ಹೈಟೆಕ್‌ ಮತ್ತಿನಲ್ಲಿ ಕಾಲುವೆಗಳ ನಿರ್ಲಕ್ಷ್ಯ

Team Udayavani, May 8, 2017, 12:28 PM IST

rajakalume-part-3.jpg

ಕೋರಮಂಗಲ ಕಣಿವೆ ನಗರದ ಎರಡನೇ ಅತಿ ಉದ್ದವಾದ ಕಾಲುವೆ ಜಾಲ ಹೊಂದಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರವಾಹಕ್ಕೊಳಗಾಗಿದ್ದ ಆವನಿ ಶೃಂಗೇರಿ ಲೇಔಟ್‌ ಕೂಡ ಇದೇ ಕಣಿವೆ ವ್ಯಾಪ್ತಿಗೆ ಒಳಪಡುತ್ತದೆ. ಈ ಕಣಿವೆ ವ್ಯಾಪ್ತಿಯ ಪ್ರದೇಶಗಳೆಲ್ಲ ಐಟಿ ಬಿಟಿ ಕಂಪನಿಗಳೊಂದಿಗೆ, ವಿದೇಶಿ ಸಂಸ್ಥೆಗಳೊಂದಿಗೆ ಅತ್ಯಂತ ಹೈಟೆಕ್‌ ಆಗಿದ್ದರೂ ರಾಜಕಾಲುವೆಗಳನ್ನು ಮಾತ್ರ ನಿರ್ಲಕ್ಷಿಸಲಾಗಿದೆ. ಕಾಲುವೆಗಳೆಲ್ಲವೂ ಹೂಳುತುಂಬಿದ್ದು, ಈಗಲೇ ಉಕ್ಕಿ ಹರಿಯುತ್ತಿವೆ. ಇನ್ನು ಮಳೆಗಾಲ ಬಂದರೆ ಗತಿ ಏನು ಎಂಬುದು ಕಾಲುವೆ ತಟದ ಜನರ ಆತಂಕ

ಬೆಂಗಳೂರು: ಸಾಲು ಸಾಲು ಐಟಿ ಸಂಸ್ಥೆಗಳು, ಬಹುರಾಷ್ಟ್ರೀಯ ಕಂಪೆನಿಗಳಿಂದ ಹೈಟೆಕ್‌ ಸ್ಪರ್ಶ ಪಡೆದುಕೊಂಡಿರುವ ಕೋರಮಂಗಲ, ಬೊಮ್ಮನಹಳ್ಳಿ ಭಾಗದ‌ಲ್ಲಿ ರಾಜಕಾಲುವೆಗಳ ಅಸಮರ್ಪಕ ನಿರ್ವಹಣೆಯಿಂದಾಗಿ ಮಳೆಗಾಲ ಬಂತೆಂದರೆ ಇಲ್ಲಿ ಪ್ರವಾಹ ಭೀತಿ ಆವರಿಸುತ್ತದೆ. 

ದಶಕಗಳಿಂದಲೂ ಪ್ರತಿ ಮಳೆಗಾಲದಲ್ಲಿ ಈ ಎರಡೂ ಭಾಗಗಳ ಒಂದಲ್ಲ ಒಂದು ಪ್ರದೇಶ ಜಲಾವೃತಗೊಳ್ಳುತ್ತದೆ. ಅನಾಹುತ ಸಂಭವಿಸಿದಾಗ ತಕ್ಷಣ ತಾತ್ಕಾಲಿಕ ಪರಿಹಾರಗಳನ್ನಷ್ಟೇ ಕೈಗೊಳ್ಳುವ ಬಿಬಿಎಂಪಿ ಶಾಶ್ವತ ಪರಿಹಾರ ಕಾರ್ಯಕ್ಕೆ ಮನಸ್ಸು ಮಾಡದ ಕಾರಣ ಮಳೆ ಬಂದಾಗಲೆಲ್ಲಾ ಅನಾಹುತಗಳು ಮರುಕಳಿಸುತ್ತಿವೆ.  

