ಎನ್‌ಇಪಿ ಅನುಷ್ಠಾನ: ಎಚ್ಚರ ಅಗತ್ಯ
ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರದಲ್ಲಿ ತಜ್ಞ ಗುರುರಾಜ ಕರ್ಜಗಿ ಅಭಿಮತ
Team Udayavani, Oct 6, 2021, 12:35 PM IST
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅತ್ಯಂತ ವ್ಯವಸ್ಥಿತವಾಗಿ ರೂಪಿಸಿದ್ದರೂ, ಅನುಷ್ಠಾನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದಾಗ ಮಾತ್ರ ಅದರ ಸಂಪೂರ್ಣ ಫಲ ಪಡೆಯಲು ಸಾಧ್ಯವಿದೆ ಎಂದು ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಎಡ್‌ಕ್ವಾರ್ಟ್ ಶಿಕ್ಷಣ ಸಂಬಂಧಿತ ಸಂಸ್ಥೆ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ- ಪಠ್ಯಕ್ರಮ ಮತ್ತು ಗುಣಮಟ್ಟ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು. ಕೊರೊನಾದಿಂದ ನಮ್ಮ ಜೀವನ ಶೈಲಿ ಬದಲಾಗಿರುವ ಜತೆಗೆ ಶಾಲಾ ಮಕ್ಕಳ ಕಲಿಕಾ ವಿಧಾನ, ಶಿಕ್ಷಕರ ಬೋಧನಾ ವಿಧಾನದಲ್ಲೂ ಸಾಕಷ್ಟು ಬದಲಾವಣೆಯಾಗಿದೆ. ಶಾಲೆಯಲ್ಲಿ ಮಕ್ಕಳು ಇಲ್ಲದಾಗ ಅದು ಬರೀ ಕಟ್ಟಡವಾಗಿಯೇ ಉಳಿಯಲಿದೆ.
ಹೀಗಾಗಿ ಶಾಲೆಗೆ ಮಕ್ಕಳು ಬರಬೇಕು ಮತ್ತು ಭೌತಿಕ ಕಲಿಕೆಯೇ ಹೆಚ್ಚು ಪರಿಣಾಮಕಾರಿ ಎಂದರು. ಎನ್‌ಇಪಿ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ರೂಪಿಸಿದ್ದಾರೆ. ಅನುಷ್ಠಾನವೂ ಅಷ್ಟೇ ವ್ಯವಸ್ಥಿತ ರೀತಿಯಲ್ಲಿ ಆಗಬೇಕು. ಅನುಷ್ಠಾನ ದಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರವೂ ಅತಿ ಮುಖ್ಯವಾಗುತ್ತದೆ. ವಿದ್ಯಾರ್ಥಿಗಳ ಪಠ್ಯಕ್ರಮದಲ್ಲೂ ಕೆಲವೊಂದು ಬದಲಾವಣೆಯಾಗಲಿದೆ.
ಇದನ್ನೂ ಓದಿ:- ಆಪರೇಷನ್ ಕಮಲʼದಂಥ ʼನೀಚʼ ರಾಜಕಾರಣವನ್ನು ಆರ್ ಎಸ್ಎಸ್ ಶಾಖೆಯಲ್ಲೇ ಕಲಿಸಲಾಯಿತಾ:ಎಚ್ ಡಿಕೆ
ತ್ರಿಭಾಷಾ ನೀತಿಯೂ ಅನುಷ್ಠಾನಕ್ಕೆ ಬರಲಿದೆ. ವಿದ್ಯಾರ್ಥಿಗಳಿಗೆ ವಿಷಯದ ಆಯ್ಕೆಯಲ್ಲೂ ಹಲವು ಆಪ್ಷನ್‌ಗಳು ಇರಲಿವೆ. ಇದೆಲ್ಲದಕ್ಕೂ ಶಿಕ್ಷಣ ಸಂಸ್ಥೆಗಳು ಸಜ್ಜಾಗಬೇಕು. ಇಲಾಖಾ ಹಂತದಲ್ಲೂ ಕೆಲವೊಂದು ಬದಲಾವಣೆ ಹಾಗೂ ವಿಲೀನವೂ ಆಗಲಿದೆ. ಅನುಷ್ಠಾನದಲ್ಲಿ ಲೋಪವಾಗದಂತೆ ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳು ಎಚ್ಚರವಹಿಸಬೇಕಾಗುತ್ತದೆ ಎಂದು ಸಲಹೆ ನೀಡಿದರು.
