![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Feb 22, 2021, 9:15 PM IST
ಬೆಂಗಳೂರು : ಒಕ್ಕಲಿಗರಿಗೆ ಪ್ರ ವರ್ಗ 3ಎನಲ್ಲಿ ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕು ಹಾಗೂ ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ರಚಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಮುಖ್ಯಮಂತ್ರಿಗಳಿಗೆ ಬರೆದಿರುವ ಎರಡು ಪ್ರತ್ಯೇಕ ಮನವಿಗಳನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್ ಅವರು ಸ್ವೀಕರಿಸಿದರು.
ಇಂದು (ಫೆ.22) ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮತ್ತು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯಿಂದ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಕ್ರೀಡಾ ಸಚಿವ ನಾರಾಯಣಗೌಡ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಹೋರಾಟ ಸಮಿತಿಯ ಅಧ್ಯಕ್ಷ ಡಾ. ವೈ.ಕೆ.ಪುಟ್ಟಸೋಮೇಗೌಡ, ಸದಸ್ಯರು ಹಾಗೂ ಆದಿಚುಂಚನಗಿರಿ ಶಾಖಾಮಠ ಸ್ವಾಮೀಜಿಯವರು ಉಪಸ್ಥಿತರಿದ್ದರು.
You seem to have an Ad Blocker on.
To continue reading, please turn it off or whitelist Udayavani.