ನಗರದ 2ನೇ ಅತಿ ಉದ್ದದ ಕೋರಮಂಗಲ ಕಣಿವೆಯೂ ನಗರದ ಹೃದಯ ಭಾಗವಾದ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಆರಂಭವಾಗುತ್ತದೆ. ನಗರದೊಳಗಿನ ಹಲವಾರು ಭಾಗಗಳಲ್ಲಿಯೇ ಕಣಿವೆಯ ತಡೆಗೋಡೆಗಳು ಶಿಥಿಲಾವಸ್ಥೆಯಲ್ಲಿವೆ. ಪ್ರತಿ ವರ್ಷ ಕಾಲುವೆಗಳ ನಿರ್ಮಾಣ ಹಾಗೂ ಹೂಳೆತ್ತಲು ಸರ್ಕಾರ ಹಾಗೂ ಬಿಬಿಎಂಪಿಯಿಂದ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾದರೂ ಕಾಲುವೆಗಳು ದುರಸ್ತಿಯಾಗದಿರುವುದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ. 

ಕೋರಮಂಗಳ ಕಣಿವೆಯ ಕೆಲ ಭಾಗಗಳನ್ನು ಹೊರತುಪಡಿಸಿದರೆ ಉಳಿದ ಯಾವ ಕಡೆಯೂ ಹೂಳು ತೆರವುಗೊಂಡಿಲ್ಲ. ಹೀಗಾಗಿ ನೀರು ಸಮರ್ಪಕವಾಗಿ ಹರಿಯುತ್ತಿಲ್ಲ. ಪರಿಣಾಮ ಕಾಲುವೆ ಉಕ್ಕಿ ಹರಿಯುತ್ತಿದ್ದು, ಮಳೆಗಾಲದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಸುತ್ತಮುತ್ತಲಿನ ಪ್ರದೇಶಗಳಿಗೆ ನುಗ್ಗುತ್ತಿದೆ.
 
ನಗರದ ಪ್ರಮುಖ ಭಾಗಗಳಿಂದ ಕೋರಮಂಗಲ ಕಣಿವೆಯನ್ನು ಸಂಪರ್ಕಿಸುವ ಮಧ್ಯಮ ಹಾಗೂ ಕಿರು ಕಾಲುವೆಗಳಲ್ಲಿ ಭಾರಿ ಪ್ರಮಾಣದಲ್ಲಿ ಹೂಳು ಸಂಗ್ರಹವಾಗಿದೆ. ಇದರಿಂದಾಗಿ ನೀರು ಸಮರ್ಪಕವಾಗಿ ಕಾಲುವೆಗಳಲ್ಲಿ ಹರಿಯದೆ ಸುತ್ತಮುತ್ತಲಿನ ಪ್ರದೇಶ, ರಸ್ತೆಗಳಿಗೆ ಬರುತ್ತಿದೆ. ಹೀಗಾಗಿ ಪಾಲಿಕೆಯ ಅಧಿಕಾರಿಗಳು ಮಳೆಗಾಲ ಆರಂಭವಾಗುವುದರೊಳಗಾಗಿ ಕಾಲುವೆಯಲ್ಲಿ ಹೂಳೆತ್ತಲು ಕ್ರಮಕೈಗೊಳ್ಳದಿದ್ದರೆ ಅನಾಹುತ ತಪ್ಪಿದ್ದಲ್ಲ.  

ಕಾಯಂ ಪ್ರವಾಹ ಭೀತಿ ಪ್ರದೇಶ!: ಮಳೆಗಾಲಕ್ಕೆ ಮುನ್ನ ಪಾಲಿಕೆಯಿಂದ ಗುರುತಿಸಲಾಗುವ ಅನಾಹುತ ಸಂಭಾವ್ಯ ಸ್ಥಳಗಳ ಪಟ್ಟಿಯಲ್ಲಿ ಪ್ರತಿವರ್ಷ ಬೊಮ್ಮನಹಳ್ಳಿ ಹಾಗೂ ಕೋರಮಂಗಲ ಭಾಗದ ಹಲವು ಪ್ರದೇಶಗಳು ಸೇರಿಸಿಕೊಳ್ಳುತ್ತಿವೆ. ದಶಕಗಳಿಂದಲೂ ಬೊಮ್ಮನಹಳ್ಳಿ ಹಾಗೂ ಕೋರಮಂಗಲ ಭಾಗಗಳಲ್ಲಿ ಪ್ರವಾಹ ಸಂಭವಿಸುತ್ತಲೇ ಇದ್ದರೂ ಅಧಿಕಾರಿಗಳು ಶಾಶ್ವತ ಪರಿಹಾರಕ್ಕೆ ಮುಂದಾಗಿಲ್ಲ.

