2018ರ ಪ್ರವಾಸೋದ್ಯಮಕ್ಕೆ ಹೊಸ ಥೀಮ್
Team Udayavani, Jan 2, 2018, 12:19 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆಯ 2018 ರ ಸಾಲಿಗಾಗಿ ರೂಪಿಸಿರುವ” ನಿಮ್ಮ ಸಾಹಸ ಗಾಥೆಯನ್ನು ನೀವೆ ರಚಿಸಿ’ ಎನ್ನುವ ವಿನೂತನ ನಿರೂಪಣ ವಸ್ತುವನ್ನು ಸೋಮವಾರ ಲೋಕಾರ್ಪಣೆ ಮಾಡಿದರು. ತಮ್ಮ ನಿವಾಸ ಕಾವೇರಿ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರೂಪಣ ವಸ್ತುವನ್ನು ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದರು.
ಹೊಸ ನಿರೂಪಣ ವಸ್ತುವನ್ನು ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ 2018ರಲ್ಲಿ ಹೊಸದಾದ ವಿಶಿಷ್ಟ ಥೀಮ್ ಪರಿಚಯಿಸಿದೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. ಕರ್ನಾಕಟದಲ್ಲಿ ಪರಂಪರೆ, ಸಂಸ್ಕೃತಿ, ನಿಸರ್ಗ, ಬೀಚ್‌ಗಳು ಹಾಗೂ ವನ್ಯಸಂಪತ್ತು ಇದ್ದು, ಇವು ಪ್ರವಾಸಿಗರಿಗೆ ಅತ್ಯಂತ ಆಕರ್ಷಣೀಯವಾಗಿವೆ ಎಂದರು.
ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಪ್ರವಾಸೋದ್ಯಮ ಇಲಾಖೆ ರೂಪಿಸಿರುವ ಈ ನಿರೂಪಣ ವಸ್ತುವಿನ ಆಶಯ ಕುರಿತು ಮುಖ್ಯಮಂತ್ರಿಗಳಿಗೆ ವಿವರ ನೀಡಿದರು.
ಪ್ರವಾಸದಲ್ಲಿ ನಾವು ಏನು ವೀಕ್ಷಿಸುತ್ತೇವೆ ಎಂಬುದಕ್ಕಿಂತ ಏನನ್ನು ಮಾಡುತ್ತೇವೆ ಮತ್ತು ಹೇಗೆ ಮಾಡುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರವಾಸಿಗರು ಸಾಮಾನ್ಯಕ್ಕಿಂತ ವಿಶಿಷ್ಟವಾದದ್ದನ್ನು ಬಯಸುತ್ತಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದ ಮೊದಲನೆಯ ದಿನದಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ತನ್ನ ಹೊಸ ವಿನೂತನ ಥೀಮ್ ಅನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ “ಒಂದು ರಾಜ್ಯ ಮತ್ತು ಹಲವು ವಿಶ್ವ’ ಎಂಬ ಘೋಷವಾಕ್ಯಕ್ಕೆ ಪೂರಕವಾಗಿ ರಾಜ್ಯದಲ್ಲಿ ವೈವಿಧ್ಯಮಯ ಪ್ರವಾಸೋದ್ಯಮ ಅವಕಾಶಗಳಿವೆ. ಕರ್ನಾಟಕದಲ್ಲಿ ಪಾರಂಪರಿಕ ತಾಣಗಳು ಮತ್ತು ವನ್ಯಜೀವಿಗಳನ್ನು ಒಳಗೊಂಡ ರಾಷ್ಟ್ರೀಯ ಪಾರ್ಕ್‌ಗಳು ಜನಪ್ರಿಯವಾಗಿವೆ. ಇವುಗಳ ಜತೆಗೆ ಗುಡ್ಡ ಪ್ರದೇಶಗಳು, ಮನಮೋಹಕ ಜಲಪಾತಗಳು,
ಧಾರ್ಮಿಕ ಸ್ಥಳಗಳು ಮತ್ತು ಸುದೀರ್ಘ ಬೀಚ್‌ಗಳು ಜನಪ್ರಿಯವಾಗಿವೆ. ಹಿಮದ ಹೊರತಾಗಿ ಕರ್ನಾಟಕದಲ್ಲಿ ಎಲ್ಲ ರೀತಿಯ ಪ್ರವಾಸ ತಾಣಗಳೂ ಇವೆ ಎಂದರು. ಈ ವೇಳೆ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಟಿ.ಕೆ. ಅನಿಲ್ ಕುರ್ಮಾ, ಕರ್ನಾಟಕ ಪ್ರವಾಸೋದ್ಯಮ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್, ಜಂಗಲ್ ಲಾಡ್ಜಸ್ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮ ಇದ್ದರು.
ವಿಶಿಷ್ಟ ಅನುಭವ: 2017ನೆ ವರ್ಷ ವನ್ಯಜೀವಿಗಳ ವರ್ಷ ಎಂದು ಘೋಷಿಸಲಾಗಿದೆ. ಈ ಕಾರ್ಯಕ್ರಮದಡಿ ವನ್ಯಜೀವಿಗಳ ವೀಕ್ಷಣೆಗೆ ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಪ್ರವಾಸಿಗರು ವಿಶಿಷ್ಟ ಅನುಭವವನ್ನು ಪಡೆದಿದ್ದರು.ಈ ಥೀಮ್ ಅಡಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸರ್ಫಿಂಗ್ ಫೆಸ್ಟಿವಲ…, ಹಂಪಿಯಲ್ಲಿ ಮೋರ್ಟಾ ಸೈಕಲ್ ಟೂರಿಸಂ, ಮೈಸೂರಿನಲ್ಲಿ ಏರೋ ನ್ಪೋರ್ಟ್ಸ್, ಸ್ಕೆ ಡೈವಿಂಗ್, ಕಾರವಾರ ಮತ್ತು ಮಂಗಳೂರಿನಲ್ಲಿ ವಾರ್ಟ ನ್ಪೋರ್ಟ್ಸ್ ಹಮ್ಮಿಕೊಳ್ಳಲಾಗಿತ್ತು ಎಂದು ಸಿಎಂಗೆ ಪ್ರಿಯಾಂಕ ಖರ್ಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.