ವಸೀಂ ಅಹ್ಮದ್‌ಗಿಲ್ಲ ಜಾಮೀನು

Team Udayavani, Jan 26, 2019, 4:39 AM IST

rudresh.jpg

ಬೆಂಗಳೂರು: ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಹತ್ಯೆ ಪ್ರಕರಣದ ಎರಡನೇ ಆರೋಪಿ ವಸೀಂ ಅಹಮದ್‌ ಮೂರು ತಿಂಗಳ ತಾತ್ಕಾಲಿಕ ಜಾಮೀನು ನೀಡಲು ಎನ್‌ಐಎ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ವಸೀಂ ಅಹಮದ್‌, ಎಡಕಾಲಿನ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಲುವಾಗಿ ಮೂರು ತಿಂಗಳ ಅವಧಿಗೆ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಆರೋಪಿ ವಸೀಂ ಅಹಮದ್‌ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿರುವ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು, ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಆರೋಪಿ ವಿರುದ್ಧ ಗಂಭೀರ ಆರೋಪವಿದೆ. ಜತೆಗೆ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡುವ ನುರಿತ ವೈದ್ಯರಿಲ್ಲ. ಜತೆಗೆ, ಯಂತ್ರೋಪಕರಣಗಳಿಲ್ಲ ಎಂಬ ಅರ್ಜಿದಾರರ ವಾದವನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಜಾಮೀನು ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿದೆ.ಆರೋಪಿ ಮೊಣಕಾಲು ಶಸ್ತ್ರಚಿಕಿತ್ಸೆೆ ಸಂಬಂಧಿಸಿದಂತೆ ಮುಂದಿನ ಹತ್ತುದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ನ್ಯಾಯಾಧೀಶರು ನಿರ್ದೇಶಿಸಿದ್ದಾರೆ.

ಎನ್‌ಐಎ ಪರ ವಿಶೇಷ ಅಭಿಯೋಜಕರಾಗಿ ಪಿ. ಪ್ರಸನ್ನ ಕುಮಾರ್‌ ವಾದ ಮಂಡಿಸಿದ್ದರು. ಆರೋಪಿ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ಪ್ರತಿಬಂಧಕ ಕಾಯಿದೆ ಅನ್ವಯ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ರುದ್ರೇಶ್‌ರನ್ನು ಮಚ್ಚಿನಿಂದ ಹೊಡೆದ ಆರೋಪಿ ಇವರೇ ಆಗಿದ್ದಾರೆ.ಆರೋಪಿ ಮೊಣಕಾಲಿನ ಶಸ್ತ್ರಚಿಕಿತ್ಸೆ ಅಗತ್ಯವಿದೆ.ಆದರೆ, ಅವರ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. ಆರೋಪಿಗಳ ಸಂಚು ಬರೀ ರುದ್ರೇಶ್‌ರನ್ನು ಹತ್ಯೆ ಮಾಡುವುದಷ್ಟೇ ಅಲ್ಲದೆ ಹಿಂದೂ ಮುಖಂಡರನ್ನು ಹತ್ಯೆಗೈಯುವ ಸಂಚು ರೂಪಿಸಿದ್ದರು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಆರೋಪಿಗೆ ಜಾಮೀನು ನೀಡಬಾರದು ಎಂದು ನ್ಯಾಯಾಲಕ್ಕೆ ಮನವಿ ಮಾಡಿದ್ದರು.

ಕಮರ್ಷಿಯಲ್‌ ಸ್ಟ್ರೀಟ್‌ನ ಶಿವಾಜಿ ಸರ್ಕಲ್‌ನಲ್ಲಿ 2016 ಅ. 16ರಂದು ನಡೆದ ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಅವರ ಭೀಕರ ಹತ್ಯೆ ನಡೆದಿತ್ತು. ಎನ್‌ಐಎ ಪಿಎಫ್ಐ ಸಂಘಟನೆಯ ಐವರು ಆರೋಪಿಗಳಾದ ಇರ್ಫಾನ್‌ ಪಾಶಾ, ವಸೀಂ ಅಹಮದ್‌, ಮೊಹಮದ್‌ ಸಾದಿಕ್‌, ಮೊಹಮದ್‌ ಮುಜೀಬುಲ್ಲಾ ಹಾಗೂ ಆಸೀಂ ಷರೀಪ್‌ ಅವರನ್ನು ಬಂಧಿಸಲಾಗಿತ್ತು.

ಟಾಪ್ ನ್ಯೂಸ್

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.