ದೇಶದಲ್ಲಿ ನಿಮ್ಹಾನ್ಸ್‌ಗೆ ಸಾಟಿ ಬೇರಿಲ್ಲ
Team Udayavani, Dec 9, 2018, 12:20 PM IST
ಬೆಂಗಳೂರು: ಜನರ ಆರೈಕೆ ಮಾಡುವ ವಿಚಾರದಲ್ಲಿ ನಿಮ್ಹಾನ್ಸ್ ರಾಜ್ಯವಷ್ಟೇ ಅಲ್ಲ ದೇಶದ ತುಂಬೆಲ್ಲ ಮನೆ ಮಾತಾಗಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಬಣ್ಣಿಸಿದರು.
ರಾಜ್ಯ ಮೆಡಿಕಲ್ ರೇಡಿಯಾಲಾಜಿಕಲ್ ಟೆಕ್ನಾಲಜಿಸ್ಟ್ಸ್ ಅಸೋಸಿಯೇಷನ್ ಶನಿವಾರ ನಿಮ್ಹಾನ್ಸ್ ಸಭಾಗಂಣದಲ್ಲಿ ಹಮ್ಮಿಕೊಂಡಿದ್ದ ರೇಡಿಯಾಲಾಜಿಗೆ ಸಂಬಂಧಿಸಿದ 20ನೇ ರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಆರೋಗ್ಯ ಸೇವಾ ಕ್ಷೇತ್ರದಲ್ಲಿ ನಿಮ್ಹಾನ್ಸ್ ದೇಶದ ಜನರ ಮನಗೆದ್ದಿರುವುದು ಹೆಮ್ಮೆಪಡುವ ಸಂಗತಿ ಎಂದರು.
ನಿಮ್ಹಾನ್ಸ್ ಕೇಂದ್ರ ಸರ್ಕಾರದ ಸಂಸ್ಥೆಗಳಲ್ಲಿ ಒಂದಾಗಿದ್ದು, ಬಡ ಜನರ ಸೇವೆ ಮಾಡುತ್ತಾ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡಿದೆ. ಸಂಸ್ಥೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಮತ್ತಷ್ಟು ಶ್ರಮಿಸಲಿದೆ. ಸಿಬ್ಬಂದಿ ಕೊರತೆ ಸೇರಿದಂತೆ ಹಲವು ವಿಚಾರಗಳನ್ನು ನಿರ್ದೇಶಕರು ತಮ್ಮ ಗಮನಕ್ಕೆ ತಂದಿದ್ದು ಇದನ್ನು ಸಂಬಂಧ ಪಟ್ಟ ಸಚಿವರ ಗಮನಕ್ಕೆ ತರುವ ಭವರಸೆ ನೀಡಿದರು.
ಆರೋಗ್ಯ ಕ್ಷೇತ್ರದ ಸುಧಾರಣೆಗೆ ಆದ್ಯತೆ: ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಈಗಾಗಲೇ ಆರೋಗ್ಯ ಕ್ಷೇತ್ರದ ಪ್ರಗತಿಗೆ ಹಲವು ಯೋಜನೆಗಳನ್ನು ರೂಪಿಸಿರುವ ಕೇಂದ್ರ ಸರ್ಕಾರ, ಬಡವರ ಒಳಿತಿಗಾಗಿ ಮಾನಸಿಕ ಆರೋಗ್ಯ ಆರೈಕೆ ಮಸೂದೆಯನ್ನು ಜಾರಿಗೆ ತಂದಿದೆ.
