ಪಾಲಿಕೆ ಚುನಾವಣೆ ಮುಂದೂಡಲು ಹೊಸ ಕಾಯ್ದೆ

ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

Team Udayavani, Dec 8, 2020, 12:25 PM IST

ಪಾಲಿಕೆ ಚುನಾವಣೆ ಮುಂದೂಡಲು ಹೊಸ ಕಾಯ್ದೆ

ಬೆಂಗಳೂರು: ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಹೈ ಕೋರ್ಟ್‌ ನೀಡಿರುವ ಅದೇಶಪ್ರಶ್ನಿಸಿ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಜತೆಗೆ ಬಿಬಿಎಂಪಿ ಕಾಯ್ದೆ-2020 ತರಲು ತೀರ್ಮಾನಿಸಿದೆ.

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದಲ್ಲಿ ಸಭೆ ನಡೆಸಿ, ಬಿಬಿಎಂಪಿಗೆ ಪ್ರತ್ಯೇಕ ಕಾಯ್ದೆ ತರಲು ತೀರ್ಮಾನಿಸಲಾಗಿದೆ. ಕರ್ನಾಟಕ ಮುನಿಸಿಪಲ್‌ ಆಕ್ಟ್ (ಕೆಎಂಸಿ ಕಾಯ್ದೆ) ವ್ಯಾಪ್ತಿಯಿಂದ ಬಿಬಿಎಂಪಿಯನ್ನು ಹೊರಗೆ ತಂದು ಪ್ರತ್ಯೇಕ ಕಾಯ್ದೆ ತರಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ನಂತರ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, 2021ರಲ್ಲಿ ಹೊಸ ಜನಗಣತಿ ಬಂದರೆ ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗುತ್ತದೆ. ಅದರ ಆಧಾರದ ಮೇಲೆ ಬಿಬಿಎಂಪಿ ಚುನಾವಣೆ ನಡೆಸುವುದು ಮತ್ತಷ್ಟು ವಿಳಂಬ ಆಗಬಹುದು. ಹಾಗಾಗೀ ಸುಪ್ರೀಂ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಹೇಳಿದರು.

ನಮಗೂ ಚುನಾವಣೆ ಮಾಡಬೇಕು ಅಂತ ಇದೆ. ಆದರೆ, 198ವಾರ್ಡ್‌ ಗೆ ಚುನಾವಣೆ ಮಾಡಲು ಆಗುವುದಿಲ್ಲ ಅಂತ. ಮುಂಚಿತ ವಾಗಿಯೇ ವಾರ್ಡ್‌ ಮರುವಿಂಗಡನೆ ಮಾಡಿದ್ದೆವು. ಈಗಿರುವ 198 ವಾರ್ಡ್‌ ಗಳನ್ನು 243 ವಾರ್ಡ್‌ ಗೆ ಹೆಚ್ಚಿಸಿ ಪುನರ್‌ ವಿಂಗಡನೆ ಮಾಡಿದ ಬಳಿಕ ಚುನಾವಣೆ ನಡೆಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಎಲ್ಲಾ ಪಕ್ಷದವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.  ಹೀಗಾಗಿ ಇದೇ ಅಧಿವೇಶನದಲ್ಲಿ ಬಿಬಿಎಂಪಿ ಬಿಲ್‌ ಮಂಡನೆ ಮಾಡಲು ಸರ್ಕಾರ ತೀರ್ಮಾನ ಮಾಡಲಾಗಿದೆ. ನೂತನ ಕಾಯ್ದೆಅನ್ವಯ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : “ಆರ್ ಆರ್ ಆರ್” ಶೂಟಿಂಗ್ ಗೆ ಅಲಿಯಾ ಭಟ್, ಸ್ವಾಗತ ಕೋರಿದ ರಾಜಮೌಳಿ!

