ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗಣ್ಯರಿಂದ ಶುಭಾಶಯ
Team Udayavani, Jul 28, 2021, 9:29 AM IST
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕವಾದ ಬಸವರಾಜ ಬೊಮ್ಮಾಯಿ ಅವರಿಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ಗಣ್ಯರು ಅಭಿನಂದನೆ ತಿಳಿಸಿದ್ದಾರೆ.
ಸಿದ್ದರಾಮಯ್ಯ: ರಾಜ್ಯದ ಆಡಳಿತ ಭ್ರಷ್ಟಾಚಾರದಿಂದ ಹೊಲಸೆದ್ದಿರುವ, ದುರಾಡಾಳಿತದಿಂದ ದಿಕ್ಕುತಪ್ಪಿರುವ ಮತ್ತು ಆಂತರಿಕ ಕಚ್ಚಾಟದಿಂದ ನಲುಗಿಹೋಗಿರುವ ಸಂದರ್ಭದಲ್ಲಿ ಸ್ನೇಹಿತ ಬಸವರಾಜ ಬೊಮ್ಮಾಯಿ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ. ಅವರಿಗೆ ಯಶಸ್ಸನ್ನು ಕೋರುತ್ತೇನೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ.
ದಿನೇಶ್ ಗುಂಡೂರಾವ್: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿಯವರಿಗೆ ಅಭಿನಂದನೆಗಳು. ಬೊಮ್ಮಾಯಿ ಅವರು Right person in the wrong party ಎಂಬಂತಹ ವ್ಯಕ್ತಿ. ಅವರಿಗೆ ಆಡಳಿತದಲ್ಲಿ ಅನೇಕ ಸವಾಲುಗಳಿವೆ. ಆ ಸವಾಲುಗಳನ್ನು ಮೀರಿ ಜನಹಿತ ಕಾಪಾಡಲಿ ಎಂಬುದೇ ನಮ್ಮ ಆಶಯ.
ಹೆಚ್.ಡಿ ಕುಮಾರಸ್ವಾಮಿ: ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು. ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ.
ಹೆಚ್.ಡಿ ದೇವೇಗೌಡ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆದ ಬೊಮ್ಮಾಯಿ ಅವರಿಗೆ ನನ್ನ ಅಭಿನಂದನೆಗಳು. ಸಿಕ್ಕ ಈ ಅವಕಾಶದಲ್ಲಿ ನಾಡಿನ ಜನತೆಗೆ ಉತ್ತಮ ಆಡಳಿತ ನೀಡುವಿರೆಂದು ಆಶಿಸುತ್ತೇನೆ.
ಡಿ.ಕೆ ಶಿವಕುಮಾರ್: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು. ಆಡಳಿತದ ಮೇಲೆ ಮರಳಿ ಗಮನ ಹರಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಭರವಸೆ ಇರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.