20 ದಿನಗಳ ಬಳಿಕ ಉಕ್ರೇನ್ ನಿಂದ ಬೆಂಗಳೂರು ತಲುಪಿದ ನವೀನ್ ಪಾರ್ಥಿವ ಶರೀರ; ಸಿಎಂ ನಮನ

ಅಸಾಧ್ಯ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಭಗೀರಥ ಪ್ರಯತ್ನದಿಂದ ಸಾಧಿಸಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Team Udayavani, Mar 21, 2022, 9:31 AM IST

news

ಬೆಂಗಳೂರು: ಉಕ್ರೇನ್ ನಿಂದ ನವೀನ್ ಮೃತ ದೇಹವನ್ನು ತರುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರ ಭಗೀರಥ ಪ್ರಯತ್ನದಿಂದ ಸಾಧಿಸಿ, ಐತಿಹಾಸಿಕ ಕೆಲಸವನ್ನು ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಸೋಮವಾರ (ಮಾರ್ಚ್ 21) ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹವನ್ನು ಬರಮಾಡಿಕೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಕ್ರೇನ್ ಸುತ್ತಲಿನ ಎಲ್ಲಾ ದೇಶಗಳ ಸಂಪರ್ಕವನ್ನು ಬೆಳೆಸಿ ರಾಜತಾಂತ್ರಿಕವಾಗಿ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ಇಡೀ ಪ್ರಕ್ರಿಯೆ ಸಮನ್ವಯದ ಆಧಾರದ ಮೇಲೆಯೇ ಆಗಿದೆ. ನವೀನ್ ವೈದ್ಯಕೀಯ ಶಿಕ್ಷಣ ಮುಗಿಸಿ ಹಿಂದಿರುಗುವ ವೇಳೆಗೆ ಅವನ ತಂದೆತಾಯಿಗಳು ಬರಮಾಡಿಕೊಳ್ಳಬೇಕಿತ್ತು. ಆದರೆ ನವೀನ್ ಮೃತದೇಹವನ್ನು ಬರಮಾಡಿಕೊಳ್ಳಬೇಕಿರುವುದು ಅತ್ಯಂತ ನೋವಿನ ಸಂಗತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಪರೇಷನ್ ಗಂಗಾ
ಯುದ್ಧ ಭೂಮಿಯಿಂದಲೂ ಹಲವಾರು ವಿದ್ಯಾರ್ಥಿಗಳು ವಾಪಸ್ಸಾಗಿದ್ದಾರೆ. ದುರ್ದೈವವಶಾತ್ ನವೀನ್ ಮಿಸೈಲಿನ ಮೆಟಲ್ ಬಡಿದು ತೀರಿಹೋಗಿದ್ದಾನೆ.
ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕುಟುಂಬವನ್ನು ಸಂಪರ್ಕಿಸಿ ಧೈರ್ಯ ಹೇಳಿದ್ದರು. ಆಪರೇಷನ್ ಗಂಗಾ ನಲ್ಲಿ ಕರ್ನಾಟಕದ 62 ವಿದ್ಯಾರ್ಥಿಗಳು ಆಪರೇಷನ್ ಗಂಗಾ ಪ್ರಾರಂಭವಾಗುವ ಮುಂಚೆಯೇ ಬಂದಿದ್ದಾರೆ. 3 ವಾರಗಳ ಕಾಲ ನಡೆದ ಆಪರೇಷನ್ ಗಂಗಾ ಸುಲಭದ ಮಾತಲ್ಲ. ಬೇರೆ ಯಾವ ರಾಷ್ಟ್ರಗಳೂ ತನ್ನ ನಾಗರಿಕರನ್ನು ಕರೆಸುವ ಇಷ್ಟು ದೊಡ್ಡ ಪ್ರಯತ್ನ ವನ್ನು ಮಾಡಿಲ್ಲ. ಅವರವರ ಹಣೆಬರಹಕ್ಕೆ ಬಿಟ್ಟಿದ್ದರು ಎಂದರು.

ಕರ್ನಾಟಕದ 572 ವಿದ್ಯಾರ್ಥಿಗಳು ವಾಪಸ್
ಇಡೀ ದೇಶದ 19000 ವಿದ್ಯಾರ್ಥಿಗಳನ್ನು ವಾಪಸ್ಸು ಕರೆತರಲಾಗಿದ್ದು, ಕರ್ನಾಟಕದ 572 ಜನ ಹಿಂದಿರುಗಿದ್ದಾರೆ. ಪ್ರಧಾನ ಮಂತ್ರಿಗಳ ಕಚೇರಿ ಹಾಗೂ ವಿದೇಶಾಂಗ ಸಚಿವ ಜಯಶಂಕರ್ ಅವರೊಂದಿಗೂ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಂಸತ್ ಸದಸ್ಯರೂ ಸಹ ಸಂಪರ್ಕದಲ್ಲಿದ್ದು ಪ್ರಯತ್ನ ಮಾಡಿದ್ದಾರೆ ಎಂದರು.

