ಎನ್‌ಇಪಿ ಮುಂದಿನ ಪೀಳಿಗೆಗೆ ಅಪರಿಮಿತ ಅವಕಾಶ ಕಲ್ಪಿಸಲಿದೆ: ಡಾ ತೇಜಸ್ವಿನಿ ಅನಂತಕುಮಾರ್‌

-ಅನಂತಕುಮಾರ್‌ ಪ್ರತಿಷ್ಠಾನದ ದೇಶ ಮೊದಲು ವೆಬಿನಾರ್‌ ಸರಣಿಯ 7 ಕಂತು

Team Udayavani, Aug 29, 2021, 6:30 PM IST

ghfthty

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಸುಮಾರು 30 ಕೋಟಿ ಯುವ ಮನಸ್ಸುಗಳಿಗೆ ಸ್ವತಂತ್ರವಾಗಿ ಯೋಚಿಸುವ ಹಾಗೂ ಆಲೋಚಿಸುವ ಸಾಮರ್ಥ್ಯ ಹೆಚ್ಚಿಸುವಂತಹ ಅಪರಿಮಿತ ಅವಕಾಶಗಳನ್ನು ನೀಡುವಂತೆ ರೂಪಿಸಲಾಗಿದೆ ಎಂದು ಅನಂತಕುಮಾರ್‌ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್‌ ಅಭಿಪ್ರಾಯಪಟ್ಟರು.

ಇಂದು ಅನಂತಕುಮಾರ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 7 ನೇ ದೇಶ ಮೊದಲು – ರಾಷ್ಟ್ರೀಯ ಶಿಕ್ಷಣ ನೀತಿ – 30 ಕೋಟಿಗೂ ಅಧಿಕ ಭಾರತೀಯರ ಭವಿಷ್ಯ ವೆಬಿನಾರ್‌ ನಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಜಾರಿಗೊಳಿಸಲಾಗಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಶಿಕ್ಷಣ ಕ್ಷೇತ್ರವನ್ನು ಅಮೂಲಾಗ್ರವಾಗಿ ಬದಲಾಯಿಸುವಂತಹದ್ದು. ಭಾರತೀಯ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ವೃತ್ತಿ ಜೀವನಕ್ಕೆ ಅಥವಾ ಸ್ವಂತ ಉದ್ಯೋಗ ಪ್ರಾರಂಭಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರೇರೇಪಣೆ ನೀಡುವುದಿಲ್ಲ ಎನ್ನುವುದು ಎಲ್ಲರ ದೂರಾಗಿತ್ತು. ಕಲಿಕೆಯಲ್ಲಿ ಕೌಶಲ್ಯತೆ ಹಾಗೂ ವೈವಿಧ್ಯತೆಯೂ ಕಡಿಮೆಯಾಗಿತ್ತು. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ವಿಷಯಗಳನ್ನು ಹೊರತುಪಡಿಸಿ ಹಲವಾರು ಸಂಧರ್ಭಗಳಲ್ಲಿ ಇಷ್ಟವಿಲ್ಲದ ವಿಷಯಗಳನ್ನು ಅಧ್ಯಯನ ಮಾಡಬೇಕಾಗಿತ್ತು. ಇದನ್ನು ಅಮೂಲಾಗ್ರವಾಗಿ ಚಿಂತಿಸಿ ಬದಲಾವಣೆ ಮಾಡುವಂತಹ ಪ್ರಯತ್ನದ ಫಲ ನೂತನ ರಾಷ್ಟ್ರೀಯ ಶಿಕ್ಷಣ ನೀತಿ. ವಿದ್ಯಾರ್ಥಿ ತನ್ನ ಕೌಶಲ್ಯತೆಯನ್ನು ಬೆಳೆಸುವ ನಿಟ್ಟಿನಲ್ಲಿ, ತನ್ನ ಸ್ವಂತ ಸಾಮರ್ಥ್ಯ ಮತ್ತು ಆಸಕ್ತಿಯ ಅನುಗುಣವಾಗಿ ವಿಷಯಗಳ ಆಯ್ಕೆ ಹೀಗೆ ಹತ್ತು ಹಲವು ಹೊಸ ಸಾಧ್ಯತೆಗಳನ್ನು ಹೊಂದಿರುವ ಶಿಕ್ಷಣ ನೀತಿ ಇಂದಿನ ಅವಶ್ಯಕತೆಯಾಗಿತ್ತು. ನಮ್ಮ ದೇಶದ ಮುಂದಿನ ಪೀಳಿಗೆಯ ಮುಂದೆ ಅಪರಿಮಿತ ಸಾಧ್ಯತೆಗಳನ್ನು ತರೆದಿಡುವ ಮೂಲಕ ರಾಷ್ಟ್ರದ ಯುವ ಸಂಪತ್ತನ್ನು ಬೌದ್ದಿಕವಾಗಿ ಹಾಗೂ ಶೈಕ್ಷಣಿಕವಾಗಿ ಮತ್ತಷ್ಟು ಬಲಿಷ್ಠಗೊಳಿಸುವ ನಿರೀಕ್ಷೆಯನ್ನು ಹುಟ್ಟಿಸಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಚಿಸಿದ ಸಮಿತಿಯ ಸದಸ್ಯರಾದ ಪ್ರೋ. ಎಂ. ಕೆ ಶ್ರೀಧರ್‌ ಅವರು ವೆಬಿನಾರ್‌ ನಲ್ಲಿ ಭಾಗವಹಿಸಿ ಮಾತನಾಡಿ, ನೂತನ ಶಿಕ್ಷಣ ನೀತಿ ದೇಶದ ಶಿಕ್ಷಣ ವ್ಯವಸ್ಥೆಯನ್ನ ಅಮೂಲಾಗ್ರವಾಗಿ ಬದಲಾಯಿಸಲಿದೆ. ಶಿಕ್ಷಣ ಕ್ಷೇತ್ರದ ಎಲ್ಲಾ ಮಜಲುಗಳ ಬಗ್ಗೆ ತಿಳುವಳಿಕೆ ಹಾಗೂ ಸಮಗ್ರ ಅಧ್ಯಯನವನ್ನು ಮಾಡಿರುವಂತಹ ನೀತಿ ಇದಾಗಿದೆ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ನಮ್ಮ ಯುವ ಜನಾಂಗದ ಕಲ್ಪನೆಗಳನ್ನು ಕಲ್ಪಿಸಿಕೊಳ್ಳುವುದು ನಮ್ಮ ನಿಲುವಿಗೆ ಸಿಗದಂತಹದ್ದು. ಅಂತಹ ಯುವ ಜನಾಂಗಕ್ಕೆ ನೂತನ ರೀತಿಯ ಆಲೋಚನೆ, ಸಂಶೋಧನೆಗೆ ಅವಕಾಶ ನೀಡುವಂತಹ ವ್ಯವಸ್ಥೆ ನೂತನ ಶಿಕ್ಷಣ ನೀತಿಯಲ್ಲಿದೆ. ಇಂತಹ ಸಾಧ್ಯತೆಗಳನ್ನು ಬಳಸಿಕೊಂಡು ಅವರು ಸಾಧಿಸಲಿರುವ ಹೊಸ ಸಾಧ್ಯತೆಗಳ ಬಗ್ಗೆ ನನಗೆ ಕುತೂಹಲವಿದೆ. ಅಲ್ಲದೆ, ಶಿಕ್ಷಕರಿಗೂ ಉತ್ತಮ ತರಬೇತಿಯ ಅಗತ್ಯವನ್ನು ಎನ್‌ಇಪಿಯಲ್ಲಿ ನಮೂದಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೋ. ಪಿ.ವಿ ಕೃಷ್ಣ ಭಟ್‌, ಗ್ಲೋಬಲ್‌ ಪಾರ್ಟನರ್‌ಶಿಪ್‌ ಫಾರ್‌ ಡಿಸೆಬಲಿಟಿ ಡೆವಲಪ್‌ಮೆಂಟ್‌ ಅಧ್ಯಕ್ಷೆ ಡಾ. ಇಂದುಮತಿ ರಾವ್‌, ಬೇಸ್‌ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ಪ್ರಯೋಗ ಸಂಸ್ಥೆಯ ಟ್ರಸ್ಟಿ ಶ್ರೀ ವಲ್ಲೀಶ್‌ ಹೆರೋರು,

