ನೈಸ್ ರಸ್ತೆಯಲ್ಲಿ ಮೆಟ್ರೋ: ವರದಿ ನೀಡಲು ಸೂಚನೆ
Team Udayavani, Dec 11, 2018, 12:26 PM IST
ಬೆಂಗಳೂರು: ನೈಸ್ ರಸ್ತೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) “ನಮ್ಮ ಮೆಟ್ರೋ’ ಯೋಜನೆ ಜಾರಿಗೊಳಿಸುವ ಸಾಧಕ-ಬಾಧಕಗಳ ಕುರಿತು ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿ) ಸೂಚಿಸಿದೆ.
ಭೂಸ್ವಾಧೀನದಿಂದಲೇ ಮೆಟ್ರೋ ಯೋಜನೆ ತಡವಾಗುತ್ತಿದೆ. ಇದರಿಂದ ಯೋಜನಾ ವೆಚ್ಚ ವಿಸ್ತರಣೆ ಆಗುತ್ತಿದೆ. ಆದರೆ, ಬಿಡಿಎ ಬಳಿ ಈಗಾಗಲೇ ನೈಸ್ ರಸ್ತೆಯಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿ ಇದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ಜತೆ ಪಿಪಿಪಿ ಮಾದರಿಯಲ್ಲಿ ಉದ್ದೇಶಿತ ಜಾಗದಲ್ಲಿ ಮೆಟ್ರೋ ಮಾರ್ಗ ನಿರ್ಮಿಸಲು ಅವಕಾಶ ಇದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮೋಹನದಾಸ್ ಹೆಗ್ಡೆ ನಗರಾಭಿವೃದ್ಧಿ ನಗರಾಭಿವೃದ್ಧಿ ಇಲಾಖೆಗೆ ಸಲಹೆ ಮಾಡಿದ್ದಾರೆ.
ಇದನ್ನು ಆಧರಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಕೆ. ಲಲಿತಾಬಾಯಿ, ಪಿಪಿಪಿ ಮಾದರಿಯಲ್ಲಿ ಯೋಜನೆ ಜಾರಿಗೊಳಿಸುವ ಬಗ್ಗೆ ಪರಿಶೀಲಿಸಿ ವಿವರವಾದ ವರದಿ ಸಲ್ಲಿಸುವಂತೆ ಸೋಮವಾರ ನಿಗಮಕ್ಕೆ ನಿರ್ದೇಶನ ನೀಡಿದ್ದಾರೆ.
ನೈಸ್ ರಸ್ತೆಯಲ್ಲಿ ಮೊದಲ ಹಂತದಲ್ಲಿ ತುಮಕೂರು ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ (ಸುಮಾರು 42 ಕಿ.ಮೀ.) ಹಾಗೂ ಎರಡನೇ ಹಂತದಲ್ಲಿ ವೈಟ್‌ಫೀಲ್ಡ್‌ನಿಂದ ತುಮಕೂರು ರಸ್ತೆ (ಸುಮಾರು 65 ಕಿ.ಮೀ.)ಗೆ ಪೆರಿಫೆರಲ್ ರಿಂಗ್ ರೋಡ್‌ನಲ್ಲಿ ಪಿಪಿಪಿ ಮಾದರಿಯಲ್ಲಿ ಮೆಟ್ರೋ ನಿರ್ಮಿಸಲು ಸಾಧ್ಯವಿದೆ.
ಇದರಿಂದ ಯೋಜನಾ ವೆಚ್ಚದ ಹೊರೆ ಶೇ.50ರಷ್ಟು ಕಡಿಮೆ ಆಗಲಿದೆ. ಈಗಾಗಲೇ ಭೂಮಿ ಲಭ್ಯ ಇರುವುದರಿಂದ ಮೊದಲ ಹಂತ ಕೇವಲ ನಾಲ್ಕೈದು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸಬಹುದು ಎಂದು ಮೋಹನದಾಸ್ ಹೆಗ್ಡೆ ಸಲಹೆ ಮಾಡಿದ್ದಾರೆ. ಜೈಕಾದಿಂದ ಈ ಯೋಜನೆಗೆ ಸಾಲ ಪಡೆಯಬಹುದು. ಬಿಡಿಎ ಸುಪರ್ದಿಯಲ್ಲಿರುವ ನೈಸ್ ರಸ್ತೆಯಲ್ಲಿನ ಜಾಗವನ್ನು 15 ವರ್ಷಗಳ ಕಾಲ ಬಿಎಂಆರ್‌ಸಿಗೆ ಹಸ್ತಾಂತರಿಸಿ,
ಅನಂತರ ಪರಸ್ಪರ ಒಪ್ಪಂದದ ಮೇರೆಗೆ ವಾಪಸ್ ಪಡೆಯಬಹುದು. ಇದರಿಂದ ಭೂಸ್ವಾಧೀನದ ವೆಚ್ಚ ಉಳಿಯುತ್ತದೆ. ಮರಗಳನ್ನು ಕಡಿಯಬೇಕಾಗಿಲ್ಲ. ಪ್ರಯಾಣಿಕರಿಗೂ ಅನುಕೂಲ ಆಗುತ್ತದೆ. ಇನ್ನು ಖಾಸಗಿ ಸಹಭಾಗಿತ್ವ ಹೊಂದಿರುವ ಕಂಪೆನಿಗೆ ಕಾರ್ಯಾಚರಣೆ ವೆಚ್ಚದಲ್ಲಿ ಇಂತಿಷ್ಟು ಪಾಲು ನೀಡಬಹುದು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.