ನೈಸ್ ಗೋಮಾಳ ಒತ್ತುವರಿ: ಭೂಗಳ್ಳರ ತೆರವಿಗೆ ಡಿಸಿ ಆದೇಶ
Team Udayavani, Nov 21, 2017, 12:03 PM IST
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ನೈಸ್ ರಸ್ತೆಗೆ ಹೊಂದಿಕೊಂಡಿರುವ ಪಿಲ್ಲಗಾನಹಳ್ಳಿಯಲ್ಲಿರುವ 199 ಎಕರೆಗೂ ಅಧಿಕ ಸರ್ಕಾರಿ ಗೋಮಾಳ ಜಮೀನಿನ ಮೇಲೆ ಇದೀಗ ಭೂಗಳ್ಳರ ಕಣ್ಣು ಬಿದ್ದಿದೆ. ಸಾಮಾಜಿಕ ಸಂಘಟನೆಗಳ ಹೆಸರೇಳಿಕೊಂಡು ರಾತ್ರೋ ರಾತ್ರಿ ಸೈಟ್ ನಿರ್ಮಾಣ ಹಾಗೂ ಶೆಡ್‌ಗಳನ್ನು ನಿರ್ಮಾಣ ಮಾಡಿಕೊಂಡಿರುವ ಸಂಗತಿ ಇದೀಗ ಬೆಳಕಿಗೆ ಬಂದಿದೆ.
ಈ ಬಗ್ಗೆ ಬಂದ ದೂರುಗಳ ಬೆನ್ನಲ್ಲೇ ನಗರ ಜಿಲ್ಲಾಧಿಕಾರಿ ವಿ. ಶಂಕರ್ ಸೋಮವಾರ ಅಧಿಕಾರಿಗಳೊಂದಿಗೆ ಖುದ್ದು ಸ್ಥಳ ಪರಿಶೀಲನೆ ನಡೆಸಿ, ಅನಧಿಕೃತವಾಗಿ ನಿವೇಶನ ನಿರ್ಮಾಣವಾಗುತ್ತಿರುವ ಭೂಮಿ ಒತ್ತುವರಿ ತೆರವುಗೊಳಿಸುವಂತೆ ಅಧೀನ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಭೇಟಿ ವೇಳೆ ಹಲವು ಮಂದಿ ಜಾಗ ಒತ್ತುವರಿ ಮಾಡಿಕೊಳ್ಳುವುದು ಕಂಡು ಬಂತು. ಜೊತೆಗೆ ಸ್ಥಳೀಯರು ಮಾಹಿತಿ ಸಹ ನೀಡಿದರು. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು, ಈಗಾಗಲೇ ಹಲವು ವರ್ಷಗಳಿಂದ ವಾಸವಿರುವ ಮನೆಗಳನ್ನು ತೆರವುಗೊಳಿಸಬೇಡಿ.
ಆದರೆ, ಅನಧಿಕೃತವಾಗಿ ಹಾಕಿಕೊಂಡಿರುವ ಶೆಡ್ ಹಾಗೂ ಸೈಟ್‌ಗಳನ್ನು ಕೂಡಲೇ ವಶಕ್ಕೆ ಪಡೆದುಕೊಂಡು ಬೇಲಿ ಅಳವಡಿಸಿ. ಒತ್ತುವರಿದಾರರು ಪ್ರಭಾವಶಾಲಿಗಳಾದರೂ ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಿ ಎಂದು ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಆರೊಪಿಗಳು ನಾಪತ್ತೆ!: ನೈಸ್ ರಸ್ತೆಗೆ ಹೊಂದಿಕೊಂಡಂತಿರುವ ಈ ಜಾಗದಲ್ಲಿ ಜಮೀನಿನ ಬೆಲೆ ಗಗನಕ್ಕೇರಿದೆ. ಹೀಗಾಗಿ ಹಲವು ಮಂದಿ ಸಾಮಾಜಿಕ ಸಂಘಟನೆಗಳ ಹೆಸರಿನಲ್ಲಿ ಕೆಲ ಜಾಗವನ್ನು ಒತ್ತುವರಿ ಮಾಡಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟಕ್ಕೆ ಮುಂದಾಗಿದ್ದಾರೆ.
ಆದರೆ, ಯಾರೊಬ್ಬರ ಬಳಿಯೂ ಜಮೀನು ಮುಂಜೂರಾದ ಬಗ್ಗೆ ದಾಖಲೆಗಳಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಸ್ಥಳೀಯರು ದೂರು ನೀಡಿದರು. ಈ ಪೈಕಿ ಸ್ಥಳೀಯರಾದ ಮುನಿರಾಜು, ಚಂದು, ಖುರೇಶಿ, ಮಾರಣ್ಣ, ಚಾಂದ್ ಪಾಷ ಮುಂತಾದವರು ಅಕ್ರಮವಾಗಿ ಖಾಲಿ ಜಾಗದಲ್ಲಿ ನಿವೇಶನ ವಿಂಗಡಿಸಿ ನಕಲಿ ದಾಖಲೆಗಳ ಸಹಾಯದಿಂದ ಅಮಾಯಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಆರೋಪಿಸಿದ್ದಾಗಿ ಅಧಿಕಾರಿ ತಿಳಿಸಿದರು.
ಮೂರುವರೆ ಸಾವಿರ ಅರ್ಜಿಗಳು ಬಾಕಿ!: ಮತ್ತೂಂದೆಡೆ ಗೋಮಾಳ ಜಾಗದಲ್ಲಿ ಸಾವಿರಾರು ಮಂದಿ ಈಗಾಗಲೇ ಮನೆಗಳನ್ನು ನಿರ್ಮಾಣ ಮಾಡಿಕೊಂಡು ಹಲವು ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಈ ಸಂಬಂಧ ಅಕ್ರಮ ಸಕ್ರಮ ಅಡಿಯಲ್ಲಿ ಮೂರುವರೆ ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, ಪರಿಶೀಲನಾ ಹಂತದಲ್ಲಿವೆ ಎಂದು ತಹಶೀಲ್ದಾರ್ ಹೆಚ್.ಟಿ ಮಂಜಪ್ಪ, ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.