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುಕಾಂತ್‌ ಚಟ್ಪಲ್ಲಿ, ನೃಪತುಂಗಾ ವಿಶ್ವವಿದ್ಯಾಲಯದ ಕುಲಪತಿ  ಡಾ ಶ್ರೀನೀವಾಸ ಬಳ್ಳಿ,  ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಪ್ರದೀಪ್‌ ಓಕ್‌, ವಿಜೇತಾ ಅನಂತಕುಮಾರ, ಸುಜೀತಕುಮಾರ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 400 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7-rabakavi

Rabkavi Banhatti: ಮೊಬೈಲ್ ಕಳ್ಳತನ ಪತ್ತೆ: ವಾರಸುದಾರರಿಗೆ ಹಸ್ತಾಂತರ

Court-1

Kasaragod: ಪಟಾಕಿ ದುರಂತ; ಜಾಮೀನು ರದ್ದುಗೊಳಿಸುವಂತೆ ಅರ್ಜಿ

Mangaluru City Corporation ಮಾಜಿ ಮೇಯರ್‌ ಅಜಿತ್‌ ಕುಮಾರ್‌ ನಿಧನ

Mangaluru City Corporation ಮಾಜಿ ಮೇಯರ್‌ ಅಜಿತ್‌ ಕುಮಾರ್‌ ನಿಧನ

6-udupi

Udupi: ಯತಿಗಳ ಸಮಾಗಮ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.