2006ರ ಭಾರಿ ಮಳೆಗೆ ಮಡಿವಾಳ ಕೆರೆ ಉಕ್ಕಿಹರಿದ ಪರಿಣಾಮ ಸಿಲ್ಕ್ ಬೋರ್ಡ್‌ ಜಂಕ್ಷನ್‌ ಸಂಪೂರ್ಣ ಜಲಾವೃತಗೊಂಡಿತ್ತು. ಅದಾದ ಬಳಿಕವೂ ಹಲವಾರು ಬಾರಿ ಈ ಭಾಗಗಳಲ್ಲಿ ಪ್ರವಾಹ ಉಂಟಾಗಿದೆ. ಜತೆಗೆ ಕಳೆದ ವರ್ಷವೂ ಕೋಡಿಚಿಕ್ಕನಹಳ್ಳಿ, ಅರಕೆರೆ ಭಾಗದ ಹಲವಾರು ಪ್ರದೇಶಗಳು ಜಲಾವೃತಗೊಂಡು ಜನರು ಸಂಕಷ್ಟಕ್ಕೆ ಸಿಲುಕುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. 

ಒತ್ತುವರಿ ತೆರವು ಬಳಿಕವೂ ಪ್ರವಾಹ ಭೀತಿ: ಕೋಡಿಚಿಕ್ಕನಹಳ್ಳಿ ಭಾಗದಲ್ಲಿ ಕಳೆದ ಆಗಸ್ಟ್‌ನಲ್ಲಿ ಅವನಿ ಶೃಂಗೇರಿ ನಗರ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದವು. ರಾಜಕಾಲುವೆ ಒತ್ತುವರಿಯೇ ಸಮಸ್ಯೆಗೆ ಮೂಲ ಎಂಬ ಕಾರಣಕ್ಕೆ ಕಾಲುವೆ ಜಾಗದಲ್ಲಿದ್ದ ಹತ್ತಾರು ಮನೆಗಳನ್ನು ತೆರವು ಮಾಡಲಾಯಿತು.

ಜತೆಗೆ ಪ್ರವಾಹವಾದ ಪ್ರದೇಶದ ಸಮೀಪದಲ್ಲಿ ಕಾಲುವೆಯನ್ನೂ ನಿರ್ಮಿಸಲಾಗಿದೆ. ಹಾಗಾದರೂ ಈ ಭಾಗದ ಶ್ರೀನಿವಾಸ ಬಡಾವಣೆ, ರಾಯಲ್ಸ್‌ ರೆಸಿಡೆನ್ಸಿ ಬಡಾವಣೆ, ಶಾಂತಿನಿಕೇತನ ಬಡಾವಣೆ ಸೇರಿದಂತೆ ಹಲವು ಸ್ಥಳಗಳು ಪ್ರವಾಹ ಭೀತಿ ಎದುರಿಸುತ್ತಿವೆ. 

ಅರ್ಧಕ್ಕೆ ನಿಂತ ಕಾಮಗಾರಿಗಳು: ಪಾಲಿಕೆಯಿಂದ ಪ್ರಸಕ್ತ ಸಾಲಿನಲ್ಲಿ ಕೋರಮಂಗಲ ಕಣಿವೆಯ ಪ್ರಮುಖ ಭಾಗಗಳಲ್ಲಿ ಹೂಳೆತ್ತುವ ಹಾಗೂ ತಡೆಗೋಡೆಗಳ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಇನ್ನು ಕೆಲವು ಭಾಗಗಳಲ್ಲಿ ಕಾಮಗಾರಿಗೆ ಟೆಂಡರ್‌ ಕರೆಯಲಾಗಿದೆ. ಹೀಗಾದರೂ ಕಾಮಗಾರಿ ಆರಂಭವಾಗಿರುವ ಪ್ರದೇಶಗಳಲ್ಲಿ ಗುತ್ತಿಗೆದಾರರು ಕೆಲವನ್ನು ಅರ್ಧಕ್ಕೆ ಬಿಟ್ಟಿದ್ದಾರೆ. 

* ವೆಂ.ಸುನೀಲ್‌ ಕುಮಾರ್‌ 

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.