Adani ಜತೆಗಿನ ವಾಣಿಜ್ಯ ಒಪ್ಪಂದ ರದ್ದುಪಡಿಸಲಿ:ಕಾಂಗ್ರೆಸ್‌ಗೆ ಕೇಂದ್ರ ವಿತ್ತ ಸಚಿವೆ ಸವಾಲು
Team Udayavani, Apr 7, 2023, 7:42 AM IST
ಬೆಂಗಳೂರು: ಸಾಮರ್ಥ್ಯವಿದ್ದರೆ ಅದಾನಿ ಸಮೂಹ ಸಂಸ್ಥೆಯ ಜತೆಗೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಮಾಡಿಕೊಂಡಿರುವ ವಾಣಿಜ್ಯ ಒಪ್ಪಂದಗಳನ್ನು ರದ್ದುಪಡಿಸಲಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸವಾಲು ಹಾಕಿದ್ದಾರೆ.
ಅದಾನಿ ಕಂಪೆನಿಗೆ ಕೇಂದ್ರ ಸರಕಾರ ಯಾವುದೇ ಸಹಾಯ ಮಾಡಿಲ್ಲ. ಆದಾಗಿಯೂ ನಿರಾಧಾರ ಆರೋಪ ಮಾಡುವುದನ್ನು ಕಾಂಗ್ರೆಸ್ ನಿಲ್ಲಿಸಿಲ್ಲ. ಸುಳ್ಳನ್ನೇ ಸತ್ಯವಾಗಿಸುವ ಹುನ್ನಾರವನ್ನು ಅತ್ಯಂತ ವ್ಯವಸ್ಥಿತವಾಗಿ ಕಾಂಗ್ರೆಸ್ ನಡೆಸುತ್ತಿದೆ ಎಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಆರೋಪಿಸಿದರು.
ಛತ್ತೀಸ್‌ಗಢ, ಕೇರಳ, ರಾಜಸ್ಥಾನ ಸೇರಿ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಯೋಜನೆಗಳ ಅನುಷ್ಠಾನಕ್ಕಾಗಿ ಅದಾನಿ ಕಂಪೆನಿ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಇಬ್ಬಗೆಯೆ ನಡೆ ಏಕೆಂದು ಕಾಂಗ್ರೆಸ್ ನಾಯಕರೇ ತಿಳಿಸಬೇಕು. ಎಲ್ಲ ವಿಷಯಗಳ ಬಗ್ಗೆ ಪ್ರಶ್ನಿಸುವುದಕ್ಕೆ ಮತ್ತು ಉತ್ತರ ಪಡೆಯುವುದಕ್ಕೆ ವಿಪಕ್ಷಗಳಿಗೆ ಅಧಿಕಾರವಿದೆ.
ಆದರೆ ಅಧಿವೇಶನದಲ್ಲಿ ಅಸಂಸದೀಯ ಪದ ಬಳಕೆ, ಗದ್ದಲವೆಬ್ಬಿಸುವುದು, ಸರಕಾರ ಉತ್ತರಿಸಲು ಮುಂದಾದಾಗ ಸಭಾತ್ಯಾಗವನ್ನು ಕಾಂಗ್ರೆಸ್ ಮಾಡುತ್ತಿದೆ. ಇದು ಸಂಸದೀಯ ನಡೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹಾಸ್ಯಾಸ್ಪದ
ಕ್ಷಮೆ ಕೇಳುವುದಕ್ಕೆ ನಾನು ವೀರ ಸಾವರ್ಕರ್ ಅಲ್ಲ ಎಂದು ರಾಹುಲ್ ಗಾಂಧಿ ತಮ್ಮನ್ನು ತಾವು ವಿಜೃಂಭಿಸಿಕೊಂಡಿದ್ದಾರೆ. ಗಾಂಧೀಜಿಯನ್ನು ಕೊಂದದ್ದು ಆರೆಸ್ಸೆಸ್ ಎಂಬ ಹೇಳಿಕೆ ನೀಡಿ ಅನಂತರ ಸುಪ್ರೀಂ ಕೋರ್ಟ್‌ನಲ್ಲಿ ಲಿಖೀತ ಕ್ಷಮಾಪಣೆ ಪತ್ರ ಬರೆದುಕೊಟ್ಟದ್ದನ್ನು ಅವರು ಮರೆತಿದ್ದಾರೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪದೇಪದೆ ರಫೇಲ್ ಯುದ್ಧ ವಿಮಾನ ಖರೀದಿ ಬಗ್ಗೆ ಆಪಾದಿಸಿದ್ದರು. ಈ ಆರೋಪವನ್ನೂ ಸಾಬೀತುಪಡಿಸಲಾಗದೆ ಕ್ಷಮೆ ಕೋರಿದರು. ಇಂತಹವರು ಸಾವರ್ಕರ್ ಬಗ್ಗೆ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.
