High Court: ಶೌಚಾಲಯಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಸರ್ಕಾರಕ್ಕೆ 5 ಲಕ್ಕ ರೂ. ದಂಡ

Team Udayavani, Oct 5, 2023, 10:55 AM IST

tdy-2

ಬೆಂಗಳೂರು: ನಗರದಲ್ಲಿನ ಸಾರ್ವಜನಿಕ ಶೌಚಾಲ ಯಗಳ ಸ್ಥಿತಿಗತಿ ಹಾಗೂ ನಿರ್ವಹಣೆ ವಿಚಾರದಲ್ಲಿ ವಿವರವಾದ ಆಕ್ಷೇಪಣಾ ಹೇಳಿಕೆ ಸಲ್ಲಿಸುವಂತೆ ನೀಡಿದ ಆದೇಶವನ್ನು ಪಾಲಿಸದ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿರುವ ಹೈಕೋರ್ಟ್‌, “ಸರ್ಕಾರಕ್ಕೆ ಇದೇ ಭಾಷೆ ಅರ್ಥವಾಗುತ್ತದೆ’ ಎಂದು ಮಾರ್ಮಿಕವಾಗಿ ಹೇಳಿದೆ.

ಈ ಕುರಿತು ಲೆಟ್ಜ್ಕಿಟ್‌ ಫೌಂಡೇಷನ್‌ ಸಲ್ಲಿಸಿರುವ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಅರ್ಜಿದಾರರ ಪರ ವಕೀಲ ಪುತ್ತಿಗೆ ರಮೇಶ್‌, ನಗರದಲ್ಲಿನ ಸಾರ್ವಜನಿಕ ಶೌಚಾಲಯ ಗಳ ಸ್ಥಿತಿಗತಿ ಹಾಗೂ ನಿರ್ವಹಣೆ ಕುರಿತ ಪ್ರಕರಣ 3 ವರ್ಷಗಳಿಂದ ನ್ಯಾಯಾಲಯದಲ್ಲಿ ನಡಿತಿದೆ. ರಾಜ್ಯ ಸರ್ಕಾರ ಇದರ ಬಗ್ಗೆ ಗಾಢ ಮೌನವಹಿಸಿದ್ದು, ಒಂದೇ ಒಂದು ಹೇಳಿಕೆ, ವರದಿ, ಪ್ರಮಾಣಪತ್ರ, ಆಕ್ಷೇಪಣೆ ಯಾವುದೂ ಸಲ್ಲಿಸಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿ ಮೂರು ವಾರಗಳಲ್ಲಿ ವಿವರವಾದ ವರದಿ ಸಲ್ಲಿಸಲು 2023ರ ಆಗಸ್ಟ್‌ 8ರಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಆದರೆ, ಈವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅದಕ್ಕೆ ಸರ್ಕಾರದ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳಿಂದ ತಮಗೆ ಯಾವುದೇ ನಿರ್ದೇಶನ, ಮಾಹಿತಿ ಬಂದಿಲ್ಲ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು. ಮಾಹಿತಿ ಇಲ್ಲ ಎಂದು ಸರ್ಕಾರದ ಪರ ವಕೀಲರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕೋರ್ಟ್‌ ನಿರ್ದೇಶನದ ಹೊರತಾಗಿಯೂ ಕ್ರಮವಹಿಸಿಲ್ಲ ಎಂದು ಹೇಳಿದ ನ್ಯಾಯಪೀಠ, ತನ್ನ ತಪ್ಪಿಗಾಗಿ ಸರ್ಕಾರ 5 ಲಕ್ಷ ರೂ.ಗಳನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳ ಖಾತೆಗೆ ಎರಡು ವಾರಗಳಲ್ಲಿ ಜಮೆ ಮಾಡಬೇಕು. ಅಲ್ಲದೇ ಮುಂದಿನ ವಿಚಾರಣೆಗೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್‌ 2ಕ್ಕೆ ಮುಂದೂಡಿತು.

ಸರ್ಕಾರಕ್ಕೆ ಇದೇ ಭಾಷೆ ಅರ್ಥವಾಗುತ್ತದೆ:  ದಂಡದ ಮೊತ್ತ ಕಡಿಮೆ ಮಾಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿಕೊಂಡರು. ಅದಕ್ಕೆ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರು, ಸರ್ಕಾರದ ಈ ನಡೆಗೆ ನನ್ನ

ಪ್ರಕಾರ 25 ಲಕ್ಷ ರೂ. ದಂಡ ವಿಧಿಸಬೇಕು. ಆದರೆ, ಮುಖ್ಯ ನ್ಯಾಯಮೂರ್ತಿಗಳು ಕರುಣೆ ತೋರಿ 5 ಲಕ್ಷ ರೂ. ದಂಡ ವಿಧಿಸಿದ್ದಾರೆ. ನಮಗೆ ಹೇಳಲು ಬೇಸರವಾಗುತ್ತದೆ. ಆದರೆ, ಸರ್ಕಾರ ಮತ್ತು ಅಧಿಕಾರಿಗಳಿಗೆ ಇಂತಹದ್ದೇ ಭಾಷೆ ಅರ್ಥವಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

ಟಾಪ್ ನ್ಯೂಸ್

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.