ಪ್ರಕೃತಿ ಚಿಕಿತ್ಸೆಗೆ ಮೊರೆ ಹೋದ ಬಿಎಸ್‌ವೈ
Team Udayavani, Jul 27, 2018, 6:45 AM IST
ಬೆಂಗಳೂರು:ಪ್ರಕೃತಿ ಚಿಕಿತ್ಸೆ, ಸಿದ್ದರಾಮಯ್ಯ ನಂತರ ಇದೀಗ ಯಡಿಯೂರಪ್ಪ ಸರದಿ.
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಆಧ್ಯಕ್ಷ ಸಿದ್ದರಾಮಯ್ಯ ಅವರು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿ ತೂಕ ಇಳಿಸಿಕೊಂಡ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದಾರೆ. ಬುಧವಾರ ಸಂಜೆ ನಗರದ ಹೊರವಲಯದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿರುವ ಯಡಿಯೂರಪ್ಪ ಮೂರು ದಿನ ಅಲ್ಲೇ ಉಳಿಯಲಿದ್ದಾರೆ.
ನಿರಂತರ ಪ್ರವಾಸದಿಂದ ಬಳಲಿರುವ ಯಡಿಯೂರಪ್ಪ ಪ್ರಕೃತಿ ಚಿಕಿತ್ಸಾಲಯದಲ್ಲಿ ವಿವಿಧ ಚಿಕಿತ್ಸೆಗಳನ್ನು ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಷಾಢ ಮಾಸದ ನಂತರ ರಾಜ್ಯ ಪ್ರವಾಸ ಕೈಗೊಳ್ಳಲು ಯಡಿಯೂರಪ್ಪ ತೀರ್ಮಾನಿಸಿದ್ದು, ಅದಕ್ಕಾಗಿ ಫಿಟ್‌ನೆಸ್ ಕಾಪಾಡಿಕೊಳ್ಳುತ್ತಿದ್ದಾರೆ ಎಂದ ತಿಳಿದು ಬಂದಿದೆ.
ಕೋರ್ ಕಮಿಟಿ ಸಭೆ
ಈಮಧ್ಯೆ, ಶನಿವಾರ ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿದ್ದು, ಲೋಕಸಭೆ ಚುನಾವಣೆಗೆ ಸಿದ್ಧತೆ, ಗೆಲುವಿನ ಕಾರ್ಯತಂತ್ರ, ಅಭ್ಯರ್ಥಿಗಳ ಆಯ್ಕೆ ಕುರಿತು ಸಮಾಲೋಚನೆ ನಡೆಸುವ ಸಾಧ್ಯತೆಯಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜುಲೈ ಮತ್ತು ಆಗಸ್ಟ್‌ನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಬೇಕಿತ್ತಾದರೂ ಮಳೆ ಹಿನ್ನೆಲೆಯಲ್ಲಿ ಮುಂದೂಡಲಾಯಿತು. ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್‌ನಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.