ದೇಶದ ಶಕ್ತಿ
ಅಂತ್ಯಕ್ರಿಯೆಗೆಂದೇ ಇರುವ Funeral Agents ನ್ನು ಸಂಪರ್ಕಿಸಿ, ದೇಹವನ್ನು ಪಡೆಯಲಾಗಿತು. ನಂತರ ಎಂಬಾಮಿಂಗ್ (embalming) ಮಾಡಲು ಸಾಧ್ಯವಾಯಿತು. ಶವಾಗಾರದ ಬಳಿ ಇನ್ನೂ ಶೇಲ್ಲಿಂಗ್ ನಡೆಯುತ್ತಿದ್ದರೂ ಅಲ್ಲಿಂದ ವಾರ್ಸೊವಾಕ್ಕೆ ತಂದು ಅಲ್ಲಿ ಪುನಃ ಜಿಂಕ್ ಕೋಟಿಂಗ್ ಮಾಡಿ ದುಬೈಗೆ ತಂದು, ಅಲ್ಲಿಂದ ಬೆಂಗಳೂರಿಗೆ ತರಲಾಗಿದೆ. ಪ್ರಧಾನ ಮಂತ್ರಿಗಳಿಗೆ ಈಗಾಗಲೇ ಧನ್ಯವಾದಗಳನ್ನು ಹೇಳಲಾಗಿದೆ. ಅಸಾಧ್ಯವಾಗಿರುವ ಕೆಲಸವನ್ನು ಅವರ ಭಗೀರಥ ಪ್ರಯತ್ನದಿಂದ ಸಾಧ್ಯವಾಗಿದೆ. ಕನ್ನಡಿಗರ ಪರವಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು. ಲಿಬಿಯಾದಲ್ಲಿಯೂ ಐಎಸ್ ಐ ದಾಳಿ ಮಾಡಿದಾಗಲೂ ಭಾರತೀಯರನ್ನು ತೆರವು ಮಾಡಲಾಗಿತ್ತು. ದೇಶ ಒಂದ ಶಕ್ತಿ ಏನು ಎನ್ನುವದು ಇಂಥ ಸಂದರ್ಭಗಳಲ್ಲಿ ತಿಳಿಯುತ್ತದೆ ಎಂದರು.

ಮಾನವೀಯತೆ ಮೆರೆದ ಪ್ರಧಾನಿಗಳು
ನಮ್ಮ ತಾಕತ್ತು ಏನೆಂದು ನರೇಂದ್ರ ಮೋದಿಯವರು ತೋರಿಸಿದ್ದಾರೆ. ಟೀಕೆ ಮಾಡುವವರು ಬಹಳ ಜನ ಇದ್ದಾರೆ. ಇದನ್ನು ಪ್ರಾಮಾಣಿಕವಾಗಿ ಮಾಡಿ ಯಶ್ವಸ್ವಿಯಾಗುವುದು ಮಾನವೀಯ ಗುಣಗಳು. ಮಾನವೀಯತೆಯನ್ನು ಪ್ರಧಾನ ಮಂತ್ರಿಗಳು ಮೆರೆದಿದ್ದಾರೆ ಎಂದರು.

ಕರ್ನಾಟಕ ಸರ್ಕಾರದ ಕಾಳಜಿ
ತೆರವುಗೊಳಿಸುವ ಸಮಯದಲ್ಲಿ ಬೆಂಗಳೂರು ಮಾತ್ರವಲ್ಲದೆ, ದೆಹಲಿ, ಗಜಿಯಾಬಾದ್, ಮುಂಬೈ ನಗರಗಳಿಂದ ಮನೆಗೆ ಮುಟ್ಟಿಸುವವರೆಗೂ ಕರ್ನಾಟಕ ಸರ್ಕಾರ ಕಾಳಜಿ ವಹಿಸಿದೆ. ಇದರಲ್ಲಿ ಕರ್ನಾಟಕ ಸರ್ಕಾರದ ಪಾತ್ರವೂ ಹಿರಿದಿದೆ. ಮೊದಲಿಗೆ ವಾಟ್ಸಾಪ್ ಗುಂಪು ರಚಿಸಿ, ತಕ್ಷಣವೇ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಬೆಳೆಸಿ, ಧೈರ್ಯ ಹೇಳಿತು. ನಿರಂತರವಾಗಿ ಸಂಪರ್ಕ ಸಾಧಿಸಲಾಗಿತ್ತು. ಟೋಲ್ ಫ್ರೀ ಸಂಖ್ಯೆಯಲ್ಲಿ 12 ತಾಸಿನೊಳಗೆ ಪ್ರಾರಂಭಿಸಿತು. ಉಕ್ರೇನ್ ರಾಯಭಾರಿ ಕಚೇರಿಯೊಂದಿಗೆ ಐ.ಎ. ಎಸ್ ಅಧಿಕಾರಿ ಮನೋಜ್ ರಾಜನ್ ಅವರು ನಿರಂತರವಾಗಿ ಸಂಪರ್ಕದಲ್ಲಿದ್ದು, ಶ್ರಮವಹಿಸಿದ್ದು,ಈ ಕಾರ್ಯಾಚರಣೆ ಯಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದಗಳನ್ನು ಹೇಳಿದರು.

ಉಕ್ರೇನ್ ಮತ್ತು ಪೊಲಾಂಡ್ ಅಧಿಕಾರಿಗಳಿಗೂ ಧನ್ಯವಾದಗಳನ್ನು ತಿಳಿಸಿದರು. ನವೀನ್ ನನ್ನು ಜೀವಂತವಾಗಿ ತರಲಾಗಲಿಲ್ಲ ಎಂಬ ದುಃಖ ಸದಾ ಇರುತ್ತದೆ. ಈಗ ಅವರ ಕುಟುಂಬದವರಿಗೆ ನೆರವು ನೀಡಲಾಗುವುದು. ಅವರೊಂದಿಗೆ ನಾವು ಇದ್ದೇವೆ. ಇಂಥ ಘಟನೆಗಳು ಮರುಕಳಿಸದಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡಲು ಸಾಧ್ಯ. ಅವನ ಆತ್ಮಕ್ಕೆ ಶಾಂತಿ ದೊರೆಯಲಿ ಎಂದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.