ಕೆಪಿಸಿಸಿಗೆ ಯಾರು ಸಾರಥಿ?


Team Udayavani, May 5, 2017, 2:44 AM IST

Congress-Party-Logo-650.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ನೇಮಕದ ಬೆನ್ನಲ್ಲೇ ಬಹುನಿರೀಕ್ಷಿತ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸಾರಥಿ ನೇಮಕ ಮಾಡುವ ಪ್ರಕ್ರಿಯೆಗೆ ಹೈಕಮಾಂಡ್‌ ಚಾಲನೆ ನೀಡಿದ್ದು, ಶೀಘ್ರ ಹೊಸಬರ ನೇಮಕ  ಬಹುತೇಕ ಖಚಿತವಾಗಿದೆ. ಕೆಪಿಸಿಸಿ ಅಧ್ಯಕ್ಷರ ನೇಮಕ ಸಂಬಂಧ ಎಐಸಿಸಿ ನೂತನ ಉಸ್ತುವಾರಿ ವೇಣುಗೋಪಾಲ್‌ ಹಾಗೂ ನಾಲ್ವರು ಕಾರ್ಯದರ್ಶಿಗಳ ತಂಡ ಮೇ 8ಕ್ಕೆ ನಗರಕ್ಕೆ ಆಗಮಿಸಲಿದ್ದು, ಶಾಸಕರು, ಸಂಸದರು, ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್‌ಗೆ ವರದಿ ಸಲ್ಲಿಸಲಿದೆ. ಅನಂತರ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ ಎಂದು ದಿಲ್ಲಿ ಮೂಲಗಳು ತಿಳಿಸಿವೆ. ಅಲ್ಲದೆ ಇನ್ನು 15 ದಿನಗಳಲ್ಲಿ  ಕೆಪಿಸಿಸಿ ಅಧ್ಯಕ್ಷರ ನೇಮಕವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೇ ಸುಳಿವು ನೀಡಿದ್ದಾರೆ. 

ಯುವ ಮುಖಕ್ಕೆ ಆದ್ಯತೆ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಮುಖಕ್ಕೆ ಮಣೆ ಹಾಕಲು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ತೀವ್ರ ಆಸಕ್ತಿ ವಹಿಸಿದ್ದು, ಡಿ.ಕೆ. ಶಿವಕುಮಾರ್‌, ಎಂ.ಬಿ. ಪಾಟೀಲ್‌, ಅಪ್ಪಾಜಿ ನಾಡಗೌಡ ಮೂವರಲ್ಲಿ ಒಬ್ಬರಿಗೆ ಅದೃಷ್ಟ ಖುಲಾಯಿಸಲಿದೆ ಎಂದು ಮೂಲಗಳು ತಿಳಿಸಿವೆ. ಡಾ| ಜಿ. ಪರಮೇಶ್ವರ್‌ ಮತ್ತೂಂದು ಅವಧಿಗೆ ಮುಂದುವರಿಯಲು ಪ್ರಯತ್ನಿಸುತ್ತಿದ್ದರಾದರೂ ಈಗಾಗಲೇ ಆರೂವರೆ ವರ್ಷ ಪೂರೈಸಿರುವುದರಿಂದ ಹೊಸಬರನ್ನು ನೇಮಿಸುವುದು ಸೂಕ್ತ ಎಂಬುದು ಹೈಕಮಾಂಡ್‌ ಯೋಚನೆ. ಇನ್ನು, ಕೆ.ಎಚ್‌. ಮುನಿಯಪ್ಪ ಹಾಗೂ ಎಸ್‌.ಆರ್‌. ಪಾಟೀಲ್‌ ಹೆಸರು ಸಹ ಕೇಳಿ ಬರುತ್ತಿದೆಯಾದರೂ ವಯಸ್ಸಿನ ಕಾರಣಕ್ಕೆ ಅವರಿಗೆ ಅವಕಾಶ ಸಿಗುವುದು ಅನುಮಾನ. ಆದರೂ ಎಐಸಿಸಿ ಉಸ್ತುವಾರಿ ವೇಣುಗೋಪಾಲ್‌ ರಾಜ್ಯಕ್ಕೆ ಭೇಟಿ ನೀಡಿ ವಾಪಸಾದ ಅನಂತರ ಕೊಡುವ ವರದಿ ಮೇಲೆಯೇ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಲಾಗಿದೆ.

ಎಐಸಿಸಿ ಉಸ್ತುವಾರಿಯೂ ಯುವಕರು, ನಾಲ್ವರು ಕಾರ್ಯದರ್ಶಿಗಳು ಯುವಕರು. ಹೀಗಾಗಿ, ಕೆಪಿಸಿಸಿಗೂ ಯುವಕರನ್ನೇ ನೇಮಕ ಮಾಡಿ ಉತ್ಸಾಹಿ ತಂಡ ಸಜ್ಜುಗೊಳಿಸಬೇಕು ಎಂಬುದು ರಾಹುಲ್‌ ಗಾಂಧಿ ಆಲೋಚನೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕ ಭಾಗದವರಿಗೆ, ಅದರಲ್ಲೂ ಲಿಂಗಾಯಿತ ಸಮುದಾಯಕ್ಕೆ ಕೊಟ್ಟರೆ ಪಕ್ಷಕ್ಕೆ ಅನುಕೂಲವಾಗಬಹುದು ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಈ ಮಧ್ಯೆ, ಅಮೆರಿಕ ಪ್ರವಾಸದಿಂದ ವಾಪಸಾಗಿರುವ ಡಿ.ಕೆ. ಶಿವಕುಮಾರ್‌ ದಿಲ್ಲಿಯಲ್ಲಿ ನೂತನ ಉಸ್ತುವಾರಿ ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ಹಿಂದೆ ಕೇರಳ ಚುನಾವಣೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್‌ಅವರು ವೇಣುಗೋಪಾಲ್‌ ಜತೆಗೂಡಿ ಕೆಲಸ ಮಾಡಿದ್ದರು. ಇಬ್ಬರ ನಡುವೆ ಆತ್ಮೀಯತೆ ಇದೆ ಎಂದು ಹೇಳಲಾಗಿದೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್‌ ಆಯ್ಕೆ ಸೂಕ್ತ. ಶಿವಕುಮಾರ್‌ ಅವರು ಯುವ ಸಮೂಹ ಹಾಗೂ ಹಿರಿಯ ನಾಯಕರ ಜತೆ ಸಮನ್ವಯತೆಯಿಂದ ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಪ್ರಭಾವಿ ಒಕ್ಕಲಿಗ ಸಮುದಾಯದ ನಾಯಕರಾಗಿ ರಾಜ್ಯಾದ್ಯಂತ ವರ್ಚಸ್ಸು ಹೊಂದಿದ್ದಾರೆ. ಅವರ ನೇಮಕ ಪಕ್ಷಕ್ಕೆ ಶಕ್ತಿ ತಂದುಕೊಡಲಿದೆ ಎಂದು ಭೇಟಿ ಸಂದರ್ಭದಲ್ಲಿ ಪ್ರತಿಪಾದಿಸಿದರು.

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.