“ತುರ್ತು ಸ್ಪಂದನ ದಳ’ರಚನೆ
Team Udayavani, Aug 19, 2018, 6:05 AM IST
ಬೆಂಗಳೂರು: ಭಾರೀ ಮಳೆ ಮತ್ತು ಗುಡ್ಡಗಳ ಕುಸಿತದಿಂದ ಅಲ್ಲಲ್ಲಿ ದಾರಿ ಮಧ್ಯೆ ಸಿಲುಕಿರುವ ಪ್ರಯಾಣಿಕರ ರಕ್ಷಣೆಗಾಗಿ ಕೆಎಸ್‌ಆರ್‌ಟಿಸಿ “ತುರ್ತು ಸ್ಪಂದನ ದಳ’ ರಚಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಈ ದಳ ಕಾರ್ಯಾಚರಣೆ ಮಾಡಲಿದೆ. ಈ ಕಾರ್ಯಕ್ಕಾಗಿ ಪ್ರತಿ ಘಟಕದಿಂದ ತಲಾ ಎರಡು ಬಸ್‌ಗಳು, ಇಬ್ಬರು ಚಾಲಕರು ಹಾಗೂ ಇಬ್ಬರು ನಿರ್ವಾಹಕರನ್ನು ನಿಯೋಜಿಸಿದ್ದು, ಇವುಗಳನ್ನು ಬಳಸಿಕೊಂಡು ಆಯಾ ಜಿಲ್ಲಾಡಳಿತ ಪರಿಹಾರ ಕ್ರಮ ಕೈಗೊಳ್ಳಬಹುದು.
ಮಂಗಳೂರು, ಪುತ್ತೂರು, ಚಿಕ್ಕಮಗಳೂರು, ಹಾಸನ, ಮೈಸೂರು, ಶಿವಮೊಗ್ಗದಿಂದ ಒಟ್ಟಾರೆ 21 ಘಟಕಗಳಿಂದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಬಸ್‌ಗಳಲ್ಲಿ ಪರಿಹಾರ ಸಾಮಗ್ರಿಗಳನ್ನು ಉಚಿತವಾಗಿ ಸಾಗಿಸಬಹುದು. ದಾರಿ ಮಧ್ಯೆ ಸಿಲುಕಿದ ಪ್ರಯಾಣಿಕರನ್ನೂ ಕೊಂಡೊಯ್ಯಬಹುದು. ಪರಿಹಾರ ಕಾರ್ಯಕ್ಕೆ ಅಧಿಕಾರಿಗಳ ತಂಡವನ್ನು ರಚಿಸಿದ್ದು, ಇದರಲ್ಲಿ ಆರೂ ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿ,ಯಾಂತ್ರಿಕ ಶಿಲ್ಪಿ, ಸಂಚಲನಾಧಿಕಾರಿಗಳು ಇರುತ್ತಾರೆ. ಜತೆಗೆ, ನಿಯಂತ್ರಣ ಕೊಠಡಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ. ಮಾಹಿತಿಗೆ ಮೊ: 77609 90034/ 77609 90035 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.