ಸಭೆಯಲ್ಲಿ ಬಿಬಿಎಂಪಿ ಜಂಟಿ ಪರಿಶೀಲನೆ ಸಮಿತಿ ಸಭೆಯ ಅಧ್ಯಕ್ಷ ಎಸ್‌. ರಘು, ಸತೀಶ್‌ ರೆಡ್ಡಿ, ಎಸ್‌.  ಆರ್‌. ವಿಶ್ವನಾಥ್‌, ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌, ರಾಮಲಿಂಗ ರೆಡ್ಡಿ, ಮುನಿರತ್ನ, ಅರವಿಂದ ಲಿಂಬಾವಳಿ ಭಾಗಿಯಾಗಿದ್ದರು.

ನ್ಯಾಯಾಂಗದ ಜತೆ ಶಾಸಕಾಂಗ ಸಂಘರ್ಷ? :

ಜಂಟಿ ಪರಿಶೀಲನೆ ಸಭೆಯಲ್ಲಿ ಬಿಬಿಎಂಪಿ ಕಾಯ್ದೆ-2020ಗೆ ಒಪ್ಪಿಗೆ ಪಡೆದಿದ್ದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಮಿತಿಗೆ ನೀಡಲಾಗಿದೆ. ಕಾನೂನು ತಜ್ಞರ ಸಲಹೆ ಪಡೆದ ನಂತರ ಇದೇ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆಯಲು ತೀರ್ಮಾನಿ ಸಲಾಗಿದೆ. ಆ ನಂತರ ಸುಪ್ರೀಂ ಕೋರ್ಟ್‌ಗೆಮೇಲ್ಮನವಿ ಸಲ್ಲಿಸುವ ವೇಳೆ ಮಾಹಿತಿ ನೀಡಲು ನಿರ್ಧರಿಸ ಲಾಗಿದೆ. ಹೈಕೋರ್ಟ್‌ ಈಗಾಗಲೇ ನಾಲ್ಕು ವಾರಗಳಲ್ಲಿ ಮೀಸಲಾತಿ ಪ್ರಕಟಿಸಿ ಆರು ವಾರಗಳಲ್ಲಿ ಚುನಾವಣೆ ನಡೆಸಲು ಸೂಚಿಸಿದ್ದರೂ ರಾಜ್ಯ ಸರ್ಕಾರ ಅದನ್ನು ಪಾಲಿಸದೆ ಸುಪ್ರೀಂಕೋರ್ಟ್‌ ಮೊರೆ ಹೋಗಲು ಮುಂದಾಗಿರುವುದು ನ್ಯಾಯಾಂಗದ ಜತೆ ಸಂಘರ್ಷಕ್ಕೆ ಇಳಿದಂತೆ ಎಂಬ ಮಾತುಗಳು ಕೇಳಿಬರುತ್ತಿವೆ.198ವಾರ್ಡ್‌ಗಳಿಗೆಸೀಮಿತವಾಗಿಚುನಾವಣೆ ನಡೆಸಿ ವಾರ್ಡ್‌ ಹೆಚ್ಚಳ ಆನಂತರಮಾಡಿ ಎಂದು ನ್ಯಾಯಾಲಯ ಹೇಳಿದ್ದರೂ ಹೇಗಾದರೂಮಾಡಿಚುನಾವಣೆಮುಂದೂಡಲು ಬಿಬಿಎಂಪಿ ಕಾಯ್ದೆ-2020 ತರಲು ನಿರ್ಧರಿಸಿದೆ. ಹೈಕೋರ್ಟ್‌ ಆದೇಶ ಪಾಲನೆ ಮಾಡದಿದ್ದರೆ ನ್ಯಾಯಾಂಗ ಉಲ್ಲಂಘಟನೆಯಾಗಲಿದೆ. ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನೆಡೆಯಾದರೆ ಸರ್ಕಾರ ಇಕ್ಕಟ್ಟಿಗೆ ಸಿಲುಕಲಿದೆ ಎಂದುಹೇಳಲಾಗುತ್ತಿದೆ.

ಟಾಪ್ ನ್ಯೂಸ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

10–Cosmetic-surgery

Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.