ಶಾಲಾ ಹಂತದಲ್ಲಿ ಸೆಮಿಸ್ಟರ್ ಪದ್ಧತಿ ತರವುದರಿಂದ ಅನಾನುಕೂಲತೆ ಹೆಚ್ಚಿದೆ. ಶಿಕ್ಷಣ ಹಕ್ಕು ಕಾಯ್ದೆಯಲ್ಲೂ ಕೆಲವೊಂದು ತಿದ್ದುಪಡಿ ಬರಬಹುದು. ಈಗ 1ರಿಂದ ಮಾಡಿ(ಅನುತ್ತೀರ್ಣಗೊಳಿಸುವ ವ್ಯವಸ್ಥೆ) ಇಲ್ಲ. ಮುಂದೆ 3, 5 ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರಲಿದೆ. ಶಿಕ್ಷಕರ ತರಬೇತಿಗೂ ಆದ್ಯತೆ ಸಿಗಲಿದೆ. ವಿದ್ಯಾರ್ಥಿಗಳನ್ನು ಪೂರ್ವ ಪ್ರಾಥಮಿಕ ತರಗತಿಯಿಂದಲೇ ಶಾಲಾವ್ಯವಸ್ಥೆಯಲ್ಲಿ ಸಜ್ಜುಗೊಳಿಸಲು ಬೇಕಾದ ಎಲ್ಲ ವ್ಯವಸ್ಥೆ ನೀತಿಯಲ್ಲಿದೆ ಎಂದರು.
ಕರ್ನಾಟಕ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾಡಳಿತ ಮಂಡಳಿಗಳ ಒಕ್ಕೂಟ(ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಮಾತನಾಡಿದರು. ಎಡ್‌ಕ್ವಾರ್ಟ್ ಸಂಸ್ಥೆಯ ಸಂಸ್ಥಾಪಕಿ ಸೆಲಿಹಾ, ವಿಧಾನ ಪರಿಷತ್ ಸದಸ್ಯ ರಮೇಶ್‌ಗೌಡ ಇತರರಿದ್ದರು.
ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ-
ನಮ್ಮಲ್ಲಿ ಸರ್ಕಾರಿ ಶಾಲೆಗಳು ಚೆನ್ನಾಗಿದೆ. ಆದರೆ, ಸರ್ಕಾರಿ ಶಾಲೆಯಲ್ಲಿ ಆಡಳಿತ ವ್ಯವಸ್ಥೆ ಸುಧಾರಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನಕ್ಕೆ ಬರಲಿದೆ. ಇದರಿಂದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲೂ ಸಾಕಷ್ಟು ಬದಲಾಣೆಯಾಗಲಿದೆ.
ಪೂರ್ವ ಪ್ರಾಥಮಿಕ ತರಗತಿಗಳನ್ನು(ಪ್ಲೇ-ಹೋಂ, ಕಿಂಡರ್ ಗಾರ್ಡ್‌ನ, ಎಲ್‌ಕೆಜಿ, ಯುಕೆಜಿ) ಬೋಧಿಸುವ ಸಂಸ್ಥೆಗಳೂ ನಿರ್ದಿಷ್ಟ ಶಾಲಾವರಣಕ್ಕೆ ಬರಲಿದೆ ಹಾಗೂ ಅದಕ್ಕೂ ಮಾನ್ಯತೆ ಪಡೆಯಬೇಕಾಗುತ್ತದೆ. ನಮ್ಮಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಬೋಧಿಸುವ ಸಂಸ್ಥೆಗಳು ಸಾಕಷ್ಟಿವೆ. ಆದರೆ, ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಅರಿತು, ಬೋಧಿಸುವ ಶಿಕ್ಷಕರ ಕೊರತೆ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.