ಆಸ್ತಿ ತೆರಿಗೆ ಮಾಲೀಕರಿಗೆ ಹೊಸ ಸುಂಕ!


Team Udayavani, Jan 29, 2020, 3:10 AM IST

asti-terige

ಬೆಂಗಳೂರು: ನಗರದ ಆಸ್ತಿ ತೆರಿಗೆ ಮಾಲೀಕರಿಗೆ ಆಸ್ತಿ ತೆರಿಗೆ ಜೊತೆಗೆ ಶೇ. 2ರಷ್ಟು ಭೂ ಸಾರಿಗೆ ಉಪ ಕರ ವಿಧಿಸುವುದು ಸೇರಿದಂತೆ 30ಕ್ಕೂ ಹೆಚ್ಚು ನಿರ್ಣಯಗಳಿಗೆ ಮಂಗಳವಾರ ನಡೆದ ಪಾಲಿಕೆಯ ವಿಷಯಾಧಾರಿತ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಯಿತು.

ಈ ನಿರ್ಣಯವನ್ನು ಸರ್ಕಾರಕ್ಕೆ ಕಳುಹಿಸಲಾಗಿದ್ದು, ಸರ್ಕಾರ ಇದಕ್ಕೆ ಅನುಮತಿ ನೀಡಿದರೆ, ನಗರದ ಆಸ್ತಿ ಮಾಲೀಕರು ಇನ್ನು ಮುಂದೆ ಪ್ರತಿವರ್ಷ ಆಸ್ತಿ ತೆರಿಗೆಯೊಂದಿಗೆ ಆರೋಗ್ಯ, ಗ್ರಂಥಾಲಯ ಹಾಗೂ ಭೀಕ್ಷಕರ ಉಪಕರ ಪಾವತಿಸುವುದರ ಜತೆಗೆ ಶೇ.2 ಹೆಚ್ಚುವರಿ ಭೂ ಸಾರಿಗೆ ಉಪಕರವೂ ಪಾವತಿ ಮಾಡಬೇಕಾಗುತ್ತದೆ. ಭೂ ಸಾರಿಗೆ ಉಪ ಕರದಿಂದ ಸಂಗ್ರಹವಾಗುವುದನ್ನು ಪಾಲಿಕೆ ಅಭಿವೃದ್ಧಿ ಯೋಜನೆಗಳಿಗೆ ಬಳಸಿಕೊಳ್ಳುವುದಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ.

2021ರ ಏಪ್ರಿಲ್‌ನಿಂದ ಅಂದಾಜು 19 ಲಕ್ಷ ಆಸ್ತಿ ಮಾಲೀಕರು ಆಸ್ತಿ ತೆರಿಗೆಯ ಶೇ.2 ಭೂ ಸಾರಿಗೆ ಉಪ ಕರವನ್ನು ಪಾಲಿಕೆಗೆ ಪಾವತಿ ಮಾಡಬೇಕಾಗುತ್ತದೆ. ಈಗಾಗಲೇ ನಗರ ಆಸ್ತಿ ಮಾಲೀಕರು ಆರೋಗ್ಯ ಉಪಕರದ ರೂಪದಲ್ಲಿ ಶೇ.16, ಗ್ರಂಥಾಲಯ ಉಪಕರ ಶೇ.6 ಹಾಗೂ ಭೀಕ್ಷಕರ ಉಪಕರ ಶೇ.3 ಒಟ್ಟು ಶೇ.24 ರಷ್ಟು ಉಪಕರವನ್ನು ಆಸ್ತಿ ತೆರಿಗೆ ಯೊಂದಿಗೆ ಪಾವತಿಸುತ್ತಿದ್ದಾರೆ. ಇದರೊಂದಿಗೆ ಹೊಸ ದಾಗಿ ಶೇ.2 ಭೂ ಸಾರಿಗೆ ಉಪಕರ ಸಂಗ್ರಹಿಸುವುದಕ್ಕೆ ತೀರ್ಮಾನ ಸಾರ್ವಜನಿಕರಿಗೆ ಹೊರೆಯಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಅಬ್ದುಲ್‌ವಾಜಿದ್‌ ಆರೋಪಿಸಿದ್ದಾರೆ. ಬುಧವಾರ ಪಾಲಿಕೆಯ ಸಭೆಯಲ್ಲಿ ಈ ಬಗ್ಗೆ ವಿರೋಧ ವ್ಯಕ್ತಪಡಿಸುವುದಾಗಿ ಹೇಳಿದರು.

