ಪುನೀತ್ ರಾಜ್‍ಕುಮಾರ್ ಸಾಧನೆ ಮುಂದಿನ ಪೀಳಿಗೆಗೆ ತಿಳಿಯಬೇಕು: ಸಚಿವ ವಿ.ಸೋಮಣ್ಣ
Team Udayavani, Jan 30, 2022, 2:26 PM IST
ಬೆಂಗಳೂರು: ಇತ್ತೀಚೆಗಷ್ಟೆ ನಮ್ಮನ್ನಗಲಿದ ನಟ ಪುನೀತ್ ರಾಜ್‍ಕುಮಾರ್ ಅವರ ಸಾಧನೆ ಮುಂದಿನ ಪೀಳಿಗೆಗೆ ತಿಳಿಯಬೇಕು. ಅವರ ಆದರ್ಶದ ಜೀವನ, ಸಾಧನೆ, ಜೀವನ ಮೌಲ್ಯಗಳಿಂದ ಅವರು ಇಂದಿಗೂ ನಮ್ಮೆಲ್ಲರ ಮನದಲ್ಲಿ ಜೀವಂತವಾಗಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ಪಾಲಿಕೆ ಕಚೇರಿಯಲ್ಲಿ ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿಗಾಗಿ ನಿರ್ಮಿಸಲಾದ ಒಳಾಂಗಣ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಯೂತ್ ಐಕಾನ್ ಎಂತಲೇ ಖ್ಯಾತರಾಗಿದ್ದ ಪುನೀತ್ ಅವರ ಹೆಸರಿನಲ್ಲಿ ಈ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಮೂಲಕ ಈ ಭಾಗದ ಕ್ರೀಡಾಸಕ್ತ ಯುವಕರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.
ಇದನ್ನೂ ಓದಿ:ಗಿಡ ನೆಟ್ಟು ಅಪ್ಪು ಆಸೆ ಪೂರೈಸಿ: ಅಭಿಮಾನಿಗಳಲ್ಲಿ ರಾಘಣ್ಣ ಮನವಿ
ನಟ ಪುನೀತ್ ತಮ್ಮ ಸಾವಿನ ಬಳಿಕವೂ ಸಾಕಷ್ಟು ಜನರಿಗೆ ಪ್ರೇರಣೆಯಾಗಿದ್ದಾರೆ. ಅವರ ಅಕಾಲಿಕ ನಿಧನದ ಬಳಿಕ ಅವರ ಸಾವಿರಾರು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡುವ ಮೂಲಕ ನಟನೊಬ್ಬನ ಆದರ್ಶಗಳನ್ನು ಜೀವಂತವಿರಿಸಿದ್ದಾರೆ ಎಂದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ, ಮಕ್ಕಳ ಶಿಕ್ಷಣ ಹಕ್ಕುಗಳ ರಾಯಭಾರಿಯಾಗಿ ‘ಎಜುಕೇಶನ್ ಇಸ್ ಪವರ್’ ಎಂಬ ಅಭಿಯಾನದಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಶಿಕ್ಷಣದ ಮಹತ್ವದ ಕುರಿತಂತೆ ಜಾಗೃತಿ ಮೂಡಿಸುವ ಕೆಲಸವನ್ನು ಅವರು ಮಾಡಿದ್ದರು. ಇದಷ್ಟೇ ಅಲ್ಲದೇ, ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಬಿ ಜೀವನಕ್ಕೆ ನೆರವಾಗುವ ‘ಸಂಜೀವಿನಿ’ ಯೋಜನೆ, ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳು ತಯಾರಿಸಿದ ‘ದೀಪ ಸಂಜೀವಿನಿ’ ಮಣ್ಣಿನ ಹಣತೆ ಖರೀದಿಸಿ ದೀಪಾವಳಿ ಆಚರಿಸುವ ಮೂಲಕ ಸ್ವಸಹಾಯ ಗುಂಪುಗಳನ್ನು ಬಲಪಡಿಸಲು ಮನವಿ ಮಾಡಿಕೊಳ್ಳುವ ಮೂಲಕ ಮಹಿಳೆಯರು ಸಬಲೀಕರಣಕ್ಕೆ ಕೈ ಜೋಡಿಸಿದ್ದರು. ಇಂಥ ಸಾಕಷ್ಟು ಕಾರಣಗಳಿಂದ ಲಕ್ಷಾಂತರ ಜನರು ರಾಜ್‍ಕುಮಾರ್ ಅವರನ್ನು ತಮ್ಮ ಆದರ್ಶವನ್ನಾಗಿ ಸ್ವೀಕರಿಸಿದ್ದಾರೆ. ಸಿನಿಮಾ, ನಟನೆ, ಗ್ಲಾಮರ್, ಸ್ಟಾರ್ ಗಿರಿಗಳನ್ನು ಮೀರಿ ಒಬ್ಬ ಮಹಾ ಮಾನವತಾವಾದಿಯಾಗಿ ಪುನೀತ್ ನಮ್ಮೆಲ್ಲರ ಮನಗಳಲ್ಲಿ ನೆಲೆಯೂರಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.