ಬೆಂಗಳೂರು ಕೇಂದ್ರ, ಉತ್ತರ ವಿವಿ ಯಾರಿಗೂ ಬೇಡ
Team Udayavani, Jul 21, 2018, 10:45 AM IST
ಬೆಂಗಳೂರು: ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಬೆಂಗಳೂರು ವಿಶ್ವವಿದ್ಯಾಲಯ ತ್ರಿಭಜನೆ ಮಾಡಿದ್ದರೂ, ಹೊಸದಾಗಿ ಹುಟ್ಟಿಕೊಂಡಿರುವ ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ವಿವಿಯಲ್ಲಿನ ಸ್ನಾತಕೋತ್ತರ ಕೋರ್ಸ್ ಸೇರಿಕೊಳ್ಳಲು ವಿದ್ಯಾರ್ಥಿಗಳು ಮನಸ್ಸು ಮಾಡುತ್ತಿಲ್ಲ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬೆಂಗಳೂರು ಉತ್ತರ ಮತ್ತು ಬೆಂಗಳೂರು ಕೇಂದ್ರ ವಿವಿಯಲ್ಲಿ ವಿವಿಧ ಸ್ನಾತಕೋತ್ತರ ಕೋರ್ಸ್ಗಳು ಆರಂಭಿಸಲಾಗುತ್ತಿದೆ. ಬೆಂಗಳೂರು ವಿವಿ ಸಹಿತವಾಗಿ ಮೂರು ವಿವಿಗಳು ತಮ್ಮ ವ್ಯಾಪ್ತಿಯ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಿದೆ. ಇಷ್ಟಾದರೂ ಬೆಂಗಳೂರು ಉತ್ತರ ಮತ್ತು ಬೆಂಗಳೂರು ಕೇಂದ್ರ ವಿವಿ ವ್ಯಾಪ್ತಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಸೇರಿಕೊಳ್ಳಲು ಇಚ್ಛಿಸುತ್ತಿದ್ದಾರೆ.
ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗದ ವಿವಿಧ ಸ್ನಾತಕೋತ್ತರ ಕೋರ್ಸ್ಗಳನ್ನು ಮೂರು ವಿವಿಗಳು ಪ್ರಸಕ್ತ ಸಾಲಿನಿಂದ ನೀಡುತ್ತಿವೆ. ಬೆಂಗಳೂರು ಕೇಂದ್ರ ವಿವಿಯ ಆಡಳಿತ ಕಚೇರಿ ಸೆಂಟ್ರಲ್ ಕಾಲೇಜಿನಲ್ಲಿದ್ದು, ಬೆಂ.ಉತ್ತರ ವಿವಿಯ ಆಡಳಿತ ಕಚೇರಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟಮಕದಲ್ಲಿದೆ. ಮೂರು ವಿವಿ ವ್ಯಾಪ್ತಿಗೂ ತಲಾ 250 ಕಾಲೇಜುಗಳು ಸೇರಿವೆ.
ಬೆಂ.ವಿವಿಯತ್ತ ಹೆಚ್ಚಿನವರ ಚಿತ್ತ: 2018-19ನೇ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಸ್ನಾತಕೋತ್ತರ ಕೋರ್ಸ್ಗಳಿಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ. ಬೆಂಗಳೂರು ವಿವಿ ನೀಡುವ ವಿವಿಧ ಕೋರ್ಸ್ಗಳಿಗೆ 10 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಬೆಂ.ಕೇಂದ್ರ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು 3170 ಅಭ್ಯರ್ಥಿಗಳು ಅರ್ಜಿ ಹಾಕಿದ್ದು, ಬೆಂ. ಉತ್ತರ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು 1500 ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಅರ್ಜಿ ಸಲ್ಲಿಸಲು ಇನ್ನೂ ಅವಕಾಶವಿದೆ.