ಕರ ವಿಧಿಸುವುದು ಹೊರೆ ಎಂದಿದ್ದ ಬಿಜೆಪಿ: ರಾಜ್ಯ ಸರ್ಕಾರ 2013ರಲ್ಲಿ ಶೇ.2 ಭೂ ಸಾರಿಗೆ ಉಪ ಕರ ಸಂಗ್ರಹಿಸುವ ಬಗ್ಗೆ ಪರಿಶೀಲನೆ ಮಾಡುವಂತೆ ಪಾಲಿಕೆಗೆ ನಿರ್ದೇಶನ ನೀಡಿತ್ತು. ಸರ್ಕಾರದ ನಿರ್ದೇಶ ನಕ್ಕೆ ಅಂದು ಪಾಲಿಕೆಯ ಆಡಳಿತ ನಡೆಸುತ್ತಿದ್ದ ಬಿಜೆಪಿ ಉಪ ಕರದಿಂದ ಸಾರ್ವಜನಿಕರಿಗೆ ಹೊರೆಯಾಗಲಿದೆ ಎಂದು ಭೂ ಸಾರಿಗೆ ಉಪಕರ ಸಂಗ್ರಹಿಸುವುದಕ್ಕೆ ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸಿತ್ತು.

ಪಾಲಿಕೆಯ ಈ ನಿರ್ಣಯಕ್ಕೆ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಬಿಬಿಎಂಪಿಗೆ ಪತ್ರ ಬರೆದು ಕೆಎಂಸಿ 1976ರ ಕಾಯ್ದೆ ತಿದ್ದುಪಡಿ ಪ್ರಕಾರ ಭೂ ಸಾರಿಗೆ ಉಪ ಕರ ಕಡ್ಡಾಯವಾಗಿ ಸಂಗ್ರಹಿಸಬೇಕು ಎಂದು ಸೂಚನೆ ನೀಡಿತ್ತು. ಪಾಲಿಕೆಯಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಆಡಳಿತ ಯಾವುದೇ ಕ್ರಮ ಕೈಗೊಳ್ಳದೇ ಯಥಾಸ್ಥಿತಿ ಕಾಪಾಡಿಕೊಂಡಿತ್ತು. ಆದರೆ, 2018ರಲ್ಲಿ ಪಾಲಿಕೆ ಆಯುಕ್ತರು ಭೂ ಸಾರಿಗೆ ಉಪಕರ ಸಂಗ್ರಹಿಸುವ ಪ್ರಸ್ತಾವನೆ ಕೌನ್ಸಿಲ್‌ಗೆ ಮಂಡಿಸಿದ್ದರು. ಆಗ ವಿರೋಧ ಪಕ್ಷದಲ್ಲಿದ್ದ ಬಿಜೆಪಿ ಸದಸ್ಯರು ಭೂ ಸಾರಿಗೆ ಉಪ ಕರ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ವಿಷಯ ಮುಂದೂಡಿತ್ತು.

ಕಾಂಗ್ರೆಸ್‌ ನಿರ್ಣಯ ರದ್ದು: ಈ ಹಿಂದೆ ಬಿಬಿಎಂಪಿಯಲ್ಲಿ ಕಾಂಗ್ರೆಸ್‌ ಆಡಳಿತ ಇದ್ದಾಗ ಜಕ್ಕೂರು ವಾರ್ಡ್‌ನ ಬೆಳ್ಳಿಹಳ್ಳಿ ವೃತ್ತಕ್ಕೆ “ಬೆಳ್ಳಳ್ಳಿ ಟಿಪ್ಪು ಸುಲ್ತಾನ್‌ ವೃತ್ತ’ ಎಂದು ನಾಮಕರಣ ನಿರ್ಣಯವನ್ನು ತೆಗೆದುಕೊಳ್ಳಲಾಗಿತ್ತು. ಆ ನಿರ್ಣಯವನ್ನು ಪಾಲಿಕೆ ಸಭೆಯಲ್ಲಿ ರದ್ದು ಪಡಿಸಲಾಯಿತು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ವಿರೋಧ ಪಕ್ಷದ ನಾಯಕ ಅಬ್ದುಲ್‌ವಾಜಿದ್‌, ಒಮ್ಮೆ ಒಂದು ಪಕ್ಷ ತೆಗೆದುಕೊಂಡ ನಿರ್ಣ ಯವನ್ನು ಮತ್ತೂಂದು ಪಕ್ಷ ತೆಗೆಯುವುದು ಸಮಂಜಸವಲ್ಲ. ಪಾಲಿಕೆಯಲ್ಲಿ ಬಿಜೆಪಿ ಹೊಸ ಸಂಪ್ರದಾಯ ಸೃಷ್ಟಿಸುತ್ತಿದೆ ಎಂದು ಅಸಮಾಧಾನ ಗೊಂಡರು. ಈ ಬಗ್ಗೆ ಸ್ಪಷ್ಟನೆ ನೀಡಿದ ಮೇಯರ್‌ ಗೌತಮ್‌ಕುಮಾರ್‌, ಸ್ಥಳೀಯರು ವೃತ್ತಕ್ಕೆ ಟಿಪ್ಪು ಸುಲ್ತಾನ್‌ ವೃತ್ತ ಎಂದು ನಾಮಕರಣ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರದ್ದುಪಡಿ ಸಲಾಗಿದೆ ಎಂದರು.

