ನವದೆಹಲಿಯ ಕರ್ನಾಟಕ ಭವನದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Team Udayavani, Aug 28, 2021, 5:53 PM IST
ನವದೆಹಲಿ: ನವದೆಹಲಿಯ ಕರ್ನಾಟಕ ಭವನದ ವಿವಿಧ ವೃಂದದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯುವಿಕೆ ಎರಡನೇ ಪಟ್ಟಿ ಇಂದು (ಆ.28) ಪ್ರಕಟವಾಗಿದೆ.
ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿಯಿರುವ 32 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದಕ್ಕಾಗಿ ದಿನಾಂಕ: 20-02-2021 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆಯನುಸಾರ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯಂತೆ 2021ರ ಆಗಸ್ಟ್ 24 ರಂದು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ದಾಖಲೆ ಪರಿಶೀಲನೆ ಮತ್ತು ಅನ್ವಯಿಸುವ ಹುದ್ದೆಗಳಿಗೆ ಪ್ರಾವೀಣ್ಯತೆ ಪರೀಕ್ಷೆ ನಡೆಸಲಾಗಿದೆ.
ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯುವಿಕೆ ಪಟ್ಟಿ ಹಾಗೂ ಹೆಚ್ಚಿನ ಮಾಹಿತಿಯನ್ನು ಇಂದು( ಆಗಸ್ಟ್ 27) ಪ್ರಕಟಿಸಲಾಗಿದ್ದು, ವಿವರದ ಮಾಹಿತಿಗಾಗಿ www.karnatakabhavan.karnataka.gov.in ವೀಕ್ಷಿಸಬಹುದಾಗಿದೆ.
ಬಾಧಿತರಾಗಬಹುದಾದ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಯನ್ನು ದಿನಾಂಕ : 04-09-2021ರ ಸಂಜೆ 5-30ರೊಳಗೆ ಲಿಖಿತವಾಗಿ ಅಥವಾ ಇಮೇಲ್ ಮೂಲಕ ಸಲ್ಲಿಸಬಹುದಾಗಿದೆ ಎಂದು ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರು ಹಾಗೂ ನವದೆಹಲಿಯ ಕರ್ನಾಟಕ ಭವನದ ಉಪ ನಿವಾಸಿ ಆಯುಕ್ತರೂ ಆದ ಎಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.