ಉತ್ತರ ವಿವಿಯಲ್ಲಿ ವಾಣಿಜ್ಯ ವಿಭಾಗಕ್ಕೆ ಹೆಚ್ಚಿನ ಬೇಡಿಕೆ ಇದೆ. ಕೇಂದ್ರ ವಿವಿಯಲ್ಲಿ ವಾಣಿಜ್ಯ ಮತ್ತು ವಿಜ್ಞಾನಕ್ಕೆ ಅಧಿಕ ವಿದ್ಯಾರ್ಥಿಗಳು ಸೇರಿಕೊಳ್ಳುತ್ತಿದ್ದಾರೆ. ಬೆಂಗಳೂರು ವಿವಿಯಲ್ಲಿ ವಾಣಿಜ್ಯ ಮತ್ತು ವಿಜ್ಞಾನದ ಜತೆಗೆ ಕಲಾ ವಿಭಾಗದ ವಿವಿಧ ಕೋರ್ಸ್ಗಳಿಗೂ ಬೇಡಿಕೆ ಹೆಚ್ಚಿದೆ.
ಸೌಕರ್ಯದ ಕೊರತೆ
ಬೆಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಕೋರ್ಸ್ಗಳ ಆಯ್ಕೆಗೆ ಹೆಚ್ಚಿನ ಅವಕಾಶ ಇರುವುದರಿಂದ ಅರ್ಜಿಗಳು ಜಾಸ್ತಿ ಬಂದಿವೆ. ಬೆಂ.ಕೇಂದ್ರ ಮತ್ತು ಬೆಂ.ಉತ್ತರ ವಿವಿಯಲ್ಲಿ ಅಭ್ಯರ್ಥಿಗಳಿಗೆ ಕೋರ್ಸ್ ಆಯ್ಕೆ ಸೀಮಿತವಾಗಿದೆ. ಹೊಸ ವಿವಿ ಆಗಿರುವುದರಿಂದ ಮೂಲ ಸೌಕರ್ಯ ಸೇರಿದಂತೆ ಎಲ್ಲ ಅವಶ್ಯಕತೆಗಳು, ಬೋಧಕ, ಬೋಧಕೇತರ ಸಿಬ್ಬಂದಿ ಕೂಡ ಪೂರ್ಣ ಪ್ರಮಾಣದಲ್ಲಿ ಇಲ್ಲ. ಸರ್ಕಾರ ಇನ್ನೂ ಪೂರ್ಣ ಪ್ರಮಾಣದ ಅನುದಾನ ನೀಡಿಲ್ಲ. ಹೀಗಾಗಿ ಹೊಸ ವಿವಿ ಸೇರಿಕೊಳ್ಳಲು ವಿದ್ಯಾರ್ಥಿಗಳು ಹಿಂಜರಿಯುತ್ತಿದ್ದಾರೆ.
ಕೋಲಾರ ಸ್ನಾತಕೋತ್ತರ ಕೇಂದ್ರಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬೆಂ.ಉತ್ತರ ವಿವಿ ವ್ಯಾಪ್ತಿಯ ಪಿಜಿ ಕೋರ್ಸ್ಗಳ ಸೀಟ್ ಮ್ಯಾಟ್ರಿಕ್ಸ್ ಅನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದ್ದೇವೆ. ಇನ್ನಷ್ಟು ಅರ್ಜಿ ಬರುವ ನಿರೀಕ್ಷೆ ಇದೆ.
ಡಾ.ಟಿ.ಡಿ.ಕೆಂಪರಾಜು, ಬೆಂ.ಉತ್ತರ ವಿವಿ ಕುಲಪತಿ
ಶೈಕ್ಷಣಿಕ ಗುಣಮಟ್ಟದ ದೃಷ್ಟಿಯಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದಷ್ಟು ಒಳ್ಳೆಯದು. ಹೊಸ ವಿವಿಗಳು ಸಮರ್ಥವಾಗಿ ಬೆಳೆಯಲು ಇನ್ನೂ ಕೆಲವು ವರ್ಷ ಬೇಕಾಗುತ್ತದೆ.
ಪ್ರೊ.ಕೆ.ಆರ್.ವೇಣುಗೋಪಾಲ್, ಬೆಂಗಳೂರು ವಿವಿ ಕುಲಪತಿ
ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.