ಶಿಕ್ಷಕರ ವರ್ಗ: ಹತ್ತು ವರ್ಷ ಸೇವೆ ಸಲ್ಲಿಸಿದವರ ಎತ್ತಂಗಡಿ


Team Udayavani, Sep 8, 2017, 7:20 AM IST

GOVT-700.jpg

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆಗೆ ಕರಡು ಅಧಿಸೂಚನೆ ಪ್ರಕಟಿಸಿದ್ದು ಹತ್ತು ವರ್ಷಕ್ಕಿಂತ ಹೆಚ್ಚು ಸಮಯ ಮಹಾನಗರ ವ್ಯಾಪ್ತಿಯಲ್ಲಿ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರನ್ನು ಕಡ್ಡಾಯವಾಗಿ ಗ್ರಾಮೀಣ ಪ್ರದೇಶಗಳಿಗೆ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆ ಅನ್ವಯ ಹೊಸ ನಿಯಮಗಳನ್ನು ರೂಪಿಸಿದೆ. ಅದರ ಆಧಾರದಲ್ಲಿಯೇ ಶಿಕ್ಷಕರ ಸಾಮಾನ್ಯ ವರ್ಗಾವಣೆ ಮಾಡಲು ಮುಂದಾಗಿದೆ.

ಇದುವರೆಗೂ ಸಾಮಾನ್ಯ ವರ್ಗಾವಣೆ ನಿಯಮದ ಪ್ರಕಾರ ಶೇ.8ರಷ್ಟು ಮಾತ್ರ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. ಹೊಸ ಕಾನೂನು ಪ್ರಕಾರ ಶೇ.15ರ ವರೆಗೂ ವರ್ಗಾವಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಎ ವಲಯದಲ್ಲಿ (ಮಹಾನಗರ ಪಾಲಿಕೆ ವ್ಯಾಪ್ತಿ) ದೀರ್ಘ‌ ಸೇವೆ ಸಲ್ಲಿಸಿದವರನ್ನು ಸಿ ವಲಯ (ಗ್ರಾಮಾಂತರ ಪ್ರದೇಶ)ಕ್ಕೆ ವರ್ಗಾಯಿಸಲಾಗುತ್ತದೆ. ಸಿ ವಲಯದಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರನ್ನು ಎ ವಲಯಕ್ಕೆ ವರ್ಗಾಯಿಸಲಾಗುತ್ತದೆ. ಅದೇ ರೀತಿ ಬಿ ವಲಯದಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರನ್ನು ಎ ವಲಯಕ್ಕೆ ವರ್ಗಾಯಿಸಲು ಅವಕಾಶ ಕಲ್ಪಿಸಲಾಗಿದೆ. ವರ್ಗಾವಣೆ ಕಾಯ್ದೆ ನಿಯಮ 4 ಪ್ರಕಾರ ಹೆಚ್ಚು ಕಾಲ ಸೇವೆ ಸಲ್ಲಿಸಿದವರು ಎ ವಲಯದಿಂದ ಬಿ ವಲಯಕ್ಕೆ ಬಿ ವಲಯದಿಂದ ಸಿ ವಲಯಕ್ಕೆ ವರ್ಗಾವಣೆ ಮಾಡುವುದು ಕಡ್ಡಾಯವಾಗಿದೆ. ಅಂಗವಿಕಲರು, ಅನಾರೋಗ್ಯ ಕಾರಣಕ್ಕೆ ವರ್ಗಾವಣೆ ಬಯಸುವವರು, ಪತಿ ಪತ್ನಿ ವರ್ಗಾವಣೆ, ವಿಧವೆ ಹಾಗೂ ವಿಧುರರ ವರ್ಗಾವಣೆಗೆ ವಿಶೇಷ ಆದ್ಯತೆ ನೀಡಲಾಗಿದೆ.

ಹೊಸ ನಿಯಮದ ಪ್ರಕಾರ ಪಟ್ಟಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮಹಾನಗರ ವ್ಯಾಪ್ತಿಗೆ ವರ್ಗಾವಣೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಎ ಮತ್ತು ಬಿ ಅಂದರೆ ಪಟ್ಟಣ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ವರ್ಗಾವಣೆ ಪಡೆಯಲು ಅವಕಾಶ ಒದಗಿಸಲಾಗಿದೆ.

ಹೊಸ ವರ್ಗಾವಣೆ ಕರಡಿನ ಕುರಿತು ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ. ನಂತರ ಹೊಸ ನಿಯಮಕ್ಕೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಲಿದೆ. ಹಾಗೆಯೇ ಸೆ.20 ರಿಂದ ವರ್ಗಾವಣೆಗೆ ಅರ್ಜಿ ಆಹ್ವಾನಿಸಿ ನವೆಂಬರ್‌ ವೇಳೆಗೆ ವರ್ಗಾವಣೆ ಪ್ರಕ್ರಿಯೆ ಮುಕ್ತಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಟಾಪ್ ನ್ಯೂಸ್

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.