ಕೆಜಿ ರಸ್ತೆಯಲ್ಲಿರುವ ಗುಪ್ತಾ ಮಾರ್ಕೆಟ್‌ನ ಪೆಟ್ಟಿಕೋಟ್ ಚಂದ್ರಪ್ಪನ ಜತೆ ದಿನೇಶ್ ಗುಂಡೂರಾವ್ ಅಕ್ರಮವಾಗಿ ವಾಣಿಜ್ಯ ಕಟ್ಟಡ ನಿರ್ಮಿಸುತ್ತಿರುವುದನ್ನು ಎಸ್. ನಟರಾಜ್ ಪಾಲಿಕೆ ಸಭೆಯಲ್ಲಿ ಪ್ರಸ್ತಾಪಿಸಿದ್ದರು.
ಈ ಹಿನ್ನೆಲೆಯಲ್ಲಿ ಪೆಟ್ಟಿಕೋಟ್ ಚಂದ್ರಪ್ಪ, ನಟರಾಜ್ ಮೇಲೆ ದ್ವೇಷ ಸಾಧಿಸುತ್ತಿದ್ದರು. ಹೀಗಾಗಿ 2011ರ ಅ.1ರಂದು ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ನಟರಾಜ್ ಕೊಲೆ ಮಾಡಲಾಗಿತ್ತು ಎಂದು ರಮೇಶ್ ಆರೋಪಿಸಿದ್ದಾರೆ. ನಟರಾಜ್ ಹತ್ಯೆ ಆರೋಪದಲ್ಲಿ 11 ಜನರನ್ನು ಬಂಧಿಸಲಾಗಿತ್ತು. ಈ ಕೊಲೆಯ ಸತ್ಯ ಹೊರ ಬರಲು ಪಾಲ್, ಮುರುಗನ್, ಮಣಿ, ಅಶೋಕ್ ಬಿ. ದಾನಿ, ಪೆಟ್ಟಿಕೋಟ್ ಚಂದ್ರಪ್ಪ ಮತ್ತು ವೈಯಾಲಿ ಕಾವಲ್ ಶಾಂತಿ ಎನ್ನುವವರನ್ನು ಮಂಪರು ಪರೀಕ್ಷೆಗೆ ಒಳ ಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.