ದೇಶದ ಬಡವರಿಗೆ ಆರೋಗ್ಯ ಸವಲತ್ತುಗಳು ಸಿಗಬೇಕು ಎಂಬುದು ಸರ್ಕಾರದ ಆಶಯವಾಗಿದ್ದು, ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆ ಮಸೂದೆ ಸಂಸತ್‌ನಲ್ಲಿ ಚರ್ಚೆಯಾಗಿ ಜಾರಿಯಾಗುವ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಹಲವು ವರ್ಷಗಳಲ್ಲಿ ರೇಡಿಯಾಲಜಿ ಕ್ಷೇತ್ರ ಸಾಕಷ್ಟು ಪ್ರಗತಿ ಸಾಧಿಸಿದ್ದು, ಎಕ್ಸ್‌ರೇ, ಸಿಟಿ ಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್, ತಂತ್ರಜ್ಞಾನದಲ್ಲೂ ಅಭಿವೃದ್ಧಿ ಕಂಡಿದೆ.
ಡಿಜಿಟಲ್ ತಂತ್ರಜ್ಞಾನವನ್ನು ಹೆಚ್ಚು ಬಳಕೆ ಮಾಡಿಕೊಂಡು ಜನರಿಗೆ ಮತ್ತಷ್ಟು ಉತ್ತಮ ಸೇವೆ ನೀಡುವಂತೆ ಮನವಿ ಮಾಡಿದರು. ಶಾಸಕ ರಾಮಲಿಂಗಾರೆಡ್ಡಿ ಮಾತನಾಡಿ, ನಿಮ್ಹಾನ್ಸ್ ಬಡಜನರ ಸೇವೆ ಮಾಡುತ್ತಾ ಸಾರ್ವಜನಿಕ ಕ್ಷೇತ್ರದಲ್ಲಿ ನಂಬಿಕೆ ಉಳಿಸಿಕೊಂಡಿದೆ. ಆರೋಗ್ಯ ಕ್ಷೇತ್ರದಲ್ಲಿನ ಈ ಸೇವೆ ಹೀಗೆ ಮುಂದುವರಿಯಲಿ ಎಂದು ಆಶಿಸಿದರು.
ಮಣಿಪಾಲ್ ಆಸ್ಪತ್ರೆಯ ಚೇರ್ಮನ್ ಡಾ.ಎಚ್.ಸುದರ್ಶನ್ ಬಲ್ಲಾಳ್ ಮಾತನಾಡಿ, ರೇಡಿಯಾಲಾಜಿ ಕ್ಷೇತ್ರ ಕಳೆದ ಇಪ್ಪತ್ತು ವರ್ಷಗಳಲ್ಲಿ ಸಾಕಷ್ಟು ಪ್ರಗತಿಯಾಗಿದೆ. ವಿದೇಶಕ್ಕೆ ಹೋಲಿಸಿದರೆ ರೇಡಿಯಾಲಾಜಿ ಕ್ಷೇತ್ರದಲ್ಲಿ ಭಾರತ ಅಷ್ಟೊಂದು ಅಭಿವೃದ್ಧಿ ಸಾಧಿಸಿಲ್ಲ. ಕ್ಷೇತ್ರಕ್ಕೆ ಸಂಬಂಧಿಸಿ ಹಲವು ಪರಿಕರಗಳು ಭಾರತದಲ್ಲೇ ಉತ್ಪಾದನೆಯಾಗುವ ವಾತಾವರಣ ನಿರ್ಮಾಣವಾಗಬೇಕಿದೆ ಎಂದರು.
ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ಸುಮಾರು ಒಂದು ಸಾವಿರಕ್ಕೂ ಅಧಿಕ ಮಂದಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಿಮ್ಹಾನ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಬಿ.ಎನ್.ಗಂಗಾಧರ್, ಮುಖ್ಯಸ್ಥ ಪ್ರೊ.ಅರುಣ್ ಕುಮಾರ್ ಗುಪ್ತಾ, ಎಸ್.ಎ. ವಜೀದ್, ಮಣಿಪಾಲ್ ಆಸ್ಪತ್ರೆಯ ಪ್ರೊ.ಬಿ.ವೈ.ಟಿ.ಆರ್ಯ, ಎಂ.ಎಸ್.ರಾಮಯ್ಯ ಆಸ್ಪತ್ರೆಯ ಡಾ.ಉಮೇಶ್, ಎಂ.ಆರ್. ರಾಮಚಂದ್ರ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.