ಬಸ್ ಪ್ರಯಾಣದರ ಏರಿಕೆ ಇಲ್ಲ
Team Udayavani, Jun 21, 2018, 6:00 AM IST
ಬೆಂಗಳೂರು: ನಷ್ಟ ಭರಿಸಲು ಶೇ. 15ರಷ್ಟು ಪ್ರಯಾಣದರ ಹೆಚ್ಚಳ ಮಾಡಬೇಕು ಎಂಬ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದರೂ ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.
ಆದರೆ, ನಷ್ಟ ಕಡಿಮೆ ಮಾಡಲು ಮತ್ತು ಆದಾಯ ಹೆಚ್ಚಿಸಲು ಅನಗತ್ಯ ವೆಚ್ಚಕ್ಕೆ ಕಡಿವಾಣ, ಬಸ್ ನಿಲ್ದಾಣಗಳ ವಾಣಿಜ್ಯೀಕರಣ ಮುಂತಾದ ಪರ್ಯಾಯ ಮಾರ್ಗಗಳನ್ನು ಅನುಸರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಂಸ್ಥೆಗಳು ಸುಮಾರು 500 ಕೋಟಿ ರೂ. ನಷ್ಟದಲ್ಲಿದ್ದು, ಶೇ. 15ರಷ್ಟು ಪ್ರಯಾಣದರ ಏರಿಸಬೇಕು ಎಂದು ನಿಗಮಗಳು ಪ್ರಸ್ತಾವನೆ ಸಲ್ಲಿಸಿವೆ. ಆದರೆ, ಹೊಸ ಸರ್ಕಾರ ಈಗ ತಾನೇ ಅಧಿಕಾರಕ್ಕೆ ಬಂದಿರುವುದರಿಂದ ಸದ್ಯಕ್ಕೆ ಪ್ರಯಾಣದರ ಏರಿಕೆ ಬೇಡ ಎಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ವೈಯಕ್ತಿಕವಾಗಿ ನನಗಂತೂ ಬಸ್ ಪ್ರಯಾಣ ದರ ಏರಿಕೆ ಪ್ರಯಾಣಿಕರ ಮೇಲೆ ಹೊರೆ ಹಾಕುವುದು ಇಷ್ಟವಿಲ್ಲ ಎಂದರು.
ಈ ಮಧ್ಯೆ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ ನಷ್ಟ ಕಡಿಮೆ ಮಾಡಲು ಮತ್ತು ಬಸ್ ನಿಲ್ದಾಣಗಳನ್ನು ವಾಣಿಜ್ಯೀಕರಣಗೊಳಿಸಿ ಆದಾಯ ಹೆಚ್ಚಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲಾಗುವುದು. ನಿಲ್ದಾಣಗಳ ವಾಣಿಜ್ಯೀಕರಣದಿಂದಲೇ ಸಾರಿಗೆ ಸಂಸ್ಥೆಗಳಿಗೆ ವಾರ್ಷಿಕ 100ರಿಂದ 200 ಕೋಟಿ ರೂ. ಆದಾಯ ಹೆಚ್ಚಳವಾಗುವ ಅಂದಾಜು ಮಾಡಲಾಗಿದೆ ಎಂದು ವಿವರಿಸಿದರು.
ಉಚಿತ ಬಸ್ ಪಾಸ್:
ಪ್ರಸ್ತುತ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇರುವ ಉಚಿತ ಬಸ್ ಪಾಸ್ ಸೌಲಭ್ಯವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ವಿತರಿಸಲು ಸರ್ಕಾರ ಬದ್ಧವಾಗಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮತ್ತೂಮ್ಮೆ ಈ ಕುರಿತು ಚರ್ಚಿಸಲಾಗುವುದು. ಈ ನಿರ್ಧಾರ ಕೈಗೊಂಡರೆ ಸುಮಾರು 19.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಿಸಬೇಕಿದ್ದು, ಇದರಿಂದ 620 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದರು.
ಪ್ರಸ್ತುತ ರಿಯಾಯಿತಿ ದರದ ಬಸ್ ಪಾಸ್‌ಗಳಿಂದ ಆಗುವ ಹೊರೆ ಪೈಕಿ ಶೇ. 50 ರಷ್ಟು ಹಣವನ್ನು ರಾಜ್ಯ ಸರ್ಕಾರ, ಶೇ.25 ರಷ್ಟು ಹಣವನ್ನು ಸಾರಿಗೆ ನಿಗಮಗಳು ಹಾಗೂ ಶೇ.25 ರಷ್ಟು ಹಣವನ್ನು ಫಲಾನುಭವಿ ಭರಿಸುತ್ತಿದ್ದಾರೆ. ಉಚಿತ ಬಸ್ಸು ಪಾಸಿಗಾಗಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿಯಿಂದ ಶೇ.25 ರ ಬದಲಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೇ.35-40 ರಷ್ಟು ಹಣ ಒದಗಿಸಲು ನಾವು ಸಿದ್ಧರಿದ್ದೇವೆ. ಇದರಿಂದ ಪ್ರತಿ ವರ್ಷ 100 ಕೋಟಿ ರು. ಹೆಚ್ಚುವರಿ ಹೊರೆ ಬೀಳಲಿದೆ. ಆದರೂ ತಲೆಕೆಡಿಸಿಕೊಳ್ಳುವುದಿಲ್ಲ. ಹೀಗಾಗಿ ಆದರೆ, ರಾಜ್ಯ ಸರ್ಕಾರದ ಪಾಲು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯ ಕಾರ್ಯಕ್ರಮವಾದ್ದರಿಂದ ಶಿಕ್ಷಣ ಇಲಾಖೆಯು ಅನುದಾನ ನೀಡಿ ಕೈ ಜೋಡಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.