Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Team Udayavani, Dec 19, 2024, 11:06 AM IST
ಬೆಂಗಳೂರು: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು 2015ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಸ್ಫೋಟ ನಡೆಸಲು ಸಂಚು ರೂಪಿಸಿರುವುದು ಹಾಗೂ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕ ಸಾಮಗ್ರಿ ಪೂರೈಸಿರುವ ಪ್ರಕರಣದಲ್ಲಿ ಮೂವರು ಶಂಕಿತ ಉಗ್ರರನ್ನು ದೋಷಿಗಳೆಂದು ತೀರ್ಪು ನೀಡಿದ್ದ ಎನ್‌ಐಎ ವಿಶೇಷ ನ್ಯಾಯಾಲಯವು ಡಿ.23ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಇಂಡಿಯನ್ ಮುಜಾಹಿದ್ದೀನ್ (ಐಎಂ) ಸಂಘಟನೆಯಲ್ಲಿ ಗುರುತಿಸಿಕೊಂಡಿ ದ್ದ ಉತ್ತರ ಕನ್ನಡ ಜಿಲ್ಲೆ ಭಟ್ಕಳದ ವೈದ್ಯ ಸೈಯದ್ ಇಸ್ಮಾಯಿಲ್ ಅಫಾಕ್, ಅಬ್ದುಲ್ ಸುಬೂರು, ಸದ್ದಾಂ ಹುಸೇನ್ ದೋಷಿಗಳೆಂದು ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣ ಬುಧವಾರಕ್ಕೆ ಕಾಯ್ದಿರಿಸಲಾಗಿತ್ತು. ಇದೀಗ ಶಿಕ್ಷೆಯ ಪ್ರಮಾಣವನ್ನು ಡಿ.23ರಂದು ಪ್ರಕಟಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು 2015ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಆರೋಪ ಮೂವರ ಮೇಲಿತ್ತು. ಉಗ್ರರು ಪಾಕಿಸ್ತಾನದಿಂದ ಬಂದ ಸೂಚನೆಯಂತೆ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಲ್ಲಿ ಕಂಡು ಬಂದಿದೆ.
ಸ್ಫೋಟ ಸಂಚಿನ ಕುರಿತು 2015ರಲ್ಲಿ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2015ರಲ್ಲಿ ಬೆಂಗಳೂರಿನ ಪುಲಕೇಶಿನಗರ ಹಾಗೂ ಭಟ್ಕಳ ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಬಂಧಿತರಿಂದ ಅಪಾರ ಪ್ರಮಾಣದ ನ್ಪೋಟಕ ವಸ್ತುಗಳನ್ನು ಜಪ್ತಿ ಮಾಡ ಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
Techie Atul Subhash Case: ಅತುಲ್‌ನಿಂದಲೇ ನನಗೆ ತೊಂದರೆ: ಪತ್ನಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.