ಸಂತ್ರಸ್ತೆಯರಿಗೆ ನಿರ್ಭಯ ಕೇಂದ್ರ ಅಭಯ
Team Udayavani, Apr 12, 2022, 1:45 PM IST
ಬೆಂಗಳೂರು: ಕೌಟುಂಬಿಕ ಕಲಹ, ಮಾನಸಿಕ ಹಿಂಸೆ ಮುಂತಾದ ತೊಂದರೆಗಳನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಿರ್ಭಯ ಕೇಂದ್ರವು “ಆಶ್ರಯ’ವಾಗಿದೆ.
ನಿರ್ಭಯಾ ನಿಧಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತುಬೆಂಗಳೂರು ನಗರ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಳೆದ ಫೆಬ್ರವರಿ ಮೆಜೆಸ್ಟಿಕ್‌ನಲ್ಲಿ ನಿರ್ಭಯ ಕೇಂದ್ರ ಸಖಿ ಒನ್ ಸ್ಟಾಪ್ ಸೆಂಟರ್ ಸ್ಥಾಪಿಸಲಾಗಿದ್ದು, ನಿತ್ಯ ಎರಡರಿಂದ ಐದು ಪ್ರಕರಣಗಳು ದಾಖಲಾಗುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಸಖಿ ಒನ್‌ಸ್ಟಾಪ್ ಈ ಹಿಂದೆ 2019ರಲ್ಲಿ ಸ್ಥಾಪನೆಯಾಗಿ ಕಾರ್ಯನಿರ್ವಹಿಸುತ್ತಿದೆ.
ಇದೀಗ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಆಶ್ರಯ ಕಲ್ಪಿಸಿ ಅಗತ್ಯ ನೆರವು ನೀಡಲು ನಿರ್ಭಯ ಕೇಂದ್ರ ಆರಂಭಿಸಲಾಗಿದೆ. ಈ ಕೇಂದ್ರಕ್ಕೆ ಬರುವವರಲ್ಲಿ ಕೌಟುಂಬಿಕ ಹಿಂಸೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಇಲ್ಲಿ ವಸತಿ ಕೋರಿ ಬಂದವರಿಗೆ ಐದು ದಿನಗಳ ಕಾಲ ಊಟ ಹಾಗೂ ವೈದ್ಯಕೀಯ ವ್ಯವಸ್ಥೆ ಸಹಿತ ಉಳಿದುಕೊಳ್ಳುವ ಅವಕಾಶ ಕಲ್ಪಿಸಲಾಗುತ್ತಿದೆ.
ಐದು ದಿನಗಳ ನಂತರ ಕೌನ್ಸೆಲಿಂಗ್ ಮಾಡಿ ಮನೆಗೆ ಹೋಗಲು ಇಚ್ಛಿಸಿದರೆ ಕಳುಹಿಸಲಾಗುತ್ತದೆ. ಇಲ್ಲದಿದ್ದರೆ ಅವರ ಸಮಸ್ಯೆಗಳಿಗೆ ಅನುಗುಣವಾಗಿ ಸಂತ್ರಸ್ತರನ್ನು ಸ್ವಾಧಾರ ಗೃಹಗಳಿಗೆ ಕಳುಹಿಸಿಕೊಡಲಾಗುತ್ತಿದೆ. ಈ ಕೇಂದ್ರ ಆರಂಭವಾಗಿ ಒಂದೂವರೆ ತಿಂಗಳು ಪೂರೈಸಿದ್ದು ಇದುವರೆಗೆ ವಸತಿ ಆಶಿಸಿ ಶೇ.50ರಷ್ಟು ಬಂದಿರುವ ಪ್ರಕರಣಗಳಾದರೆ, ಕೌಟುಂಬಿಕ ಹಿಂಸೆಯಿಂದ ಶೇ.30ರಷ್ಟು ಹಾಗೂ ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳು ಶೇ.6ರಿಂದ 7ರಷ್ಟು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಕೇಂದ್ರದಲ್ಲಿ ಸಿಬ್ಬಂದಿ ದಿನದ 24 ಗಂಟೆಯೂ ನಿರ್ಭಯ ಕೇಂದ್ರ ತೆರೆದಿದ್ದು, ಇಲ್ಲಿ ಒಬ್ಬ ಕಾರ್ಯ ನಿರ್ವಾ ಹಕ, ಮೂವರು ನರ್ಸ್, ಸಾಮಾಜಿಕ ಕಾರ್ಯಕರ್ತರೆಯರು, ಆಪ್ತಸಮಾಲೋಚಕರು, ಕಾನೂನು ಸಲಹೆಗಾರರು, ಸಬ್‌ಇನ್‌ಸ್ಪೆಕ್ಟರ್, ಪೊಲೀಸ್ ಕಾನ್ಸ್ ಸ್ಟೆಬಲ್, ಸಹಾಯಕರು ಮತ್ತು ಭದ್ರತಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳುತ್ತಾರೆ.
ನಿರ್ಭಯ ಕೇಂದ್ರದ ಕಾರ್ಯ ನಿರ್ವಹಣೆ : ಎಫ್ಐಆರ್ ದಾಖಲಾಗುವ ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹಿಳೆಯರನ್ನು ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ತನಿಖೆ ಮಾಡಬೇಕೆಂಬ ನಿಮಯವಿದೆ. ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಇಲ್ಲದಿದ್ದರೆ, ಅಂತಹ ಪೊಲೀಸ್ ಠಾಣೆಗಳು ನಿರ್ಭಯ ಕೇಂದ್ರಕ್ಕೆ ಕಳುಹಿಸುತ್ತಿವೆ.
ಆಗ ನಿರ್ಭಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತಾರೆ. ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲದ ಸಂದರ್ಭದಲ್ಲಿ ಈ ಕೇಂದ್ರದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಸಮ್ಮುಖದಲ್ಲಿ ಹೇಳಿಕೆ ನೀಡಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ವಿಧಿವಿಜ್ಞಾನ ವೈದ್ಯಕೀಯ ಪರೀಕ್ಷೆ ಹಾಗೂ ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆಯೂ ಇಲ್ಲಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಈ ಕೇಂದ್ರ ಆರಂಭ ವಾಗಿದ್ದು, ಮಹಿಳೆಯರಿಗೆ ಮತ್ತು ಮಕ್ಕಳ ಪ್ರಕರಣಗಳಿಗೆ ತುಂಬಾ ಸಹಾಯಕವಾಗಿದೆ. ಸದ್ಯದಲ್ಲಿ ಎಫ್ಐಆರ್ ತನಿಖೆ, ನ್ಯಾಯಾಲಯ ವಿಷಯಗಳು ಮತ್ತು ಲೈಂಗಿಕ ಕಿರು ಕುಳ ಪ್ರಕರಣಗಳು ವಿಚಾರಣೆಯಲ್ಲಿ ನೆರವಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಯ ನಿರ್ವಹಿಸಲು ಚಿಂತನೆ ನಡೆದಿದೆ. –ಲಕ್ಷ್ಮೀ ಮೆಂಡಿಗೇರಿ,ಮಹಿಳಾ ಸಬ್‌ಇನ್‌ಸ್ಪೆಕ್ಟರ್
–ಭಾರತಿ ಸಜ್ಜನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.