ಕರ್ನಾಟಕಕ್ಕೆ ಆದ್ಯತೆ
ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದು ಕಾಂಗ್ರೆಸ್. ಆದರೆ ರಾಹುಲ್ ಗಾಂಧಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಆರೋಪಿಸುತ್ತಿದ್ದಾರೆ. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಹಿರಿಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಎಲ….ಕೆ. ಆಡ್ವಾಣಿ ಹಾಗೂ ಇನ್ನಿತರರನ್ನು ಬೆಂಗಳೂರಿನ ಜೈಲಿನಲ್ಲಿ ಬಂಧಿಸಿಡಲಾಗಿತ್ತು. ಈ ಕಾರಣಕ್ಕೆ ಬೆಂಗಳೂರಿನೊಂದಿಗೆ ಬಿಜೆಪಿ ಭಾವನಾತ್ಮಕ ಸಂಬಂಧ ಹೊಂದಿದೆ ಎಂದರು.
ತೆರಿಗೆ ಎಲ್ಲರಿಗೂ ನೋವಿನ ವಿಚಾರ: ನಿರ್ಮಲಾ
ಬೆಂಗಳೂರು: ತೆರಿಗೆ ಅಂದರೆ ಎಲ್ಲರಿಗೂ ನೋವಿನ ವಿಚಾರ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಬಿಜೆಪಿ ಪ್ರಣಾಳಿಕೆ ಅಭಿಯಾನದ ಹಿನ್ನೆಲೆಯಲ್ಲಿ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಉದ್ದಿಮೆದಾರರ ರೆಸಿಡೆನ್ಸಿ ಅಸೋಸಿಯೇಶನ್, ಚಾರ್ಟರ್ಡ್ ಅಕೌಂಟೆಂಟ್ಸ್ ಹಾಗೂ ಬ್ಯಾಂಕರ್ಗಳ ಜತೆ ಸಮಾಲೋಚನೆ ನಡೆಸಿದರು. ಡೇಕೇರ್ ಕೇಂದ್ರಗಳ ಮೇಲಿನ ಜಿಎಸ್ಟಿ ಸೇರಿ ಮತ್ತಿತರ ವಲಯಗಳ ಮೇಲಿನ ಜಿಎಸ್ಟಿ ಇಳಿಕೆ ಕುರಿತಂತೆ ಮಾಡಲಾದ ಮನವಿಗೆ ಪ್ರತಿಕ್ರಿಯಿಸಿ, ತೆರಿಗೆ ಅಂದರೆ ಎಲ್ಲರಿಗೂ ನೋವು ಎಂದು ಹೇಳುವ ಮೂಲಕ ಸಭೆಯನ್ನು ನಗೆಗಡಲಲ್ಲಿ ತೇಲಿಸಿದರು.
ರೆರಾ ಕಾಯ್ದೆ ಜಾರಿಯ ತೊಡಕು , ತೆರಿಗೆ ಸಂದಾಯ ಸೇರಿದಂತೆ ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಅಪಾರ್ಟ್‌ಮೆಂಟ್ ನಿವಾಸಿಗಳು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಈ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಕೇಂದ್ರ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುವ ಭರವಸೆ ನೀಡಿದರು.
ಆರೋಗ್ಯ ಸಚಿವ ಡಾ| ಸುಧಾಕರ್ ಮಾತನಾಡಿ, ಬಿಜೆಪಿ ಪ್ರಣಾಳಿಕೆ ಇತರ ಪಕ್ಷಗಳಂತೆ ರಾಜಕೀಯ ಪ್ರೇರಿತವಾಗಿರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.