ಪ್ರಮುಖ ನಿರ್ಣಯ: ಸಮೃದ್ಧಿ ಲೇಔಟ್‌ನ ಉದ್ಯಾನವನಕ್ಕೆ “ಪೇಜಾವರ ವಿಶ್ವೇಶತೀರ್ಥ ಶ್ರೀಗಳು’, ಕೆಂಗೇರಿ ಉಪನಗರದಿಂದ ಕೊಮ್ಮಟಕ್ಕೆ ಹೋಗುವ ಮುಖ್ಯರಸ್ತೆಗೆ “ಡಾ.ಶ್ರೀ ಶಿವಕುಮಾರ ಸ್ವಾಮೀಜಿ’ ರಸ್ತೆ, ಪದ್ಮನಾಭನಗರ ವಾರ್ಡ್‌ನ ಕುಮಾರಸ್ವಾಮಿ ಲೇಔಟ್‌ ಗೋವಿನಾಯಕನಹಳ್ಳಿಯ ಕ್ರೀಡಾಂಗಣಕ್ಕೆ “ದೀನದಯಾಳ್‌ ಉಪಾಧ್ಯಾಯರ’ ಕ್ರೀಡಾಂಗಣ, ಸುಬ್ರಹ್ಮಣ್ಯ ನಗರದ 7ನೇ ಮುಖ್ಯರಸ್ತೆಯಿಂದ ಎ-ಬ್ಲಾಕ್‌ನ ರಸ್ತೆಯವರಿಗೆ “ಪದ್ಮಾನಂದ ಗುರೂಜಿ ರಸ್ತೆ’, ವಸಂತನಗರ 11ನೇ ಮುಖ್ಯರಸ್ತೆಗೆ ಮುನೇಶ್ವರ ದೇವಸ್ಥಾನದ ರಸ್ತೆ, ಮಲ್ಲೇಶ್ವರಂನಲ್ಲಿ ನಿರ್ಮಿಸಿರುವ ವಸತಿ ಗೃಹಗಳಿಗೆ “ಶ್ರೀ ಸರದಾರ್‌ ವಲ್ಲಭ ಬಾಯಿ ಪಟೇಲ್‌ ವಸತಿ ಕುಟೀರ’, ದೊಮ್ಮಲೂರು ಬಡಾವಣೆಯ ಒಂದನೇ ಮುಖ್ಯ ರಸ್ತೆಗೆ “ಕನಕ ಕಲ್ಯಾಣ ಮಂದಿರ ರಸ್ತೆ ಸೇರಿದಂತೆ ವಿವಿಧ ರಸ್ತೆ, ಉದ್ಯಾನವನಕ್ಕೆ ನಾಮಕರಣ ನಿರ್ಣಯ ಅಂಗೀಕರಿಸಲಾಯಿತು.

ಪಾಲಿಕೆಯಿಂದ ಕೆಎಎಸ್‌- ಐಎಎಸ್‌ ತರಬೇತಿ: ಕೆೆಎಎಸ್‌ ಮತ್ತು ಐಎಎಸ್‌ ತರಬೇತಿ ನೀಡುವುದಕ್ಕೆ ಪಾಲಿಕೆಯಿಂದಲೇ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಮೇಯರ್‌ ಎಂ.ಗೌತಮ್‌ಕುಮಾರ್‌ ಹೇಳಿದರು. ಈ ಸಂಬಂಧ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯಿಂದ 5 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಕೇಂದ್ರದ ಮೂಲಕ ನಗರದ ಎಲ್ಲ ವರ್ಗದ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು. 74 ವಿದ್ಯಾರ್ಥಿಗಳಿಗೆ ಸದ್ಯ ತರಬೇತಿ ನೀಡಲು ಯೋಜನೆ ರೂಪಿಸಿಕೊಳ್ಳಲಾಗಿದ್ದು, ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ಅಂದಾಜು 1.97 ಲಕ್ಷ ಖರ್ಚಾಗುವ ಸಾಧ್ಯತೆ ಇದೆ ಎಂದು ವಿವರಿಸಿದರು.

