ನೇಪಾಳಕ್ಕೆ ತೆರಳಿ ಕನ್ನಗ್ಯಾಂಗ್ ಬಂಧಿಸಿದ ಖಾಕಿ
Team Udayavani, Apr 1, 2023, 11:15 AM IST
ಬೆಂಗಳೂರು: ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ಕದಿಯುತ್ತಿದ್ದ ನೇಪಾಳಿ ಗ್ಯಾಂಗ್‌ನ ಐವರು ಸದಸ್ಯರು ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನೇಪಾಳ ಮೂಲದ ಮೋಹನ್ ಬಿಸ್ವಕರ್ಮ, ಜನಕ್ ಜೈಶಿ, ಬಿಬೇಕ್ ರಾಜ್ ದೇವಕೂಟ, ಸೀತರಾಮ್ ಜೈಸಿ, ಕಮಲ ಬಿಕೆ ಬಂಧಿತರು. ಆರೋಪಿಗಳಿಂದ 35.80 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ಬೈಕ್ ಜಪ್ತಿ ಮಾಡಲಾಗಿದೆ.
ಪೊಲೀಸರು ನೇಪಾಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆ ತಂದು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ಬಂಧನದಿಂದ ಮುಂಬೈ, ಬೆಂಗಳೂರಿನ ಮಹದೇವಪುರ, ಆರ್.ಟಿ. ನಗರ, ಕೋರಮಂಗಲ, ಯಲಹಂಕ ಉಪ ನಗರ ಠಾಣೆಗಳಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಬಂಧಿತ ಐವರ ಗ್ಯಾಂಗ್ ದೇಶದ ವಿವಿಧ ಪ್ರಮುಖ ನಗರಗಳಿಗೆ ತೆರಳಿ ಬೀಗ ಹಾಕಿರುವ ಮನೆ ಗುರುತಿಸಿ ಕ್ಷಣ ಮಾತ್ರದಲ್ಲಿ ಚಿನ್ನಾಭರಣ ಕದ್ದು ಪರಾರಿಯಾಗುತ್ತಿತ್ತು. ಮಹಾರಾಷ್ಟ್ರ , ಮುಂಬೈ, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಮನೆಗಳ್ಳತನ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
5 ವರ್ಷಗಳಿಂದ ಹಲವು ಬಾರಿ ಮನೆಗಳ್ಳತನ ಪ್ರಕರಣಗಳಲ್ಲಿ ಆಗಾಗ ಜೈಲು ಸೇರುತ್ತಿದ್ದ ಆರೋಪಿಗಳು ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಮತ್ತೆ ಹಳೆ ಚಾಳಿ ಮುಂದುವರಿಸುತ್ತಿದ್ದರು.
ಆರೋಪಿಗಳು ಸಿಕ್ಕಿ ಬಿದ್ದಿದ್ದು ಹೇಗೆ?: ಮಾ.3ರಂದು ವಿದ್ಯಾರಣ್ಯಪುರದ ಎಎಂಎಸ್ ಬಡಾವಣೆ ನಿವಾಸಿ ನಂದನ್ ಕುಮಾರ್ ಕುಟುಂಬದ ಜತೆ ದೊಡ್ಡಬಳ್ಳಾಪುರಕ್ಕೆ ಹೋಗಿದ್ದರು. ಕೆಲ ದಿನಗಳ ಹಿಂದೆ ನಗರಕ್ಕೆ ಆಗಮಿಸಿದ್ದ ಗ್ಯಾಂಗ್‌ನ ಸದಸ್ಯರು ಇವರ ಮನೆಯ ಬೀಗ ಮುರಿದು ಲಾಕರ್‌ನಲ್ಲಿಟ್ಟಿದ್ದ 989.58 ಗ್ರಾಂ ಚಿನ್ನಾಭರಣ, 6.5 ಕೆಜಿ ಬೆಳ್ಳಿ ಕದಿದ್ದರು. ಈ ಕುರಿತು ನಂದ ಕುಮಾರ್ ದೂರು ನೀಡಿದ್ದರು. ಕೃತ್ಯ ನಡೆದ ಸ್ಥಳದ ಆಸು-ಪಾಸಿನಲ್ಲಿದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಆರೊಪಿಗಳ ಸುಳಿವು ಸಿಕ್ಕಿತ್ತು.
ಈ ಆಧಾರದ ಮೇಲೆ ನೇಪಾಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.