ಫ‌ಟಾಫ‌ಟ್‌ ನಿರ್ಣಯ!: ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ವಿಷಯಾಧಾರಿತ ಚರ್ಚೆ ನಡೆಯದೆ ಕೇಲವೇ ನಿಮಿಷಗಳಲ್ಲಿ 30 ವಿಷಯಗಳಿಗೆ ಅನುಮೋದನೆ ಪಡೆದು ಕೊಳ್ಳಲಾಯಿತು. ಮಂಗಳವಾರ ನಿಗದಿಯಂತೆ ಬೆಳಗ್ಗೆ 11 ಗಂಟೆಗೆ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. ಆದರೆ, 11.40ಕ್ಕೆ ಸಭೆ ಆರಂಭವಾಯಿತು. ನಿರ್ಣಯಗಳ ಸಂಖ್ಯೆಯನ್ನು ಓದದೆ ಇರುವುದಕ್ಕೆ ಮಾಜಿ ಮೇಯರ್‌ ಜಿ. ಪದ್ಮಾವತಿ ಹಾಗೂ ಆಡಳಿತ ಪಕ್ಷದ ಮಾಜಿ ನಾಯಕ ಎಂ.ಶಿವರಾಜು ಸೇರಿದಂತೆ ಮತ್ತಿತರರು ವಿರೋಧ ವ್ಯಕ್ತಪಡಿಸಿದರು.

ಕೋರಂ ಕೊರತೆ ಎಲ್ಲಿದೆ ತೋರಿಸಿ?!: ಸಭೆಯ ಕೋರಂ ಕಡಿಮೆ ಇರುವುದರಿಂದ ಸಭೆಯನ್ನು ಮುಂದೂಡಬೇಕು ಎಂದು ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌ ಆಗ್ರಹಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ನಾಯಕ ಪದ್ಮನಾಭ ರೆಡ್ಡಿ, ಕೋರಂ ಕೊರತೆ ಇರುವುದು ವಿರೋಧ ಪಕ್ಷದಲ್ಲಿ ಆಡಳಿತ ಪಕ್ಷದಲ್ಲಿ ಅಲ್ಲ ಎಂದು ತಿವಿದರು.ಅಲ್ಲದೆ, ಲೆಕ್ಕ ಹಾಕಿಕೊಳ್ಳಿ ಆಡಳಿತ ಪಕ್ಷದಲ್ಲಿ ಎಷ್ಟು ಜನ ಇದ್ದಾರೆ ಎಂದು ಹೇಳಿದರು.

ಚಿಮೂಗೆ ಸಂತಾಪ: ಇತ್ತೀಚೆಗೆ ನಿಧನರಾದ ಸಂಶೋಧಕ ಡಾ. ಚಿದಾನಂದಮೂರ್ತಿ ಹಾಗೂ ಮಾಜಿ ರಾಜ್ಯಪಾಲರಾದ ಟಿ.ಎನ್‌. ಚತುರ್ವೇದಿ ಅವರಿಗೆ ಮೇಯರ್‌ ಗೌತಮ್‌ ಕುಮಾರ್‌, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್‌, ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌ ಮತ್ತಿತರರು ಸಂತಾಪ ಸೂಚಿಸಿದರು.

ಭೂ ಸಾರಿಗೆ ಉಪ ಕರ ಸಂಗ್ರಹಿಸುವುದರಿಂದ ಪಾಲಿಕೆಗೆ ವಾರ್ಷಿಕವಾಗಿ ಸುಮಾರು 150 ಕೋಟಿ ರೂ. ಸಂಗ್ರಹವಾಗುವ ನಿರೀಕ್ಷೆ ಇದೆ. ಸಂಗ್ರಹಿಸುವ ಭೂ ಸಾರಿಗೆ ಉಪ ಕರವನ್ನು ಪಾಲಿಕೆಯೇ ಬಳಕೆ ಮಾಡುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
-ಗೌತಮ್‌ಕುಮಾರ್‌, ಬಿಬಿಎಂಪಿ ಮೇಯರ್‌

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.